Recent Posts

Monday, November 25, 2024

ರಾಜ್ಯ

ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಇಂದಿನಿಂದ 2 ದಿನ ” ಮಂಗಳೂರು ಲಿಟ್‌ ಫೆಸ್ಟ್‌ ” | ‘ದಿ ಐಡಿಯಾ ಆಫ್‌ ಭಾರತ್‌’ 25ರಷ್ಟು ಗೋಷ್ಠಿಗಳು ಎರಡು ಪ್ರತ್ಯೇಕ ಸಭಾಂಗಣ ; ರಾಷ್ಟ್ರೀಯ, ಅಂತಾರಾಷ್ಟ್ರೀಯ ಖ್ಯಾತಿಯ ಸಾಹಿತಿಗಳು, ಕಲಾವಿದರು, ಪತ್ರಕರ್ತರು ಭಾಗಿ – ಸಮಾಲೋಚನೆ – ಕಹಳೆ ನ್ಯೂಸ್

ಮಂಗಳೂರು: ಸಮಾಜದ ಹಲವು ಜ್ವಲಂತ ವಿಚಾರಗಳ ಬಗ್ಗೆ ಹೊಸ ಹೊಳಹು ಮೂಡಿಸುವ ಆಶಯದೊಂದಿಗೆ ಮಂಗಳೂರು ಲಿಟ್‌ಫೆಸ್ಟ್‌ನ 5ನೇ ಆವೃತ್ತಿ ಫೆ.18 ಮತ್ತು 19ರಂದು ನಡೆಯುತ್ತಿದೆ. ಭಾರತ್‌ ಫೌಂಡೇಶನ್‌ ಹಮ್ಮಿಕೊಂಡಿರುವ ಲಿಟ್‌ ಫೆಸ್ಟ್‌ ನಗರದ ಟಿಎಂಎ ಪೈ ಸಭಾಭವನದಲ್ಲಿ “ದಿ ಐಡಿಯಾ ಆಫ್‌ ಭಾರತ್‌’ ಎಂಬ ಪರಿಕಲ್ಪನೆಯಡಿ ನಡೆಯಲಿದ್ದು 50ಕ್ಕೂ ಅಧಿಕ ವಿಷಯ ಪರಿಣಿತರು ಸಮಾಲೋಚನೆ ನಡೆಸಲಿದ್ದಾರೆ. ಒಟ್ಟು 25ರಷ್ಟು ಗೋಷ್ಠಿಗಳು ಎರಡು ಪ್ರತ್ಯೇಕ ಸಭಾಂಗಣದಲ್ಲಿ ನಡೆಯಲಿವೆ. ಪ್ರತಿಬಾರಿಯೂ ರಾಷ್ಟ್ರೀಯ, ಅಂತಾರಾಷ್ಟ್ರೀಯ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿಸುಬ್ರಹ್ಮಣ್ಯ

ಮಹಾ ಶಿವರಾತ್ರಿ ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಬರುವ ಪಾದಯಾತ್ರಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ತಂಡದಿಂದ ಸ್ವಚ್ಛತಾ ಪಾಠ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಮಹಾ ಶಿವರಾತ್ರಿ ಹಬ್ಬ ಎಂದ ಕೂಡಲೇ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳು ಪಾದಯಾತ್ರೆ ಮೂಲಕ ಆಗಮಿಸಲು ಆರಂಭಿಸುತ್ತಾರೆ. ಹೀಗೆ ಬರುವ ಪಾದಯಾತ್ರಾರ್ಥಿಗಳಲ್ಲಿ ಸ್ವಚ್ಛತಾ ಜಾಗೃತಿ ಮೂಡಿಸಲು ಶೌರ್ಯ ವಿಪತ್ತು ನಿರ್ವಹಣ ತಂಡ ಕೆಲಸ ಮಾಡುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾ ಶಿವರಾತ್ರಿ ಅಂಗವಾಗಿ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಹಾಗೂ ಚಾರ್ಮಾಡಿ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆ ಕೈಗೊಳ್ಳುತ್ತಾರೆ. ಈ ರೀತಿ ಬರುವ ಪಾದಯಾತ್ರಿಗಳು ಅಲ್ಲಲ್ಲಿ ವಿಶ್ರಾಂತಿ ಪಡೆದು...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ನಾಳೆ ಶಿವರಾತ್ರಿ ಜಾಗರಣೆ : ಧರ್ಮಸ್ಥಳಕ್ಕೆ ಬರುತ್ತಿದ್ದಾರೆ 50ಸಾವಿರ ಪಾದಯಾತ್ರಿಗಳು – ಕಹಳೆ ನ್ಯೂಸ್

ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಫೆ. 18ರಂದು ನಡೆಯುವ ಶಿವರಾತ್ರಿ ಆಚರಣೆಗೆ ನಾಡಿನ ವಿವಿಧೆಡೆಯಿಂದ 50 ಸಾವಿರಕ್ಕೂ ಅಧಿಕ ಪಾದಯಾತ್ರಿಗಳ ಸಹಿತ ಲಕ್ಷಕ್ಕೂ ಅಧಿಕ ಭಕ್ತರು ಸೇರುವುದರಿಂದ ಕ್ಷೇತ್ರದಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು, ಮೈಸೂರು, ಮಡಿಕೇರಿ, ಶಿವಮೊಗ್ಗ, ಭದ್ರಾವತಿ, ಹಾಸನ, ದಾವಣಗೆರೆ ಸಹಿತ ನಾನಾ ಊರುಗಳಿಂದ ಪ್ರತೀ ವರ್ಷದಂತೆ ಅನೇಕ ಪಾದಯಾತ್ರಿಗಳ ಸಂಘಟನೆಗಳ ಮೂಲಕ ಭಕ್ತರು ಶಿವನಾಮ ಸ್ಮರಣೆಯೊಂದಿಗೆ ಪಾದಯಾತ್ರೆಯಲ್ಲಿ ಆಗಮಿಸುತ್ತಿದ್ದಾರೆ. 50 ಸಾವಿರ ಪಾದಯಾತ್ರಿಗಳು ಈಗಾಗಲೇ...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ – 18 ಕೋಟಿ ರೂ. ವೆಚ್ಚದಲ್ಲಿ 4 ಜಿಲ್ಲೆಗಳಲ್ಲಿ ನಿರ್ಮಾಣ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ಪ್ರತಿ ಶಾಲೆಗೆ 18 ಕೋಟಿ ರೂ. ವೆಚ್ಚದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ ಮಾಡಿದರು. ಅಲ್ಲದೆ, ಬೈಲಹೊಂಗಲ ತಾಲ್ಲೂಕಿನಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳನ್ನು 217 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿ, ಸೈನಿಕ್ ಸ್ಕೂಲ್ ಸೊಸೈಟಿ ಸಹಯೋಗದೊಂದಿಗೆ ಪ್ರಾರಂಭ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ ; ದೇವಸ್ಥಾನ, ಮಠಗಳ ಜೀರ್ಣೋದ್ಧಾರ ಕಾಮಗಾರಿಗೆ 1,000 ಕೋಟಿ ರೂ. ಮೀಸಲು – ಕಹಳೆ ನ್ಯೂಸ್

ಬೆಂಗಳೂರು: ಈ ಬಾರಿ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಯಾವುದೇ ಮಠಮಾನ್ಯಗಳಿಗೆ ನೇರ ಅನುದಾನ ನೀಡಿಲ್ಲ. ಬದಲಾಗಿ ಧಾರ್ಮಿಕ ದತ್ತಿ ಇಲಾಖೆಯಡಿ 1,000 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯಡಿ 2022-23ನೇ ಸಾಲಿಗೆ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿತ್ತು. ಅಂತೆಯೇ ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ...
ದಕ್ಷಿಣ ಕನ್ನಡಯಕ್ಷಗಾನ / ಕಲೆರಾಜ್ಯಸುದ್ದಿ

