Saturday, April 5, 2025

ದೆಹಲಿ

ದೆಹಲಿವಾಣಿಜ್ಯಸುದ್ದಿ

ಎಲ್‍ಪಿಜಿ ಸಿಲಿಂಡರ್ ಗ್ರಾಹಕರಿಗೆ ಗುಡ್ ನ್ಯೂಸ್’ : ಎಲ್‍ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 32 ರೂ. ಇಳಿಕೆ – ಕಹಳೆ ನ್ಯೂಸ್

ನವದೆಹಲಿ : ಇಂದು, ಹೊಸ ಹಣಕಾಸು ವರ್ಷದ ಮೊದಲ ದಿನದಂದು, ಎಲ್‍ಪಿಜಿ ಸಿಲಿಂಡರ್ ಗ್ರಾಹಕರಿಗೆ ಸಿಹಿಸುದ್ದಿ ಸಿಕ್ಕಿದೆ. ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 32 ರೂ.ಇಳಿಕೆ ಮಾಡಲಾಗಿದೆ. ವಾಣಿಜ್ಯ ಸಿಲಿಂಡರ್ ಗಳಲ್ಲಿ ಮಾತ್ರ ದರಗಳನ್ನು ಕಡಿತಗೊಳಿಸಲಾಗಿದೆ. ಈ ತಿಂಗಳು ದೇಶೀಯ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.ದೆಹಲಿಯಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ ಇಂದಿನಿಂದ 30.50 ರೂ.ಗೆ ಇಳಿದಿದೆ. ಕೋಲ್ಕತ್ತಾದಲ್ಲಿ 32 ರೂ., ಮುಂಬೈನಲ್ಲಿ 31.50 ರೂ., ಚೆನ್ನೈನಲ್ಲಿ 30.50...
ದೆಹಲಿರಾಜ್ಯರಾಷ್ಟ್ರೀಯವಾಣಿಜ್ಯಸುದ್ದಿ

ಏ.1ರಿಂದ 2,000 ರೂ. ನೋಟು ವಿನಿಮಯ / ಠೇವಣಿ ತಾತ್ಕಾಲಿಕ ಸ್ಥಗಿತ ಆರ್.ಬಿ.ಐ ಘೋಷಣೆ – ಕಹಳೆ ನ್ಯೂಸ್

ನವದೆಹಲಿ: ದೇಶಾದ್ಯಂತ ಏ.1ರಿಂದ ತನ್ನ 19 ವಿತರಣಾ ಕಚೇರಿಗಳಲ್ಲಿ 2,000 ರೂ.ಗಳ ನೋಟುಗಳ ವಿನಿಮಯ ಅಥವಾ ಠೇವಣಿ ಸಾಧ್ಯವಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಘೋಷಿಸಿದೆ. ಖಾತೆಗಳ ವಾರ್ಷಿಕ ಮುಚ್ಚುವಿಕೆಗೆ ಸಂಬಂಧಿಸಿದ ಕಾರ್ಯಾಚರಣೆಗಳಿಂದಾಗಿ ಈ ತಾತ್ಕಾಲಿಕ ನಿಲುಗಡೆಯಾಗಿದೆ. ಎಂದು ಮಾಹಿತಿ ನೀಡಿದೆ. ವಾರ್ಷಿಕ ಮುಚ್ಚುವಿಕೆಗೆ ಸಂಬಂಧಿಸಿದ ಕಾರ್ಯಾಚರಣೆಗಳಿಂದಾಗಿ 2,000 ರೂ.ಗಳ ನೋಟುಗಳ ವಿನಿಮಯ / ಠೇವಣಿ ಸೌಲಭ್ಯವು ಏ.1ರಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ 19 ವಿತರಣಾ ಕಚೇರಿಗಳಲ್ಲಿ...
ದೆಹಲಿಬೆಂಗಳೂರುರಾಜ್ಯಸುದ್ದಿ

ಕೇಂದ್ರ ಸರ್ಕಾರದಿಂದ ನರೇಗಾ ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿ : ಏ.1ರಿಂದ ವೇತನದಲ್ಲಿ 3-10 ಶೇಕಡಾ ಹೆಚ್ಚಳ – ಕಹಳೆ ನ್ಯೂಸ್

