ಇಂದಿನಿಂದ ಸಪ್ತಮೇಳದೊಂದಿಗೆ ಆಳ್ವಾಸ್ ವಿರಾಸತ್ ವೈಭವ ; ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ರಿಂದ ಚಾಲನೆ – ಕಹಳೆ ನ್ಯೂಸ್
ಮೂಡುಬಿದಿರೆ: ವರ್ಷಕ್ಕೊಮ್ಮೆ ಸಂಸ್ಕೃತಿ ವೈವಿಧ್ಯದ ಸೊಬಗು ಸೂಸುವ ಜತೆಗೆ ರಾಷ್ಟ್ರದ ಪರಂಪರೆಯ ಶ್ರೀಮಂತಿಕೆಯ ಅನನ್ಯತೆಯೊಂದಿಗೆ ಸಾಂಸ್ಕೃತಿಕ ಮನಸ್ಸುಗಳನ್ನು ತನ್ನತ್ತ ಸೆಳೆಯುವ ಮೂಡುಬಿದಿರೆಯ ವಿದ್ಯಾಗಿರಿ ಮತ್ತೆ “ಆಳ್ವಾಸ್ ವಿರಾಸತ್-2023’ರ ತಳಿರು ತೋರಣದೊಂದಿಗೆ ಸಜ್ಜಾಗಿದೆ. 29ನೇ ವಿರಾಸತ್ ಡಿ. 14ರಂದು ಚಾಲನೆ ಪಡೆದು ಡಿ. 17ರ ವರೆಗೆ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿವೆ. ಪ್ರತೀ ಸಂಜೆ ವೇಳೆಗೆ ಸಾಂಸ್ಕೃತಿಕ ರಸದೌತಣ ನೀಡಲು ವಿರಾಸತ್...