ರಾಜ್ಯಗಳ ಪ್ರಸ್ತುತ ಕರೋನ ಸ್ಥಿತಿಯ ಬಗ್ಗೆ ವರದಿ ಕೇಳಿದ ಸುಪ್ರೀಂಕೋರ್ಟ್ – ಕಹಳೆ ನ್ಯೂಸ್
ನವದೆಹಲಿ - ಕೋವಿಡ್ ಸೋಂಕು ಹೆಚ್ಚಾಗಿರುವ ನಾಲ್ಕು ರಾಜ್ಯಗಳು ಸೇರಿದಂತೆ ದೇಶದ ಎಲ್ಲಾ ರಾಜ್ಯಗಳಲ್ಲೂ ಸೋಂಕಿನ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಎರಡು ದಿನಗಳ ಒಳಗೆ ವರದಿ ನೀಡುವಂತೆ ಸುಪ್ರೀಂಕೋರ್ಟ್ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಎಸ್.ರೆಡ್ಡಿ, ಎಂ.ಆರ್. ಷಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್‍ನ ವಿಭಾಗೀಯ ಪೀಠ ಕೋವಿಡ್ ಸಾಂಕ್ರಾಮಿಕ ರೋಗದ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ಕೆಲವು ರಾಜ್ಯಗಳಲ್ಲಿ ಸೋಂಕು ಹೆಚ್ಚಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ....