‘ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ – ಪ್ರವಾದಿ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ’; ಶಾಸಕ ಯು.ಟಿ ಖಾದರ್ ಟ್ವೀಟ್ – ಕಹಳೆ ನ್ಯೂಸ್
ಮಂಗಳೂರು, ಆ 12 : ಪ್ರವಾದಿ ಮೊಹಮ್ಮದ್ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ, ಹಾಗೆಂದು ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ, ಈ ನೆಲದ ಕಾನೂನೇ ಅಂತಿಮ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ. ಅವರು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಧಾರ್ಮಿಕ ಅವಹೇಳನ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಅಲ್ಪ ಸಂಖ್ಯಾತ ಸಮುದಾಯವರು ನಡೆಸಿದ ಗಲಭೆಯ ಕುರಿತು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ. "...