ವಿವೇಕಾನಂದ ಕಾಲೇಜಿನಲ್ಲಿ ಯಕ್ಷ ದೀಕ್ಷ ಪ್ರಧಾನ ಕಾರ್ಯಕ್ರಮ ಮತ್ತು ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ- ಕಹಳೆ ನ್ಯೂಸ್
ಪುತ್ತೂರು : ದೀಕ್ಷೆ ಪಡೆದು ಭಾಗವತಿಕೆ ಮಾಡಿದರೆ ಯಕ್ಷಗಾನ ಮುಂದುವರಿಯುತ್ತದೆ. ಆದರೆ ಪ್ರೇಕ್ಷಕರಿಗೆ ಯಕ್ಷಗಾನದ ಭಾವಗಳೆಲ್ಲವನ್ನೂ ಅರ್ಥ ಮಾಡಿಕೊಂಡು ಯಕ್ಷಗಾನ ನೋಡುವುದು ಹೇಗೆ ಎಂದು ತಿಳಿಸಿ ಕೊಡುವುದಕ್ಕೆ ಒಂದು ಪ್ರತ್ಯೇಕ ಕಮ್ಮಟ ನಡೆಸುವಂತಹ ಸ್ಥಿತಿಯಲ್ಲಿ ನಾವಿದ್ದೇವೆ. ಯಕ್ಷಗಾನದ ಅಲೆ ಹಬ್ಬುವುದಕ್ಕೆ ಮಹಿಳಾ ಹಾಗೂ ಮಕ್ಕಳ ತಂಡ ಮುಖ್ಯ ಪಾತ್ರ ವಹಿಸಿದ್ದಾರೆ. ಯಾವುದೇ ಕಲೆಯು ನಮ್ಮ ಬದುಕಿನ ಅಂಗವಾಗಿ ಬಂದಾಗ ಅದುವೇ ನಮ್ಮ ಬದುಕನ್ನು ಉತ್ತಮವಾಗಿ ರೂಪಿಸುತ್ತದೆ. ಕನ್ನಡ ಭಾಷೆಯ ಉಳಿವಿಗೆ...