Wednesday, January 22, 2025

ರಾಜ್ಯ

ರಾಜ್ಯಸುದ್ದಿಹಾಸನ

ಅರ್ಜುನನ ಬಲಿ ಪಡೆದಿದ್ದ ಕಾಡಾನೆ ಸೆರೆ ಹಿಡಿದ ಕ್ಯಾಪ್ಟನ್​ ಅಭಿಮನ್ಯು – ಕಹಳೆ ನ್ಯೂಸ್

ಹಾಸನ: ವಿಶ್ವವಿಖ್ಯಾತ ನಾಡಹಬ್ಬ ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತು ತನ್ನದೇ ಆದ ಛಾಪು ಮೂಡಿಸಿ ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತಿ ಪಡೆದಿದ್ದ ಸಾಕಾನೆ ಅರ್ಜುನನ್ನು ಬಲಿ ಪಡೆದಿದ್ದ ಸಾರಾ ಮಾರ್ಟಿನ್ ಹೆಸರಿನ ಆನೆಯನ್ನು ಶನಿವಾರ ಸೆರೆ ಹಿಡಿಯಲಾಗಿದೆ. ಮಲೆನಾಡು ಭಾಗದಲ್ಲಿ ಕಳೆದ ಹಲವು ದಿನಗಳಿಂದ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹೇರುವ ನಿಟ್ಟಿನಲ್ಲಿ ಕ್ಯಾಪ್ಟನ್​ ಅಭಿಮನ್ಯು ನೇತೃತ್ವದಲ್ಲಿ ಆನೆ ಸೆರೆ ಕಾರ್ಯಾಚರಣೆ ನಡೆಸಲಾಗಿತ್ತು. ತಾಲ್ಲೂಕಿನ ಪಾಳ್ಯ ಮತ್ತು ಕೆ....
ರಾಜ್ಯಸುದ್ದಿ

ಡಾ. ಶ್ರೀ ನಾನಾ ಸಾಹೇಬ್ ಧರ್ಮಾಧಿಕಾರಿ ಪ್ರತಿಷ್ಠಾನದ 15000 ಸದಸ್ಯರಿಂದ ಫೆ.04 ರಂದು ಹುಬ್ಬಳ್ಳಿಯಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಹುಬ್ಬಳ್ಳಿ : ಡಾ. ಶ್ರೀ ನಾನಾ ಸಾಹೇಬ್ ಧರ್ಮಾಧಿಕಾರಿ ಪ್ರತಿಷ್ಠಾನದ ಕರ್ನಾಟಕ ಮತ್ತು ಮಹಾರಾಷ್ಟ್ರದ ಸುಮಾರು 15000 ಸದಸ್ಯರಿಂದ ಫೆ.04 ರಂದು ಹುಬ್ಬಳ್ಳಿಯಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ. ಸ್ವಚ್ಛತಾ ಮೂಲ ಮಂತ್ರ ಎಂಬಂತೆ ಭಾರತದಾದ್ಯಂತ ಸ್ವಚ್ಛತಾ ಕಾರ್ಯಕ್ರಮ ಮಾಡುತ್ತಿರುವ ಡಾ. ನಾನಾಸಾಹೇಬ್ ಪ್ರತಿಷ್ಠಾನ ಈ ಬಾರಿ ಸುಮಾರು 15,000 ಸ್ವಯಂಸೇವಕರು (ಶ್ರೀ ಸದಸ್ಯರು) ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಿದ್ದು, ಸುಮಾರು 2,500 ಟನ್‍ಗಳಷ್ಟು ತ್ಯಾಜ್ಯ ಸಂಗ್ರಹವಾಗುವ ನಿರೀಕ್ಷೆಯಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ...
ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಕರ್ಣಾಟಕ ಬ್ಯಾಂಕ್‌ ಶಾಖೆ, ಮಿನಿ ಇ-ಲಾಬಿ ಆರಂಭ – ಕಹಳೆ ನ್ಯೂಸ್

