ಮಂಗಳೂರು: ಸಹ್ಯಾದ್ರಿ ಕಾಲೇಜಿನಲ್ಲಿ ಫೆ. 17ರಂದು ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ ; ರಮಾನಾಥ್ ರೈ ಸುದ್ದಿಗೋಷ್ಠಿ – ಕಹಳೆ ನ್ಯೂಸ್
ಮಂಗಳೂರು, ಫೆ 15 : ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿ ಫೆ. 17ರಂದು ನಡೆಯಲಿರುವ ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮದ ಎಲ್ಲಾ ಕೆಲಸಗಳು ನಡೆಯುತ್ತಿವೆ. ಕಾರ್ಯಕ್ರಮದ ಯಶಸ್ಸಿನ ನಿರೀಕ್ಷೆಯಲ್ಲಿದ್ದೇವೆ ಎಂದು ಮಾಜಿ ಸಚಿವ ರಮಾನಾಥ್ ರೈ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಜನರು ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಆದರೆ ಈಗ ಬದಲಾಗಿದ್ದು ದ್ವೇಷದ ಪಕ್ಷ ಗೆಲ್ಲುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಆಡಳಿತದಲ್ಲಿ...