ಡ್ರಗ್ಸ್ ಮಾಫಿಯಾ ವಿರುದ್ದದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಶ್ಲಾಘಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್
ನವದೆಹಲಿ: ಕರ್ನಾಟಕದ ಇತಿಹಾಸದಲ್ಲೇ 75 ಕೋಟಿ ರೂ.ಗಳ ಬೃಹತ್ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿರುವ ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆಯನ್ನು ಸಂಸದ ಕ್ಯಾ. ಚೌಟ ಶ್ಲಾಘಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಕ್ಯಾ.ಚೌಟ ಅವರು, ನಾನು ಸಂಸದನಾದ ಕೂಡಲೇ ಕಳೆದ ವರ್ಷದ ಮೊದಲ ಅಧಿವೇಶನದಲ್ಲೇ ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಡ್ರಗ್ಸ್ ಮಾಫಿಯಾ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿ ಅದನ್ನು ಮಟ್ಟ ಹಾಕುವುದಕ್ಕೆ ಪೊಲೀಸ್...