ಫೆ.12 ರಿಂದ 23ರವರೆಗೆ ಅಧಿವೇಶನ, ಫೆ.16ರಂದು ಬಜೆಟ್ ಮಂಡನೆ : ಸ್ಪೀಕರ್ ಯು.ಟಿ.ಖಾದರ್ – ಕಹಳೆ ನ್ಯೂಸ್
ಫೆಬ್ರವರಿ 12ರಿಂದ 23ರವರೆಗೆ ವಿಧಾನಮಂಡಲದ ಅಧಿವೇಶನ ಆರಂಭಗೊಳ್ಳಲಿದೆ. ಫೆ.12ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ತಿಳಿಸಿದರು. ಅಧಿವೇಶನಕ್ಕೂ ಮುನ್ನ ಫೆ.9ರಂದು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಲ್ಲಿ ಶಾಸಕರಿಗೆ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ. ಶಾಸಕರಿಗೆ ಬಜೆಟ್ ಅಧಿವೇಶನದ ಸ್ವರೂಪ, ಚರ್ಚೆಗಳ...