Sunday, November 24, 2024

ಬೆಂಗಳೂರು

ಕ್ರೈಮ್ಬೆಂಗಳೂರುಸುದ್ದಿ

ಅಕ್ರಮ ದತ್ತು ಪ್ರಕರಣ : ಸೋಶಿಯಲ್ ಮಿಡಿಯಾ ಸ್ಟಾರ್ ಸೋನು ಗೌಡಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು : ಕಾನೂನು ಬಾಹಿರವಾಗಿ ಹೆಣ್ಣು ಮಗು ದತ್ತು ಪಡೆದ ಆರೋಪದ ಮೇಲೆ ಅರೆಸ್ಟ್ ಆಗಿ ಜೈಲಿನಲ್ಲಿರುವ ಸೋಶಿಯಲ್ ಮಿಡಿಯಾ ಸ್ಟಾರ್ ಸೋನು ಶ್ರೀನಿವಾಸ ಗೌಡ ಅವರಿಗೆ ಬೆಂಗಳೂರಿನ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 8 ವರ್ಷದ ಹೆಣ್ಣು ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಸೋನು ಗೌಡ ಅವರನ್ನು ಮಾರ್ಚ್ 22 ರಂದು ಬೆಳಗಿನ ಜಾವ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದರು. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು...
ಕೃಷಿದಕ್ಷಿಣ ಕನ್ನಡಬೆಂಗಳೂರುಸುದ್ದಿ

ರೈತರಿಗೆ ಗುಡ್ ನ್ಯೂಸ್: ಇಂದಿನಿAದ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭ! –ಕಹಳೆ ನ್ಯೂಸ್

ಬೆಂಗಳೂರು : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ  ಇಂದಿನಿAದ  ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ನಡೆಸಲಾಗಿದೆರಾಜ್ಯದ 9 ಜಿಲ್ಲೆಗಳಲ್ಲಿ ಉಂಡೆ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭವಾಗಲಿದ್ದು, ಮಾ. 9 ಕ್ಕೆ ಕೊಬ್ಬರಿ ಮಾರಾಟಕ್ಕೆ ನೋಂದಣಿ ಅಂತ್ಯವಾಗಿದ್ದು9 ಜಿಲ್ಲೆಯಿಂದ 58,893 ರೈತರು ನೋಂದಣಿ ಮಾಡಿಸಿದ್ದಾರೆ. ಕೊಬ್ಬರಿ ಖರೀದಿಸಲು ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ನೋಡೆಲ್ ಏಜೆನ್ಸಿಯಾಗಿ ನೇಮಿಸಲಾಗಿದೆ. ಮೈಸೂರು, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾರಾಟ ಮಂಡಳಿಯಿAದ...
ಬೆಂಗಳೂರುಸಂತಾಪಸಿನಿಮಾಸುದ್ದಿ

ಇಹಲೋಕ ತ್ಯಜಿಸಿದ ಖ್ಯಾತ ರಂಗಭೂಮಿ ಕಲಾವಿದ, ಚಿತ್ರನಟ ಪ್ರಕಾಶ್ ಹೆಗ್ಗೋಡು–ಕಹಳೆ ನ್ಯೂಸ್

ಮಂಗಳೂರು: ಖ್ಯಾತ ರಂಗಭೂಮಿ ಕಲಾವಿದ, ಚಿತ್ರನಟ ಪ್ರಕಾಶ್ ಹೆಗ್ಗೋಡು ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಪ್ರಕಾಶ್ ಹೆಗ್ಗೋಡು ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಂಗಭೂಮಿ ಕಲಾವಿದರಾಗಿ, ಚಿತ್ರನಟರಾಗಿ, ಸಂಘಟಕರಾಗಿ, ಸಾಮಾಜಿಕ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ಏಸು ಪ್ರಕಾಶ್ ಕಲ್ಲುಕೊಪ್ಪ (ಪ್ರಕಾಶ್ ಹೆಗ್ಗೋಡು) ಕ್ಯಾನ್ಸ‌ರ್ ಕಾಯಿಲೆಯಿಂದ ಬಳಲುತ್ತಿದ್ದರು. ಆದರೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು...
ಕ್ರೈಮ್ಬೆಂಗಳೂರುಸುದ್ದಿ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಿಸಿದ ಎನ್‍ಐಎ – ಕಹಳೆ ನ್ಯೂಸ್

ನವದೆಹಲಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಸಹಕಾರಿಯಾಗುವ ಮಾಹಿತಿ ನೀಡಿದವರಿಗೆ ತಲಾ 10 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ ) ಘೋಷಿಸಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಅಬ್ದುಲ್ ಮಥೀನ್ ಅಹ್ಮದ್ ತಾಹ ಪತ್ತೆಗೆ ಸಹಕಾರಿಯಾಗಬಲ್ಲ ಸುಳಿವಿದ್ದಲ್ಲಿ ಹಂಚಿಕೊಳ್ಳುವಂತೆ ಎನ್‍ಐಎ ಎಕ್ಸ್‍ನಲ್ಲಿ ಕೋರಿದೆ. ಅಲ್ಲದೇ ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿರಿಸಲಾಗುವುದು ಎಂದು ತಿಳಿಸಿದೆ. ಸ್ಫೋಟ...
ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಬೆಂಗಳೂರು:ಗುದನಾಳಕ್ಕೆ ಏರ್ ಪ್ರೆಶರ್ ಪೈಪ್ನಿಂದ ಗಾಳಿ ಬಿಟ್ಟ ಸ್ನೇಹಿತ: ಕರುಳು ಛಿದ್ರವಾಗಿ ಯುವಕ ಸಾವು –ಕಹಳೆ ನ್ಯೂಸ್

