ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಮುಂಬೈ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಬಲೆಗೆ…!! – ಕಹಳೆ ನ್ಯೂಸ್
ಹೊಸದಿಲ್ಲಿ : 2022ರ ಜುಲೈನಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿಯನ್ನು ಎನ್‌ಐಎ ಮಂಗಳವಾರ ಬಂಧಿಸಿದೆ. ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿಕೆ ತಿಳಿಸಿದೆ. ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಬಂಧಿತರಾಗಿರುವ ಒಟ್ಟು ಆರೋಪಿಗಳ...