ಮಾಣಿಯಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ – ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆಯಿಂದ ಖಂಡನೆ ; ಮುರಳಿಕೃಷ್ಣ ಹಸಂತ್ತಡ್ಕ ಆಸ್ಪತ್ರೆಗೆ ಭೇಟಿ – ಕಹಳೆ ನ್ಯೂಸ್
ಬಂಟ್ವಾಳ : ಮಾಣಿಯಲ್ಲಿ ಇಂದು ನಡೆದ ಬಜರಂಗದಳದ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಯನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಗ್ರವಾಗಿ ಖಂಡಿಸುತ್ತದೆ. ರಾಜ್ಯದಲ್ಲಿ ಸರ್ಕಾರ ಬದಲಾದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಗೊಂಡಾಗಿರಿಯಲ್ಲಿ ತೊಡಗಿದ್ದು ಇಂದು ಬಜರಂಗದಳದ ಕಾರ್ಯಕರ್ತನ ಮೇಲೆ ಹಾಡು ಹಗಲು ಹಲ್ಲೆ ಮಾಡುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ಹಲ್ಲೆಯ ದೃಶ್ಯ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಪೋಲಿಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆ ಮಾಡಿರುವ...