ರಾಜ್ಯದಲ್ಲಿ ನಾಳೆ (ಜ.02) ಮಹಿಳಾ ಮೋರ್ಚಾದಿಂದ ಪ್ರತಿಭಟನೆ: ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆಗೆ ಆಗ್ರಹ
ಬೆಂಗಳೂರು: ಬಾಣಂತಿಯರ ಸಾವನ್ನು ತಡೆಯಲು ವಿಫಲರಾದ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು.ಮಂಜುಳಾ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಬಾಣಂತಿಯರ ಸಾವನ್ನು ತಡೆಯುವುದರಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಅವರು ರಾಜೀನಾಮೆ ಕೊಟ್ಟು ಮನೆಗೆ ವಾಪಸ್...