ಮಂಗಳೂರು ತಾಲೂಕು ಕೊಳವೂರು ಬಿಜೆಪಿ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ – ಕಹಳೆ ನ್ಯೂಸ್
ಅಪ್ರತಿಮ ಸಂಘಟಕ, ಅಗ್ರಪಂಕ್ತಿಯ ಲೇಖಕ, ರಾಷ್ಟ್ರವಾದಿ ದಾರ್ಶನಿಕ, ಮಾರ್ಗದರ್ಶಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮದಿನವಾದ ಇಂದು ಭಾರತೀಯ ಜನತಾ ಪಾರ್ಟಿ ಕೊಳವೂರು ಶಕ್ತಿ ಕೇಂದ್ರದ ವತಿಯಿಂದ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಎಡಪದವು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಮಹಾಬಲ ಸಾಲ್ಯಾನ್ , ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ , ಕೊಳವೂರು ಶಕ್ತಿ ಕೇಂದ್ರ ಅಧ್ಯಕ್ಷರಾದ ಸತೀಶ್...