ಅಕುಲ್ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಭರ್ಜರಿ ಡ್ರಗ್ಸ್ ಪಾರ್ಟಿ.? – ಕಹಳೆ ನ್ಯೂಸ್
ಬೆಂಗಳೂರು: ನಿರೂಪಕ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜನೆ ಮಾಡಲಾಗುತ್ತಿತ್ತು. ಸ್ಟಾರ್ ನಟ-ನಟಿಯರು, ನಟರ ಪತ್ನಿಯರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭ್ಯವಾಗಿದೆ. ಇದೇ ಕಾರಣಕ್ಕಾಗಿ ಅಕುಲ್ ಬಾಲಾಜಿಯನ್ನು ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗಿದೆ. ದೊಡ್ಡಬಳ್ಳಾಪುರ ಬಳಿಯ ತಮ್ಮ ಸನ್ ಶೈನ್ ರೆಸಾರ್ಟ್ ನಲ್ಲಿ ಅಕುಲ್ ಬಾಲಾಜಿ ಪಾರ್ಟಿ ಗಳನ್ನು ಆಯೋಜಿಸುತ್ತಿದ್ದರು. ಈ ಪಾರ್ಟಿಯಲ್ಲಿ ಅಗತ್ಯ ಇದ್ದವರಿಗೆ ರಾಹುಲ್ ಹಾಗೂ...