Thursday, March 27, 2025

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಡಾ| ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಮಾಡದಂತೆ ಸಿವಿಲ್‌ ನ್ಯಾಯಾಲಯವು ಆದೇಶ -ಕಹಳೆ ನ್ಯೂಸ್

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದ ಸದಸ್ಯರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧಿತ ಸಂಸ್ಥೆಗಳ ವಿರುದ್ಧ ಯಾವುದೇ ಸುಳ್ಳು ಸುದ್ದಿ, ಆಧಾರರಹಿತ, ಅವಹೇಳನಕಾರಿ ಮತ್ತು ಅಪಪ್ರಚಾರ ಮಾಡುವ ಮಾಹಿತಿ ಪ್ರಕಟಿಸಲು ಅಥವಾ ಹರಡದಂತೆ ಬೆಂಗಳೂರು ನಗರ ಸಿವಿಲ್‌ ನ್ಯಾಯಾಲಯವು ಆದೇಶಿಸಿದೆ. ನ್ಯಾಯಾಲಯವು ವಿಚಾರಣೆ ನಡೆಸಿ, ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದ ಸದಸ್ಯರು ಮತ್ತು...
ದೆಹಲಿಸುದ್ದಿ

ಮರಗಳನ್ನು ಕಡಿಯುವುದು ಮನುಷ್ಯನನ್ನು ಕೊಲ್ಲುವುದಕ್ಕಿಂತ ದೊಡ್ಡ ಅಪರಾಧ : ಸುಪ್ರೀಂಕೋರ್ಟ್-ಕಹಳೆ ನ್ಯೂಸ್

ನವದೆಹಲಿ : ಮಂಗಳವಾರದ ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಹೆಚ್ಚಿನ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು ವ್ಯಕ್ತಿಯನ್ನು ಕೊಲ್ಲುವುದಕ್ಕಿಂತ ಗಂಭೀರ ಅಪರಾಧ ಎಂದು ಹೇಳಿದೆ. ಪರಿಸರಕ್ಕೆ ಹಾನಿ ಮಾಡುವವರ ವಿರುದ್ಧ ಯಾವುದೇ ದಯೆ ಇರುವುದಿಲ್ಲ ಎಂದು ಹೇಳಿದ ನ್ಯಾಯಾಲಯ, ಅಕ್ರಮವಾಗಿ ಕಡಿದ ಪ್ರತಿ ಮರಕ್ಕೂ 1 ಲಕ್ಷ ರೂ.ದಂಡ ವಿಧಿಸಿದೆ. ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭೂಯಾನ್ ಅವರ ಪೀಠವು ಅನುಮತಿಯಿಲ್ಲದೆ ಮರಗಳನ್ನು ಕಡಿಯುವವರ ವಿರುದ್ಧ ಕಠಿಣ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಸಾಕ್ಷಿ ನಾಶ ಮಾಡಿದ ಆರೋಪದಡಿ ರಜತ್‌, ವಿನಯ್‌ ಲಾಕ್‌: ರಾತ್ರಿಯೇ ಜೈಲಿಗೆ ಶಿಫ್ಟ್‌-ಕಹಳೆ ನ್ಯೂಸ್

ಬೆಂಗಳೂರು:ಮಾಜಿ ಬಿಗ್‌ ಬಾಸ್‌ ಸ್ಪರ್ಧಿಗಳಾದ ವಿನಯ್‌ ಗೌಡ ಮತ್ತು ರಜತ್‌ ಕಿಶನ್‌ಗೆ ರೀಲ್ಸ್‌ ಕಂಟಕ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಲಾಂಗ್‌ ಹಿಡಿದು ರೀಲ್ಸ್ ಮಾಡಿದ ವಿನಯ್‌ ಗೌಡ ಮತ್ತು ರಜತ್‌ ಕಿಶನ್‌ ಸದ್ಯ ಜೈಲು ಪಾಲಾಗಿದ್ದಾರೆ. ಪೊಲೀಸರ ತನಿಖೆ ವೇಳೆ ಲಾಂಗ್ ಬದಲಿಸಿದ ಆರೋಪದ ಅಂದರೆ ಸಾಕ್ಷಿ ನಾಶ ಮಾಡಿದ ಆರೋಪದಡಿ ಇಬ್ಬರನ್ನು ಮತ್ತೆ ಬಂಧಿಸಲಾಗಿದೆ. ರೀಲ್ಸ್ಗಾಗಿ ಮಚ್ಚು ಹಿಡಿದು ವಿಡಿಯೋ ಮಾಡಿ ಸಂಕಷ್ಟಕ್ಕೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಗೀತಾ ಶಿವ ರಾಜ್‌ಕುಮಾರ್‌ ಆಸ್ಪತ್ರೆಗೆ ದಾಖಲು-ಕಹಳೆ ನ್ಯೂಸ್

