ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ -ಕಹಳೆ ನ್ಯೂಸ್
ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು. ಇದು ಆಧಾರರಹಿತ ಆರೋಪ ಎಂದರು. ಜಿಎಸ್ಟಿ, ಜಿಎಸ್ಟಿಯೇತರ, ಆದಾಯ ತೆರಿಗೆ... ಹೀಗೆ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ಈಗಾಗಲೇ ನವೆಂಬರ್, ಡಿಸೆಂಬರ್...