ಯಕ್ಷರಂಗದ ಮೇರು ಭಾಗವತರಾದ ಬಲಿಪ ನಾರಾಯಣ ಭಾಗವತರು ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು : ತೆಂಕುತಿಟ್ಟು ಯಕ್ಷರಂಗದ ಭೀಷ್ಮ ರೆಂದೇ ಖ್ಯಾತರಾದ ಭಾಗವತರಾದ ಬಲಿಪ ನಾರಾಯಣ ಭಾಗವತರು ಇಂದು ಸಂಜೆ 6:30 ಗಂಟೆಗೆ ದೈವಾಧೀನರಾಗಿದ್ದಾರೆ. ಅಂತಿಮ ವಿಧಿ ವಿಧಾನಗಳು ಇಂದು ರಾತ್ರಿ 1.30 ಗಂಟೆಯ ಸುಮಾರಿಗೆ ಅವರ ಸ್ವಗ್ರಹದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ....
ದಕ್ಷಿಣ ಕನ್ನಡರಾಜ್ಯಸುದ್ದಿ

ಕೇಂದ್ರ ಸಚಿವ ಸಂಪುಟ ಸಭೆ: 2 ಲಕ್ಷ ಸಹಕಾರಿ ಸಂಘಗಳ ಸ್ಥಾಪನೆ, ವೈಬ್ರೆಂಟ್ ವಿಲೇಜ್ ಕಾರ್ಯಕ್ರಮಕ್ಕೆ ಅನುಮೋದನೆ! – ಕಹಳೆ ನ್ಯೂಸ್

ಕೇಂದ್ರ ಸಚಿವ ಸಂಪುಟ ಇಂದು ಸಹಕಾರಿ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ಮುಂದಿನ ಐದು ವರ್ಷಗಳಲ್ಲಿ ಎರಡು ಲಕ್ಷ ಪಂಚಾಯತ್‌ಗಳಲ್ಲಿ ಹೊಸ ಪ್ರಾಥಮಿಕ ಕೃಷಿ ಸಾಲ ಸೊಸೈಟಿ (PACS) ಸ್ಥಾಪನೆಗೆ ಅನುಮೋದನೆ ನೀಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) , ಪ್ರಾಥಮಿಕ ಕೃಷಿ ಸಾಲ ಸೊಸೈಟಿ ಮೂಲಕ 25 ವಿವಿಧ ಸೌಲಭ್ಯಗಳನ್ನು ಒದಗಿಸಲಾಗುವುದು. ಡೈರಿ ಮತ್ತು ಮೀನುಗಾರಿಕೆಯನ್ನು ಸಹ ಕೃಷಿ ಸಹಕಾರಿ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ನಿಡ್ಪಳ್ಳಿ ಮುರಳೀಕೃಷ್ಣ ಭಟ್ ರವರ ಅಂತ್ಯಕ್ರಿಯೆ – ನೂರಾರು ಕಾರ್ಯಕರ್ತರು, ಪಕ್ಷದ ಪ್ರಮುಖರಿಂದ ಅಂತಿಮ ದರ್ಶನ ; ಘಟನೆ ತಿಳಿಯುತ್ತಿದ್ದಂತೆ ಬೆಂಗಳೂರಿನಿಂದ ಓಡೋಡಿ ಬಂದ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಪುತ್ತೂರು: ಕಾರೊಂದು ಪಲ್ಟಿ ಹೊಡೆದ ಪರಿಣಾಮ ಸಹ ಪ್ರಯಾಣಿಕ ಮೃತಪಟ್ಟ ಘಟನೆ ಸಂಟ್ಯಾರ್ ನಲ್ಲಿ ನಡೆದಿದೆ. ಪುತ್ತೂರಿನಿಂದ ಬೆಟ್ಟಂಪಾಡಿ ಕಡೆಗೆ ತೆರಳುವ ಕಾರು ಸಂಟ್ಯಾರ್ ಸಮೀಪ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಯ ತೋಟಕ್ಕೆ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತರನ್ನು ಬಿಜೆಪಿ ಬೆಂಬಲಿತ ನಿಡ್ನಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮುರಳಿಕೃಷ್ಣ ಭಟ್ ಎಂದು ಗುರುತಿಸಲಾಗಿದ್ದು, ಸಂಟ್ಯಾರು ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ ಎಂಬಲ್ಲಿ ಕಾರು ಅಪಘಾತ...
1 65 66 67 68 69 154
Page 67 of 154