Sunday, November 24, 2024

ರಾಜ್ಯ

ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿ

ನಿರ್ಮಲಾ ಸೀತರಾಮನ್‌, ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಎಫ್‌ಐಆರ್‌ಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್‌ – ಕಹಳೆ ನ್ಯೂಸ್

ಬೆಂಗಳೂರು, ಸೆ.30 : ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ನಾಯಕ ನಳಿನ್‌ ಕುಮಾರ್‌ ಕಟೀಲ್‌ ಸೇರಿ ಹಲವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಅ.22 ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ....
ಬೆಂಗಳೂರುರಾಜ್ಯಸಿನಿಮಾಸುದ್ದಿ

ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ನಟ ದರ್ಶನ್​​​​ಗೆ ಭಾರೀ ಆಘಾತ, ದಾಸನಿಗೆ ಜೈಲೇ ಗತಿ! – ಕಹಳೆ ನ್ಯೂಸ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ನಟ ದರ್ಶನ್​​​ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್​ ಇಂದು ನಡೆಸಿದ್ದು ಅ.4ಕ್ಕೆ ಮುಂದೂಡಿ ಆದೇಶಿಸಿದೆ.​ ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್​​ ನ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಡಿಯೋ ಕಾನ್ಫರೆನ್ಸ್​​ ಮೂಲಕ ನಡೆಸಿರುವ 57ನೇ CCH ಕೋರ್ಟ್ ಈ ಆದೇಶವನ್ನು ನೀಡಿದೆ.   ಇನ್ನು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ದರ್ಶನ್​​ಗೆ ಮತ್ತೆ ಆಘಾತ ಆಗಿದೆ. ಜಾಮೀನು ಅರ್ಜಿಯ ವಿಚಾರಣೆ...
ಬಳ್ಳಾರಿರಾಜಕೀಯರಾಜ್ಯಸುದ್ದಿ

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್: ಪೂರ್ವಾನುಮತಿ ಇಲ್ಲದೆ ಬಳ್ಳಾರಿ ಪ್ರವೇಶಕ್ಕೆ ಅನುಮತಿ – ಕಹಳೆ ನ್ಯೂಸ್

ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಕೊನೆಗೂ ರಿಲೀಫ್ ದೊರೆತಿದೆ. ಬಳ್ಳಾರಿ ಪ್ರವೇಶಕ್ಕೆ ಅವರಿಗಿದ್ದ ನಿರ್ಬಂಧವನ್ನು ಸರ್ವೋಚ್ಚ ನ್ಯಾಯಾಲಯ ತೆರವುಗೊಳಿಸಿದೆ. ಇದರೊಂದಿಗೆ ರೆಡ್ಡಿ ಬಳ್ಳಾರಿ ಎಂಟ್ರಿ ನಿರಾಳವಾಗಿದೆ. ರೆಡ್ಡಿ ಕುರಿತು ಸುಪ್ರೀಂ ಕೋರ್ಟ್ ನೀಡಿದ ಆದೇಶದ ಮಾಹಿತಿ ಇಲ್ಲಿದೆ. ನವದೆಹಲಿ, ಸೆಪ್ಟೆಂಬರ್ 30: ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಬಳ್ಳಾರಿಗೆ ತೆರಳಲು ಅವರಿಗೆ ಸುಪ್ರೀಂಕೋರ್ಟ್ ಅನುಮತಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲು : ಎ1 ನಿರ್ಮಲಾ ಸೀತಾರಾಮನ್, ಎ4 ನಳಿನ್ ಕುಮಾರ್ ಕಟೀಲ್, ಎ5 ಬಿ.ವೈ.ವಿಜಯೇಂದ್ರ…!! – ಕಹಳೆ ನ್ಯೂಸ್

ಬೆಂಗಳೂರು: ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿರುವ ಆರೋಪಕ್ಕಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಬೆನ್ನಲ್ಲೇ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ನಿರ್ಮಲಾ ಸೀತಾರಾಮನ್‌ ಸೇರಿ ಹಲವರು ಚುನಾವಣಾ ಬಾಂಡ್‌ ಮೂಲಕ ಕೋಟ್ಯಂತರ ರೂ. ಹಣ ಸುಲಿಗೆ ಮಾಡಿದ್ದಾರೆಂದು ಆರೋಪಿಸಿ ಆದರ್ಶ್‌ ಐಯ್ಯರ್‌ ದೂರು ನೀಡಿದ್ದರು. ಪ್ರಕರಣದ ವಿಚಾರಣೆ...
ಬೆಂಗಳೂರುಬೆಳಗಾವಿರಾಜಕೀಯರಾಜ್ಯಸುದ್ದಿ