ನವದೆಹಲಿ: ನರೇಗಾ ಕೂಲಿ ಕಾರ್ಮಿಕರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಪ್ರಸಕ್ತ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ ಅವರ ಸಂಬಳ ಹೆಚ್ಚಿಸಿದೆ. ಚುನಾವಣೆಗೆ ಮುಂಚಿತವಾಗಿ, ಕೇಂದ್ರ ಸರ್ಕಾರವು 2024-25 ನೇ ಹಣಕಾಸು ವರ್ಷಕ್ಕೆ ಜಾರಿಯಾಗುವಂತೆ MGNREGA ಕಾರ್ಮಿಕರ ವೇತನ ದರದಲ್ಲಿ 3-10 ಶೇಕಡಾ ಹೆಚ್ಚಳವನ್ನು ಘೋಷಿಸಲಿದೆ. ಹೊಸ ವೇತನ ದರಗಳು ಏಪ್ರಿಲ್ 1, 2024 ರಿಂದ ಜಾರಿಗೆ ಬರಲಿವೆ. ಶೇಕಡಾವಾರು ಹೆಚ್ಚಳಕ್ಕೆ ಸಂಬಂಧಿಸಿದಂತೆ 2023-24 ಕ್ಕೆ ಹೋಲಿಸಿದರೆ ಉತ್ತರ ಪ್ರದೇಶ...
ದೆಹಲಿಬೆಂಗಳೂರುರಾಜಕೀಯರಾಜ್ಯಸುದ್ದಿ

ನನ್ನಲ್ಲಿ ಸಾಕಷ್ಟು ಹಣವಿಲ್ಲ.. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ – ಕಹಳೆ ನ್ಯೂಸ್

ನವದೆಹಲಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅಗತ್ಯವಿರುವಷ್ಟು ಹಣ ನನ್ನ ಬಳಿ ಇಲ್ಲ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಹೈಕಮಾಂಡ್‌ಗೆ ತಿಳಿಸಿದ್ದೇನೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಆಯ್ಕೆಯನ್ನು ನೀಡಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿಕ ಹಣವಿಲ್ಲ. ಆದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿಯ ಪ್ರಸ್ತಾಪವನ್ನು ನಿರಾಕರಿಸಿದ್ದೇನೆ ಎಂದು ತಿಳಿಸಿದ್ದಾರೆ. ಒಂದು ವಾರ ಅಥವಾ...
ದೆಹಲಿಸುದ್ದಿ

ರಾಮಕೃಷ್ಣ ಮಿಷನ್ ಮುಖ್ಯಸ್ಥ ಸ್ವಾಮಿ ಸ್ಮರಣಾನಂದ ಮಹಾರಾಜ್ ನಿಧನ – ಕಹಳೆ ನ್ಯೂಸ್

ಕೋಲ್ಕತ್ತಾ : ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಮುಖ್ಯಸ್ಥ ಸ್ವಾಮಿ ಸ್ಮರಣಾನಂದ ಮಹಾರಾಜ್ ಅವರು ವಯೋಸಹಜ ಕಾಯಿಲೆಗಳಿಂದ 95 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ತಿಳಿಸಿದೆ. ರಾಮಕೃಷ್ಣ ಮಿಷನ್ ಸೇವಾ ಪ್ರತಿಷ್ಠಾನದ ಹೇಳಿಕೆ ಪ್ರಕಾರ ದಕ್ಷಿಣ ಕೊಲ್ಕತ್ತಾದ ಆಸ್ಪತ್ರೆಯಲ್ಲಿ ರಾತ್ರಿ 8.14ಕ್ಕೆ ಅವರು ಮೃತಪಟ್ಟಿದ್ದಾರೆ. ಸ್ಮರಣಾನಂದ ಅವರನ್ನು ಜನವರಿ 29ರಂದು ಮೂತ್ರನಾಳ ಸೋಂಕಿನ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾರ್ಚ್ 3ರಂದು ಅವರನ್ನು ಉಸಿರಾಟದ...
ದೆಹಲಿಮುಂಬೈರಾಜಕೀಯಸುದ್ದಿ

ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ : ಬಾಲಿವುಡ್ ನಟಿ ಕಂಗನಾ, ಜನಪ್ರಿಯ ಟಿವಿ ಧಾರಾವಾಹಿ ರಾಮಾಯಣದಲ್ಲಿ ರಾಮನ ಪಾತ್ರ ನಿರ್ವಹಿಸಿದ ಅರುಣ್ ಗೋವಿಲ್ ಗೆ ಟಿಕೆಟ್ – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ ಮಾಡಿದೆ. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಾಲಿವುಟ್ ನಟಿ ಕಂಗನಾ ರಣಾವತ್‌ಗೆ ಟಿಕೆಟ್ ನೀಡಲಾಗಿದೆ. ಅದೇ ರೀತಿ ಉತ್ತರ ಪ್ರದೇಶದ ಮೀರತ್ ನಿಂದ ಜನಪ್ರಿಯ ಟಿವಿ ಧಾರಾವಾಹಿ ರಾಮಾಯಣದಲ್ಲಿ ರಾಮನ ಪಾತ್ರವನ್ನು ನಿರ್ವಹಿಸಿದ ಅರುಣ್ ಗೋವಿಲ್ ಅವರಿಗೆ ಟಿಕೆಟ್ ನೀಡಿದೆ....
ದೆಹಲಿರಾಜಕೀಯಸುದ್ದಿ

ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ– ಕಹಳೆ ನ್ಯೂಸ್

ನವದೆಹಲಿ: ರಾಜ್ಯಸಭೆಗೆ ನಾಮಕರಣಗೊಂಡಿರುವ ಇನ್ಫೋಸಿಸ್‌ ಸಂಸ್ಥಾಪಕಿ, ಉದಾರ ದಾನಿ, ಸಾಹಿತಿ, ಕನ್ನಡತಿ ಸುಧಾ ಮೂರ್ತಿ ಅವರು ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಅತ್ಯಂತ ಸುಂದರ ಭಾಷೆಯಾದ, ಸೊಗಡಿನ ಭಾಷೆಯಾದ ಕನ್ನಡದಲ್ಲೇ ಪ್ರತಿಜ್ಞಾ ವಿಧಿಯನ್ನು ಓದುವ ಮೂಲಕ ಮೆಚ್ಚುಗೆ ಗಳಿಸಿದರು. ರಾಜ್ಯಸಭೆಯ ಅಧ್ಯಕ್ಷರಾಗಿರುವ ಜಗದೀಪ್‌ ಧನಕರ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ರಾಜ್ಯಸಭೆಯಲ್ಲಿ ಬಿಜೆಪಿ ನಾಯಕರಾಗಿರುವ ಪಿಯೂಷ್‌ ಗೋಯಲ್‌ ಅವರು ಉಪಸ್ಥಿತರಿದ್ದರು. ಇದೆಲ್ಲದಕ್ಕಿಂತಲೂ ಮುಖ್ಯವಾಗಿ ಇನ್ಫೋಸಿಸ್‌ ಸ್ಥಾಪನೆಯಲ್ಲಿ ಜತೆಯಾಗಿದ್ದ,...
ಅಂತಾರಾಷ್ಟ್ರೀಯದೆಹಲಿಸುದ್ದಿ

ಮೇ 10ರೊಳಗೆ ದೇಶ ಬಿಟ್ಟು ಹೋಗಿ : ಭಾರತೀಯ ಮಿಲಿಟರಿಗೆ ಮಾಲ್ಡೀವ್ಸ್ ಅಧ್ಯಕ್ಷರಿಂದ ಡೆಡ್​ಲೈನ್ – ಕಹಳೆ ನ್ಯೂಸ್

ನವದೆಹಲಿ : ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು ಅವರ ಭಾರತ ವಿರೋಧಿ ಮಾತು ಎಗ್ಗಿಲ್ಲದೇ ಮುಂದುವರಿಯುತ್ತಿದೆ. ಮೇ 10ರೊಳಗೆ ಎಲ್ಲಾ ಭಾರತೀಯ ತುಕಡಿಗಳು ಮಾಲ್ಡೀವ್ಸ್ ನೆಲದಿಂದ ಕಾಲ್ತೆಗೆಯಬೇಕು ಎಂದು ಅವರು ಮತ್ತೆ ತಾಕೀತು ಮಾಡಿದ್ದಾರೆ. ಬಾ ಅತೋಲ್ ಎಂಬಲ್ಲಿ ಸಾರ್ವಜನಿಕ ಸಮಾವೇಶದ ವೇಳೆ ಮುಯಿಜು ಅವರ ಭಾರತ ವಿರೋಧಿ ಮಾತುಗಳು ಕೇಳಿಬಂದವು. ಮೇ 10ರ ನಂತರ ಯಾವ ಭಾರತೀಯ ಮಿಲಿಟರಿ ಸಿಬ್ಬಂದಿಯೂ ಮಾಲ್ಡೀವ್ಸ್​ನಲ್ಲಿ ಇರುವುದಿಲ್ಲ. ನಾಗರಿಕ ಪೋಷಾಕಿನಲ್ಲಿರುವವರೂ ಇಲ್ಲಿಂದ ಜಾಗ ಖಾಲಿ...
1 11 12 13 14
Page 13 of 14
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