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್‌ ಹೀರೋ ಶಿವ ರಾಜ್‌ಕುಮಾರ್‌ ಅವರ ಪತ್ನಿ ಗೀತಾ ಶಿವ ರಾಜ್‌ಕುಮಾರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಣ್ಣ ಆರೋಗ್ಯದಲ್ಲಿ ಚೇತರಿಕೆ ಬಳಿಕ ಮತ್ತೆ ಅವರ ಸಿನಿಮಾ ಕೆಲಸಗಳಲ್ಲಿ ಜೊತೆಯಾಗಿದ್ದ ಗೀತಕ್ಕ ದಿಢೀರ್‌ ಆಸ್ಪತ್ರೆಗೆ ದಾಖಲಾಗಿರುವುದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಗೀತಾ ಶಿವ ರಾಜ್‌ಕುಮಾರ್‌ ಅವರಿಗೆ ಸರ್ಜರಿಯಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ. ಸದಾ ಆಯಕ್ಟೀವ್‌ ಆಗಿರುತ್ತಿದ್ದ ಗೀತಕ್ಕ ಅವರಿಗೆ ದಿಢೀರ್‌ ಏನಾಯ್ತು? ಸರ್ಜರಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕರ್ನಾಟಕದಿಂದ ಮತ್ತೆ ನೆರೆ ರಾಜ್ಯಕ್ಕೆ ನೀರು: ರಾಜ್ಯ ಸರ್ಕಾರ ವಿರುದ್ಧ ವಿಜಯೇಂದ್ರ ಕಿಡಿ-ಕಹಳೆ ನ್ಯೂಸ್

ಬೆಂಗಳೂರು : ಕುಡಿಯುವ ನೀರಿನ ಉದ್ದೇಶಕ್ಕಾಗಿ ತೆಲಂಗಾಣಕ್ಕೆ 1.5 ಟಿಎಂಸಿ ನೀರು ಬಿಡುಗಡೆ ಮಾಡುವುದಾಗಿ ತಿಳಿಸಿದ್ದ ರಾಜ್ಯ ಸರ್ಕಾರ ನಾರಾಯಣಪುರದ ಬಸವಸಾಗರ ಜಲಾಶಯದಿಂದ ರಾತ್ರೋ ರಾತ್ರಿ 10 ಟಿಎಂಸಿ ನೀರು ಹರಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ವಿಜಯಪುರ ಜಿಲ್ಲೆಯ ರೈತರ ಬೆಳೆಗಳಿಗೆ ನೀರು ಸಿಗುತ್ತಿಲ್ಲ. ಈ ಬಗ್ಗೆ ಕೇಳಿದರೆ ಸರ್ಕಾರದ ಮೌಖಿಕ ಆದೇಶದಿಂದಾಗಿ ನೀರು ಹರಿಸಲಾಗಿದೆ ಎಂದು ಅಧಿಕಾರಿಗಳು ಉತ್ತರ ನೀಡುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ನಾಯಕರು ಆರೋಪಿಸಿದ್ದಾರೆ....
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ‘ಆದಾಯ ಮೀರಿ ಆಸ್ತಿ ಗಳಿಕೆ’ ಕೇಸ್ : ಸುಪ್ರೀಂಕೋರ್ಟ್’ ನಲ್ಲಿ ಇಂದು ಮೇಲ್ಮನವಿ ವಿಚಾರಣೆ ನಿಗದಿ- ಕಹಳೆ ನ್ಯೂಸ್

ನವದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ಯತ್ನಾಳ್ ಹಾಗೂ ಸಿಬಿಐ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಯಲಿದೆ. ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆದಿರುವ ಸಚಿವ ಸಂಪುಟದ ತೀರ್ಮಾನವನ್ನು ಪ್ರಶ್ನಿಸಲಾದ ರಿಟ್ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್ ನಡೆಸಲಿದ್ದು, ತೀವ್ರ ಕುತೂಹಲ ಮೂಡಿಸಿದೆ....
ಮುಂಬೈರಾಷ್ಟ್ರೀಯಸುದ್ದಿ

ಮುಂಬೈ ವಿಮಾನ ನಿಲ್ದಾಣದ ಶೌಚಾಲಯದ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ-ಕಹಳೆ ನ್ಯೂಸ್

ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಸಹರ್ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಮಗುವನ್ನು ತ್ಯಜಿಸಲು ಕಾರಣವಾದ ವ್ಯಕ್ತಿಯನ್ನು ಗುರುತಿಸಲು ತನಿಖೆಯನ್ನು ಪ್ರಾರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ 1.30 ರ ಸುಮಾರಿಗೆ ನಿರ್ಜೀವ ದೇಹವನ್ನು ವರದಿ ಮಾಡಲಾಗಿದ್ದು, ಹೆಚ್ಚಿನ ತನಿಖೆಗಾಗಿ ಕೂಪರ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಟೈಮ್ಸ್ ನೌ ವರದಿ...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ತುಷ್ಟೀಕರಣ ಮತ್ತು ಕಾಂಗ್ರೆಸ್ ನ ಸಂವಿಧಾನ ಬದಲಾವಣೆಯ ಮಾತಿನಿಂದ ಪ್ರಜಾಪ್ರಭುತ್ವಕ್ಕೆ ಅಪಾಯ; ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿಕೆ ಖಂಡಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ನವದೆಹಲಿ: ಮುಸ್ಲಿಮರನ್ನು ಓಲೈಕೆ ಮಾಡುವುದಕ್ಕಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಈ ದೇಶಕ್ಕೆ ಕೊಟ್ಟಿರುವ ಸಂವಿಧಾನವನ್ನೇ ತಿದ್ದುಪಡಿ ಮಾಡಬೇಕೆಂದು ರಾಜ್ಯದ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್‌ ಹೇಳಿರುವುದು ಅತ್ಯಂತ ಖಂಡನೀಯ ಹಾಗೂ ಆತಂಕಕಾರಿ ಬೆಳವಣಿಗೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸಂವಿಧಾನ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್‌ ನೀಡಿರುವ ಹೇಳಿಕೆಯನ್ನು ಕಟುವಾಗಿ ವಿರೋಧಿಸಿರುವ ಕ್ಯಾ. ಚೌಟ ಅವರು, ರಾಜ್ಯದಲ್ಲಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ...
1 2 3 190
Page 1 of 190
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