ನಾನು ಸಿಎಂ ಆದ್ರೆ ಪಾಕಿಸ್ತಾನ ಜಿಂದಾಬಾದ್ ಎನ್ನುವ ಮೊದಲೇ ಗುಂಡು ಹಾಕ್ತೀನಿ : ಯತ್ನಾಳ್​ – ಕಹಳೆ ನ್ಯೂಸ್

ಬೆಳಗಾವಿ, ಸೆಪ್ಟೆಂಬರ್​ 28: ನಾನು ಮುಖ್ಯಮಂತ್ರಿ ಆದರೆ ಪೊಲೀಸರಿಗೆ AK47 ಗನ್​ ಬಳಕೆಗೆ​​ ಅನುಮತಿ ನೀಡುವೆ. ಪಾಕಿಸ್ತಾನ ಜಿಂದಾಬಾದ್ ಎನ್ನುವ ಮೊದಲೇ ಫೈರಿಂಗ್ ಮಾಡುತ್ತೇವೆ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿದ್ದಾರೆ. ಬೈಲಹೊಂಗಲದಲ್ಲಿ ನಡೆದ ಗಣೇಶ ಮೆರವಣಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಕೈಗೆ ಅಧಿಕಾರ ಕೊಡಿ, ಅಲ್ಲಿ ಯೋಗಿ, ಇಲ್ಲಿ ನಾವು ಇರುತ್ತೇವೆ ಎಂದರು. ಮುಂದಿನ ಬಾರಿ ನಮ್ಮ ಸರ್ಕಾರ ಬಂದಾಗ ಗಣೇಶ ವಿಸರ್ಜನೆ ಮೆರವಣಿಗೆ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಏರ್ಪಡಿಸಿದ್ದಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ-2024 ; ಬೆಳ್ತಂಗಡಿ ತಾಲೂಕಿನ ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ರಾಷ್ಟ್ರೀಯ ಪ್ರಶಸ್ತಿ – ಕಹಳೆ ನ್ಯೂಸ್

ಬೆಳ್ತಂಗಡಿ: ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ-2024ರ ಸಾಹಸಿಕ ಪ್ರವಾಸಿ ತಾಣ (ಅಡ್ವೆಂಚರ್‌ ಟೂರಿಸಂ) ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮಕ್ಕೆ ಸೆ.27ರಂದು ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.   ಹೊಸದಿಲ್ಲಿಯ ವಿಜ್ಞಾನ್‌ ಭವನದಲ್ಲಿ ಜರಗಿದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಉಪಸ್ಥಿತಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕುತ್ಲೂರು ಗ್ರಾಮದ ಪರವಾಗಿ ಹರೀಶ್‌ ಡಾಕಯ್ಯ...
ಬೆಂಗಳೂರುರಾಜ್ಯಸುದ್ದಿ

ಸೆ.30ರೊಳಗೆ `E-KYĆ ಮಾಡಿಸದಿದ್ದರೇ ಮುಂದಿನ ತಿಂಗಳು ರೇಷನ್ ಸ್ಥಗಿತ -ಕಹಳೆ ನ್ಯೂಸ್

ರಾಜ್ಯ ಸರ್ಕಾರದಿಂದ ಪಡಿತರ ಚೀಟಿಗೆ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಹೀಗಿದ್ದರೂ ಇನ್ನೂ ಕೆಲವರು ಇ-ಕೆವೈಸಿ ಮಾಡಿರುವುದಿಲ್ಲ. ಇಂತಹ ಪಡಿತರ ಚೀಟಿಗಳಿಗೆ ರೇಷನ್ ನೀಡುವುದನ್ನು ಮುಂದಿನ ತಿಂಗಳಿನಿಂದ ಸ್ಥಗಿತಗೊಳಿಸುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಮಾಹಿತಿ ನೀಡಿದ್ದು, ಪ್ರತಿಯೊಂದು ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ ಎಂದಿದ್ದಾರೆ. ಸೆಪ್ಟೆಂಬರ್ ಅಂತ್ಯದೊಳಗೆ ಸಂಬಂಧಪಟ್ಟ...
ಉಡುಪಿಉತ್ತರಕನ್ನಡರಾಜ್ಯಸುದ್ದಿ

ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ : ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್! – ಕಹಳೆ ನ್ಯೂಸ್

ಬೆಂಗಳೂರು:- ಕರ್ನಾಟಕದಲ್ಲಿ ವ್ಯಾಪಕ ಮಳೆ ಆಗಿದ್ದು, ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ಕೊಟ್ಟಿದೆ.   ದಕ್ಷಿಣ ಒಳನಾಡಿನ ಸುತ್ತಮುತ್ತ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ...
1 2 3 4 5 154
Page 3 of 154