ಮಂಗಳೂರು: ಕರ್ಣಾಟಕ ಬ್ಯಾಂಕ್‌ ಅಯೋಧ್ಯೆಯಲ್ಲಿ ಮಿನಿ ಇ-ಲಾಬಿಯೊಂದಿಗೆ ತನ್ನ 915ನೇ ಶಾಖೆಯನ್ನು ಗುರುವಾರ ಆರಂಭಿಸಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯ ಡಾ| ಅನಿಲ್‌ ಮಿಶ್ರಾ ಅವರು ನೂತನ ಶಾಖೆಯನ್ನು ಹಾಗೂ ಗೋಪಾಲ್‌ ನಾಗರಕಟ್ಟೆ ಅವರು ಮಿನಿ ಇ-ಲಾಬಿಯನ್ನು ಉದ್ಘಾಟಿಸಿದರು. ಬ್ಯಾಂಕಿನ ಎಂಡಿ ಮತ್ತು ಸಿಇಒ ಶ್ರೀಕೃಷ್ಣನ್‌ ಎಚ್‌. ದೀಪ ಬೆಳಗಿಸಿ ಮಾತನಾಡಿ, ಜಾಗತಿಕ ಭೂಪಟದಲ್ಲಿ ವಿರಾಜಮಾನವಾಗಿರುವ ಪವಿತ್ರ ನಗರವಾದ ಅಯೋಧ್ಯೆಗೆ ಕಾಲಿಡಲು ನಾವು ಸಂತೋಷಪಡುತ್ತೇವೆ. ಇದೀಗ ವಿಶ್ವ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ನ್ಯಾಯಾಂಗ ನಿಂದನೆ ಪ್ರಕರಣ ; ಹೈಕೋರ್ಟಿನಲ್ಲಿ ಬೇಶರತ್ತಾಗಿ ಕ್ಷಮೆಯಾಚಿಸಿದ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ..!! – ಕಹಳೆ ನ್ಯೂಸ್

ಬೆಂಗಳೂರು : ನ್ಯಾಯಾಂಗ ನಿಂದನೆ ಪ್ರಕರಣ ಸಂಬಂಧಿಸಿದಂತೆ, ಹೈಕೋರ್ಟಿನಲ್ಲಿ ಇಂದು ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಬೇಶರತ್ತಾಗಿ ಕ್ಷಮೆಯಾಚಿಸಿದ ಘಟನೆ ನಡೆದಿದೆ. ಏನಿದು ಘಟನೆ...!? ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆದ ಘಟನೆ ನಡೆದಿತ್ತು. ನ್ಯಾಯಾಂಗ ನಿಂದನೆ ಅರ್ಜಿ ಸಂಬಂದಿಸಿದಂತೆ ಹೈ ಕೋರ್ಟು 2020 ಆದೇಶ ಮಾಡಿದ ನ್ಯಾಯ ಮೂರ್ತಿಗಳನ್ನು ಅವ್ಯಚ್ಯಾವಾಗಿ ನಿಂದಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ನಡತೆ ಬಗ್ಗೆ ತಿಮರೋಡಿ ಪರ ವಕೀಲರು ಹೈ...
ಕ್ರೈಮ್ಬೆಂಗಳೂರುರಾಜ್ಯ

ಹೊಟ್ಟೆನೋವೆಂದು ಆಸ್ಪತ್ರೆಗೆ ಬಂದ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ; ಹಾಸ್ಟೆಲ್​ ವಾರ್ಡನ್​ ಅಮಾನತು – ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನಲ್ಲಿ ನಡೆದಿದೆ. ಹಾಸ್ಟೆಲ್​ನಲ್ಲಿ ಬಾಲಕಿ ಚಲನವಲನವನ್ನು ಹಾಸ್ಟೆಲ್ ವಾರ್ಡನ್ ಗಮನಿಸಿಲ್ಲ, ಗರ್ಭಿಣಿಯಾದರೂ ಗೊತ್ತಾಗಿಲ್ಲ. ಹೀಗಾಗಿ ಕರ್ತವ್ಯ ಲೋಪ ಹಿನ್ನೆಲೆ ವಾರ್ಡನ್ ನಿವೇದಿತಾರನ್ನು ಅಮಾನತು ಮಾಡಲಾಗಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲಿನಲ್ಲಿ ಇದ್ದುಕೊಂಡು ಬಾಲಕಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಇದೀಗ...
ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯ

