ಕಲ್ಲಡ್ಕ ಶ್ರೀರಾಮ ಡಿಗ್ರಿ ಕಾಲೇಜು-ಅಂತರ್‌ಕಾಲೇಜು ಮಟ್ಟದ ಕಬಡ್ಡಿ ಲೀಗ್ -ಕಹಳೆ ನ್ಯೂಸ್
ಕಲ್ಲಡ್ಕ: ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರತಾಪ ಕ್ರೀಡಾಸಂಘದ ವತಿಯಿಂದ ಅಂತರ್ ಕಾಲೇಜು ಮಟ್ಟದ ಕಬಡ್ಡಿ ಲೀಗ್ (ಮ್ಯಾಟ್ ಕಬಡ್ಡಿ) ಪಂದ್ಯವು ದಿನಾಂಕ 15/04/2025ರಂದು ವೇದವ್ಯಾಸ ಸಭಾಂಗಣದಲ್ಲಿ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಂಬೇಡ್ಕರ್ ಜಯAತಿ ಹಿನ್ನೆಲೆಯಲ್ಲಿ ಅಸ್ಪೃಶ್ಯತೆ ನಿವಾರಣೆಯ ಸಂದೇಶದೊAದಿಗೆ ಭಾರತೀಯ...