ಬೆಂಗಳೂರು: ತಮಾಷೆಗಾಗಿ ಸ್ನೇಹಿತನ ಗುದದ್ವಾರಕ್ಕೆ ಏರ್ ಪ್ರೆಶರ್ ಪೈಪ್ನಿಂದ ಗಾಳಿ ಬಿಟ್ಟ ಪರಿಣಾಮ ಒತ್ತಡ ಹೆಚ್ಚಾಗಿ ಹೊಟ್ಟೆಯೊಳಗಿನ ಕರುಳು ಛಿದ್ರವಾಗಿ ಯುವಕ ಮೃತಪಟ್ಟಿರುವ ಘಟನೆ ಇಲ್ಲಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮಾ.25ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯೋಗೇಶ್ (24) ಎಂಬಾತ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದ್ದು, ಆರೋಪಿ ಮುರುಳಿ ಎಂಬವನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೂಲತಃ ದೇವನಹಳ್ಳಿ ತಾಲೂಕಿನ ಯೋಗೇಶ್ ಥಣಿಸಂದ್ರದಲ್ಲಿ ಅಜ್ಜಿ ಮನೆಯಲ್ಲಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು : ಏಪ್ರಿಲ್ 29 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿಗೆ ಕೋರ್ಟ್ ಸಮನ್ಸ್‌ ; ಜೂನ್ 1ರಂದು ರಾಹುಲ್ ಗಾಂಧಿ ಹಾಜರಾಗಬೇಕು, ನ್ಯಾಯಾಲಯ ಖಡಕ್ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾನನಷ್ಟ ಮೊಕದ್ದಮೆ ದಾಖಲಿಸಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಕಾನೂನು ಕ್ರಮ ಕೈಗೊಂಡಿತ್ತು. ಪಕ್ಷದ ಪರವಾಗಿ ವಕೀಲ ವಿನೋದ್ ಕುಮಾರ್ ಅವರು ಪ್ರಾರಂಭಿಸಿದ ಈ ಪ್ರಕರಣವು ಆಡಳಿತ ಪಕ್ಷಕ್ಕೆ ಸಂಬಂಧಿಸಿದ ಭ್ರಷ್ಟಾಚಾರದ ಪ್ರಮಾಣ ಮತ್ತು ಜಾಹೀರಾತು ಸಮಸ್ಯೆಗಳ...
ದೆಹಲಿಬೆಂಗಳೂರುರಾಜ್ಯಸುದ್ದಿ

ಕೇಂದ್ರ ಸರ್ಕಾರದಿಂದ ನರೇಗಾ ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿ : ಏ.1ರಿಂದ ವೇತನದಲ್ಲಿ 3-10 ಶೇಕಡಾ ಹೆಚ್ಚಳ – ಕಹಳೆ ನ್ಯೂಸ್

ನವದೆಹಲಿ: ನರೇಗಾ ಕೂಲಿ ಕಾರ್ಮಿಕರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಪ್ರಸಕ್ತ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ ಅವರ ಸಂಬಳ ಹೆಚ್ಚಿಸಿದೆ. ಚುನಾವಣೆಗೆ ಮುಂಚಿತವಾಗಿ, ಕೇಂದ್ರ ಸರ್ಕಾರವು 2024-25 ನೇ ಹಣಕಾಸು ವರ್ಷಕ್ಕೆ ಜಾರಿಯಾಗುವಂತೆ MGNREGA ಕಾರ್ಮಿಕರ ವೇತನ ದರದಲ್ಲಿ 3-10 ಶೇಕಡಾ ಹೆಚ್ಚಳವನ್ನು ಘೋಷಿಸಲಿದೆ. ಹೊಸ ವೇತನ ದರಗಳು ಏಪ್ರಿಲ್ 1, 2024 ರಿಂದ ಜಾರಿಗೆ ಬರಲಿವೆ. ಶೇಕಡಾವಾರು ಹೆಚ್ಚಳಕ್ಕೆ ಸಂಬಂಧಿಸಿದಂತೆ 2023-24 ಕ್ಕೆ ಹೋಲಿಸಿದರೆ ಉತ್ತರ ಪ್ರದೇಶ...
ಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

‘ಕರ್ನಾಟಕ ಫಿಲ್ಮ್ ಚೇಂಬರ್’ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯ ಸಂಬಂಧಿ ತೊಂದರೆಯಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅವರ ಕುಟುಂಬದ ಮೂಲಗಳು ಮಾಹಿತಿ ನೀಡಿದೆ. ಅವರಿಗೆ ನಿನ್ನೆ (ಮಾ.27) ಸಡನ್ ಆಗಿ ಹೃದಯ ಬಡಿತದಲ್ಲಿ ಏರುಪೇರು ಆಗಿತ್ತು. ಈ ಹಿನ್ನೆಲೆ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ವೈದ್ಯರು ಅಂಜಿಯೋಗ್ರಾಮ್ ಮಾಡಲಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿ...
1 26 27 28 29 30 114
Page 28 of 114