Monday, November 25, 2024

ಬೆಂಗಳೂರು

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋ ಚಿತ್ರೀಕರಿಸುತ್ತಿದ್ದ ಸಹ ವಿದ್ಯಾರ್ಥಿ ಅರೆಸ್ಟ್​: ಮೊಬೈಲ್​ನಲ್ಲಿತ್ತು 1200ಕ್ಕೂ ಹೆಚ್ಚು ವಿಡಿಯೋ – ಕಹಳೆ ನ್ಯೂಸ್ 

ಬೆಂಗಳೂರು: ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋವನ್ನು ಚಿತ್ರೀಕರಿಸುತ್ತಿದ್ದ ಆರೋಪದ ಮೇಲೆ ವಿದ್ಯಾರ್ಥಿಯೊಬ್ಬನನ್ನು ಗಿರಿನಗರ ಠಾಣಾ ಪೊಲೀಸರು ಸೋಮವಾರ (ನ.21) ಬಂಧಿಸಿದ್ದಾರೆ. ಶುಭಂ ಎಂ ಆಜಾದ್ ಬಂಧಿತ ಆರೋಪಿ. ಈತ ಹೊಸಕೆರೆಹಳ್ಳಿ ಬಳಿಯ ಖಾಸಗಿ ಕಾಲೇಜಿನ ಬಿಬಿಎ ಎಲ್​ಎಲ್​ಬಿ ಐದನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದ. ಕಾಲೇಜಿನ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಫಿಕ್ಸ್ ಮಾಡಿ ಕೃತ್ಯ ಎಸಗುತ್ತಿದ್ದ. 1200ಕ್ಕೂ ಅಧಿಕ ವಿಡಿಯೋ ಹಾಗೂ ಪೋಟೋಗಳನ್ನು ಆರೋಪಿ ಚಿತ್ರೀಕರಿಸಿರುವುದಾಗಿ ತಿಳಿದುಬಂದಿದೆ. ಸ್ನೇಹಿತೆಯರು ಜೊತೆಯಲ್ಲಿದ್ದಾಗಲು ಅವರ ಅರೆನಗ್ನ ಪೋಟೋ ತೆಗೆದಿದ್ದ....
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಸ್ವತಃ ಬಲವಂತದ ಮತಾಂತರ ಆರೋಪ ಎದುರಿಸುತ್ತಿರುವ ಕಡಬ ಕುಟ್ರಾಪಾಡಿ ನಿವಾಸಿ ವಿಕ್ಟರ್‌ ಮಾರ್ಟಿಸ್‌ ನಿ0ದ ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್‌ – ಕಹಳೆ ನ್ಯೂಸ್

ಬೆಂಗಳೂರು: ಸ್ವತಃ ಬಲವಂತದ ಮತಾಂತರ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬರು ರಾಜ್ಯ ಸರಕಾರ ಜಾರಿಗೆ ತಂದಿರುವ ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರಾಪಾಡಿ ನಿವಾಸಿ ವಿಕ್ಟರ್‌ ಮಾರ್ಟಿಸ್‌ ಎಂಬವರು ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯು ಮುಖ್ಯ ನ್ಯಾ| ಪಿ.ಬಿ. ವರಾಲೆ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದಲ್ಲೂ ‘ಲವ್ ಜಿಹಾದ್ ನಿಷೇಧ ಕಾಯಿದೆ’ ಜಾರಿ.? ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ಬಿಜೆಪಿ ಚಿಂತನೆ –  ಕಹಳೆ ನ್ಯೂಸ್

ಬೆಂಗಳೂರು: ಈ ಬಾರಿ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಲವ್ ಜಿಹಾದ್ ನಿಷೇಧ ಕಾಯಿದೆ ಜಾರಿಗೆ ತರಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂಬ ಮಾಹಿತಿ ತಿಳಿದು ಬಂದಿದೆ. ದಿಲ್ಲಿಯಲ್ಲಿ ನಡೆದ ಶ್ರದ್ಧಾ ಹತ್ಯೆ ಪ್ರಕರಣ ಇಡೀ ದೇಶವನ್ನೆ ಬೆಚ್ಚಿ ಬೀಳಿಸಿದೆ.‌ರಾಜ್ಯದಲ್ಲೂ ಲವ್ ಜಿಹಾದ್ ಪ್ರಕರಣಗಳು ಆಗಾಗ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕಾನೂನು ತರಲು ತಯಾರಿ ನಡೆಯುತ್ತಿದೆ ಎಂದು ಸರ್ಕಾರದ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಕಳೆದ ಬಾರಿ ಬೆಳಗಾವಿಯಲ್ಲಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ಪಾಕಿಸ್ತಾನ್ ಜಿಂದಾಬಾದ್’ ಎಂದವರನ್ನು ಬೆಂಬಲಿಸಿದ ನಟ ಚೇತನ್ :” ಪಾಕಿಸ್ತಾನದ ಜನರು ನಮ್ಮ ಸಹೋದರಿಯರು ಮತ್ತು ಸಹೋದರರು ಶತ್ರುಗಳಲ್ಲ. – ಪಾಕಿಸ್ತಾನ ಕ್ಕೆ ಜೈಕಾರ ಹಾಕೋದು ವಾಕ್ ಸ್ವಾತಂತ್ರ್ಯ ” ವಿವಾದಾತ್ಮಕ ಪೋಸ್ಟ್ – ಕಹಳೆ ನ್ಯೂಸ್

ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗುವುದರ ಮೂಲಕ ವಿವಾದಕ್ಕೆ ಕಾರಣರಾಗಿದ್ದರು. ಕಾಲೇಜು ಫೆಸ್ಟ್ ಅಲ್ಲಿ ಈ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಘೋಷಣೆ ಕೂಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಕೂಡ ನಡೆದಿದೆ ಎಂದು ಹೇಳಲಾಗಿತ್ತು. ಈ ಕುರಿತು ನಟ ಚೇತನ್ ಪ್ರತಿಕ್ರಿಯೆ ನೀಡಿದ್ದಾರೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದವರ ಪರ ಧ್ವನಿ ಎತ್ತಿದ್ದಾರೆ. ಈ ಕುರಿತು ಚೇತನ್ ಟ್ವಿಟ್ ಮಾಡಿದ್ದು,...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಮಾರತ್ತಹಳ್ಳಿಯ ಕಾಲೇಜಿನ ಕಲ್ಚರಲ್ ಕಾರ್ಯಕ್ರಮದಲ್ಲಿ ಪಾಕಿಸ್ತಾನ್​ ಜಿಂದಾಬಾದ್ ​ ಘೋಷಣೆ ಕೂಗಿದ ಯುವಕ – ಯುವತಿ ; ಪ್ರಕರಣ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಇದನ್ನು ಯುವಕರ ಹುಚ್ಚಾಟ ಎಂದು ಕರೆಯಬೇಕೋ ಗೊತ್ತಿಲ್ಲ. ಆದರೆ ಮಾರತ್ತಹಳ್ಳಿಯ ಕಾಲೇಜೊಂದರಲ್ಲಿ ಯುವಕ-ಯುವತಿಯರು ಪಾಕಿಸ್ತಾನ್​ ಜಿಂದಾಬಾದ್​ ಎಂದು ಘೋಷಣೆ ಕೂಗಿದ್ದಾರೆ! ಮಾರತ್ತಹಳ್ಳಿ ನಗರದ ಠಾಣಾ ವ್ಯಾಪ್ತಿಯಲ್ಲಿ ಬರುವ ನ್ಯೂ ಹಾರಿಜನ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಪಾಕಿಸ್ತಾನ್ ಜಿಂದಬಾದ್ ಎಂದು ಯುವಕ-ಯುವತಿಯರು ಕೂಗಾಡಿದ್ದಾರೆ. ಯುವಕ-ಯುವತಿಯರ ಕೂಗಾಟದ ಎಕ್ಸ್​ಕ್ಲೂಸಿವ್ ವಿಡಿಯೋ ಕಹಳೆ ನ್ಯೂಸ್ ಗೆ ಲಭ್ಯವಾಗಿದೆ. ಘಟನೆಯ ಬಗ್ಗೆ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು...
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ; ಕೆಯುಡಬ್ಲುಜೆ ವಾರ್ಷಿಕ ಪ್ರಶಸ್ತಿ ಅರ್ಜಿ ಆಹ್ವಾನ – ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪತ್ರಿಕಾ ಪ್ರಕಟಣೆ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ರಾಜ್ಯದ ಪತ್ರಕರ್ತರಿಂದ ವರದಿ/ಲೇಖನ/ಸುದ್ದಿ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ)2. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿಗೆ)3. ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿಗೆ)4. ಬಿ. ಎಸ್. ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

