ʼಹರ್ಯಾಣದಲ್ಲಿ ಕಾಂಗ್ರೆಸ್ ತಿರಸ್ಕಾರ; ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿʼ – ಕಹಳೆ ನ್ಯೂಸ್
ಬೆಂಗಳೂರು, ಅಕ್ಟೋಬರ್ 08: ಹರಿಯಾಣದಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆದಿರುವುದು ಇಡಿ ದೇಶದ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದಕ್ಕೆ ದಿಕ್ಸೂಚಿ ಯಾಗಿದೆ. ಕಾಂಗ್ರೆಸ್ ನ ಜಾತಿ ರಾಜಕಾರಣವನ್ನು ಹರಿಯಾಣ ಜನರು ತಿರಸ್ಕಾರ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹರಿಯಾಣದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲು ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ...