ಕರ್ನಾಟಕದಿಂದ ಮತ್ತೆ ನೆರೆ ರಾಜ್ಯಕ್ಕೆ ನೀರು: ರಾಜ್ಯ ಸರ್ಕಾರ ವಿರುದ್ಧ ವಿಜಯೇಂದ್ರ ಕಿಡಿ-ಕಹಳೆ ನ್ಯೂಸ್
ಬೆಂಗಳೂರು : ಕುಡಿಯುವ ನೀರಿನ ಉದ್ದೇಶಕ್ಕಾಗಿ ತೆಲಂಗಾಣಕ್ಕೆ 1.5 ಟಿಎಂಸಿ ನೀರು ಬಿಡುಗಡೆ ಮಾಡುವುದಾಗಿ ತಿಳಿಸಿದ್ದ ರಾಜ್ಯ ಸರ್ಕಾರ ನಾರಾಯಣಪುರದ ಬಸವಸಾಗರ ಜಲಾಶಯದಿಂದ ರಾತ್ರೋ ರಾತ್ರಿ 10 ಟಿಎಂಸಿ ನೀರು ಹರಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ವಿಜಯಪುರ ಜಿಲ್ಲೆಯ ರೈತರ ಬೆಳೆಗಳಿಗೆ ನೀರು ಸಿಗುತ್ತಿಲ್ಲ. ಈ ಬಗ್ಗೆ ಕೇಳಿದರೆ ಸರ್ಕಾರದ ಮೌಖಿಕ ಆದೇಶದಿಂದಾಗಿ ನೀರು ಹರಿಸಲಾಗಿದೆ ಎಂದು ಅಧಿಕಾರಿಗಳು ಉತ್ತರ ನೀಡುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ನಾಯಕರು ಆರೋಪಿಸಿದ್ದಾರೆ....