(ನ.19) ಇಂದಿನಿಂದ ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ; ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಶಾಸಕ ಹರೀಶ್ ಪೂಂಜ ವಸ್ತುಪ್ರದರ್ಶನ ಉದ್ಘಾಟನೆ – ಕಹಳೆ ನ್ಯೂಸ್
ಧರ್ಮಸ್ಥಳ: ಪರಂಪರಾಗತ ಆಚಾರ ವಿಚಾರಗಳು, ಸಂಸ್ಕೃತಿ-ಸಾಹಿತ್ಯ ಪ್ರಕಾರಗಳ ಜತೆಗೆ ಈ ನಾಡಿನ ಕಲೆಗಳಾದಿಗಳು ಒಂದೆಡೆ ಕೇ೦ದ್ರೀಕೃತವಾಗುವ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ನ.19ರಿಂದ ನ.23ರವರೆಗೆ ನಾಡಿನ ಗಣ್ಯರು, ವಿದ್ವಾಂಸರು ಹಾಗೂ ಕಲಾವಿದರ ಸಹಭಾಗಿತ್ವದಲ್ಲಿ ಲಕ್ಷದೀಪೋತ್ಸವ ನೆರವೇರಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ, ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನವು ನೆರವೇರಲಿದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ದೇವಸ್ಥಾನ, ಮುಖ್ಯದ್ವಾರ...