ಜ.12ರಿಂದ 16 : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಮಹೋತ್ಸವ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವ ಸ್ಥಾನ ದಲ್ಲಿ ಜ. 16ರ ವರೆಗೆ ಕಿರುಷಷ್ಠಿ ಮಹೋತ್ಸವ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜ.12ರಂದು ಸಾಯಂಕಾಲ 5ಕ್ಕೆ ಶ್ರೀ ಕಾರ್ತಿಕ ವೇದಿಕೆಯಲ್ಲಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಮ ಎಸ್‌.ಸುಳ್ಳಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಧಾರ್ಮಿಕ ಸಭೆ ಜ. 16ರಂದು ಪೂರ್ವಾಹ್ನ ದೇವಾಲಯ ಆಡಳಿತ ದರ್ಮದರ್ಶಿಗಳ ಚಿಂತನ ಸಭೆ ಗುಡಿ-ಜನರ ಜೀವನಾಡಿ ಶ್ರೀ ಕಾರ್ತಿಕ ವೇದಿಕೆಯಲ್ಲಿ ನಡೆಯಲಿದೆ. ಶಾಸಕಿ...
ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಆರ್.ಎಸ್.ಎಸ್. ಹಿರಿಯ ಮುಖಂಡರು, ಅಯೋಧ್ಯೆ ಹೋರಾಟದಲ್ಲಿ ದಕ್ಷಿಣ ಭಾರತದಿಂದ ಪ್ರಮುಖ ಪಾತ್ರವಹಿಸಿದ್ದ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಅಯೋಧ್ಯೆಗೆ ಆಮಂತ್ರಣ – ಕಹಳೆ ನ್ಯೂಸ್

ಮಂಗಳೂರು : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ರವರಿಗೆ ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಆಮಂತ್ರಣ ಪತ್ರಿಕೆ ನೀಡಲಾಯಿತು. ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿಗಳಾದ ಶರಣ್ ಪಂಪುವೆಲ್, ಜಿಲ್ಲಾಧ್ಯಕ್ಷರಾದ ಎಚ್ ಕೆ ಪುರುಷೋತ್ತಮ, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್, ಜಿಲ್ಲಾ ಉಪಾಧ್ಯಕ್ಷರು ಮನೋಹರ್ ಸುವರ್ಣ,ವಿಭಾಗ ಬಜರಂಗದಳ ಸಂಯೋಜಕರಾದ ಭುಜಂಗ ಕುಲಾಲ್, ಸಹಸಂಯೋಜಕ ಪುನೀತ್...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ರಾಮಕೃಷ್ಣ ಹತ್ಯೆ ಪ್ರಕರಣ ; ರೇಣುಕಾಪ್ರಸಾದ್‌ಗೆ ಸುಪ್ರೀಂನಿಂದ ಜಾಮೀನು ಮಂಜೂರು – ಕಹಳೆ ನ್ಯೂಸ್

ಸುಳ್ಯ, ಜ 08 : ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ಇಂದು ಜಾಮೀನು ಮಂಜೂರಾಗಿದ್ದು, ನಾಳೆ ಬಿಡುಗಡೆ ಸಾಧ್ಯತೆ ಇದೆ ಎನ್ನಲಾಗಿದೆ. ಕೆವಿಜಿ ಮೆಡಿಕಲ್‌ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್‌. ರಾಮಕೃಷ್ಣರವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಇದೀಗ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ...
1 38 39 40 41 42 166
Page 40 of 166