ಗ್ಲಾಸ್ ಚೂರಿನಿಂದ ಪತ್ನಿ ಹಾಗೂ ಮಗುವನ್ನು ತಿವಿದು ಕೊಲೆ ಮಾಡಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪತಿ – ಕಹಳೆ ನ್ಯೂಸ್
ಮುಲ್ಕಿ : ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದ ಭೀಕರ ಕೊಲೆ ಪ್ರಕರಣದ ಕುರಿತಂತೆ ಮಂಗಳೂರು ಪೆÇಲೀಸ್ ಆಯುಕ್ತರು ಮಾಹಿತಿ ನೀಡಿದ್ದು, ಕಾರ್ತಿಕ್ ತನ್ನ ಹೆಂಡತಿ ಮತ್ತು ಮಗುವನ್ನು ಗ್ಲಾಸ್ ಚೂರಿನಿಂದ ತಿವಿದು ಕೊಲೆ ಮಾಡಿ ಬಳಿಕ ತಾನು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದ್ದು, ಪತ್ನಿ ಪ್ರಿಯಾಂಕ (28), ಮಗು ಹೃದಯ್...