‘15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ’ರ ನೇಮಕಾತಿ : ಇಂದು(ನ.18 ) ಸಂಜೆ 6ಕ್ಕೆ ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ( Karnataka Teacher Recruitment ) ಸಂಬಂಧ, ಸ್ಪರ್ಧಾತ್ಮಕ ಪರೀಕ್ಷೆ ಬಳಿಕ, ದಾಖಲಾತಿಗಳ ಪರಿಶೀಲನೆ ನಡೆಸಲಾಗಿತ್ತು. ಇದೀಗ ಇಂದು ಸಂಜೆ 5.30ಕ್ಕೆ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪ್ರಕಟವಾಗಲಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ( Minister BC Nagesh...
ಬೆಂಗಳೂರುರಾಜ್ಯಸಿನಿಮಾಸುದ್ದಿ

ನ. 24ಕ್ಕೆ ಪ್ರೈಮ್‌ನಲ್ಲಿ ಕಾಂತಾರಾ ಬಿಡುಗಡೆ; ಓಟಿಟಿಯಲ್ಲಿ ಕೆಜಿಎಫ್ ದಾಖಲೆ ಮುರಿಯುತ್ತಾ ಶೆಟ್ಟಿ ಸಿನಿಮಾ? – ಕಹಳೆ ನ್ಯೂಸ್

ಬೆಂಗಳೂರು, ನ. 17: ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ಕಾಂತರಾ ಸಿನಿಮಾ ಕನ್ನಡ ನಾಡಿನಲ್ಲಿ ಮಾತ್ರವಲ್ಲ ದೇಶದ ಹಲವೆಡೆ ಜನರ ಮಿಡಿತ ಗಿಟ್ಟಿಸುವಲ್ಲಿ ಯಶಸ್ವಿಯಾಗಿದೆ. ಹಿಂದಿ ಮಾರುಕಟ್ಟೆಯಲ್ಲಿ ನೂರು ಕೋಟಿ ರೂ ಗಳಿಕೆಯತ್ತ ಸಾಗುತ್ತಿದೆ. ಒಟ್ಟಾರೆ ಗಳಿಕೆ 400 ಕೋಟಿ ರೂ ಗಡಿ ದಾಟಿ ಹೋಗುತ್ತಿದೆ. ಹಲವಾರು ರೀತಿಯ ದಾಖಲೆಗಳನ್ನು ಕಾಂತರಾ ಪುಡಿಪುಡಿ ಮಾಡುತ್ತಿದೆ. ಇದೇ ವೇಳೆ, ಕಾಂತಾರಾ ಓಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ನವೆಂಬರ್ 24ರಂದು ಬಿಡುಗಡೆಯಾಗುತ್ತಿರುವುದಾಗಿ ಖಚಿತ ಸುದ್ದಿಯೊಂದು ಹೊರಬಿದ್ದಿದೆ. ಅಮೇಜಾನ್...
1 59 60 61 62 63 114
Page 61 of 114