ಸ್ಯಾಂಡಲ್ ವುಡ್ ನ ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ ವಿಧಿವಶ – ಕಹಳೆ ನ್ಯೂಸ್
ಬೆಂಗಳೂರು : ಸ್ಯಾಂಡಲ್ ವುಡ್ ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ(54) ಇಂದು ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದ ತೊಂದರೆಯಿಂದ ಬಳಲುತ್ತಿದ್ದ ಮೋಹನ್ ಜೂನೇಜ ಅವರು ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಕೊನೆಯುಸಿರೆಳೆದಿದ್ದಾರೆ. ಮೋಹನ್ ಜೂನೇಜ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು. ಕಿರುತೆರೆಯ `ವಠಾರ' ಸೀರಿಯಲ್ ನಿಂದ ಜನಪ್ರಿಯತೆ ಗಳಿಸಿದ್ದರು. ಹಲವಾರು ಚಿತ್ರಗಳಲ್ಲಿ ಪೋಷಕ ನಟನಾಗಿ ಮತ್ತು...