ಸಿದ್ದರಾಮಯ್ಯ ರಿಸೈನ್ ಮಾಡಿದ್ರೆ ಸಿಎಂ ನಾನಾಗಬೇಕು ಇಲ್ಲ ನೀವಾಗಬೇಕು..: ಮಹಾ ನಾಯಕರ ನಡುಗೆ ಒಪ್ಪಂದ..?-ಕಹಳೆ ನ್ಯೂಸ್
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊರಳಿಗೆ ಮುಡಾ ಹಗರಣ ಸುತ್ತಿಕೊಂಡಿದ್ದು, ಮುಡಾ ಹಗರಣದ A2 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ತೀವ್ರ ಒತ್ತಡ ಕೇಳಿ ಬರುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಒಂದೂವರೆ ವರ್ಷ ಕಳೆಯುತ್ತಾ ಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕೂಗು ಹೆಚ್ಚಾದ ಬೆನ್ನಲ್ಲೆ ರಾಜ್ಯದಲ್ಲಿ ದಲಿತ ಸಿಎಂ ಕೂಗು ಕೂಡ ಜೋರಾಗಿಯೇ ಸದ್ದು ಮಾಡುತ್ತಿದೆ. ಈಗಾಗಲೇ ಮುಖ್ಯಮಂತ್ರಿ ರೇಸ್ ನಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ...