ನೆರೆ ಪೀಡಿತ ಪ್ರದೇಶಗಳಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಭೇಟಿ : ಅಗತ್ಯ ಮೂಲಸೌಕರ್ಯ, ತುರ್ತು ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ- ಕಹಳೆ ನ್ಯೂಸ್
ಬೈಂದೂರು: ನಿರಂತರ ಮಳೆಯಿಂದಾಗಿ ಕ್ಷೇತ್ರದ ಕೆಲವು ಭಾಗದಲ್ಲಿ ನೆರೆ ಆವರಿಸಿದ್ದ ಹಿನ್ನೆಲೆಯಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಬೆಂಗಳೂರಿನಲ್ಲಿ ತಮ್ಮ ಪೂರ್ವ ನಿಯೋಜಿತ ಕಾರ್ಯಕ್ರಮಗಳನ್ನು ಹಠತ್ ರದ್ದುಗೊಳಿಸಿ ನೇರವಾಗಿ ಕ್ಷೇತ್ರಕ್ಕೆ ಆಗಮಿಸಿ, ಶುಕ್ರವಾರ ಬೆಳಗ್ಗೆಯಿಂದ ನೆರೆಪೀಡಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರು ಸೇರಿದಂತೆ ನೆರೆಹಾನಿಗೆ ಒಳಗಾದವರೊಂದಿಗೆ ಮಾತುಕತೆ ನಡೆಸಿದರು. ನಾವುಂದ ಭಾಗದ ಸಾಲ್ಬುಡ, ನಾಡಾ ಗ್ರಾಮದ ಚಿಕ್ಕಳ್ಳಿ, ಸಂಸಾಡಿ, ಹೆಮ್ಮುಂಜಿ, ಕೊಂಣ್ಕೀ ಪ್ರದೇಶಗಳಲ್ಲಿ ಮಳೆಯಿಂದಾಗಿ ನೆರೆ, ಪ್ರವಾಹ, ಗುಡ್ಡೆ...