ಸಾಮಾನ್ಯ ಸೈಕಲನ್ನು ಎಲೆಕ್ಟ್ರಿಕ್ ಸೈಕಲಾಗಿ ಪರಿವರ್ತಿಸಿ ತನ್ನ ಪ್ರತಿಭೆಯನ್ನು ಮೆರೆದ ವಿದ್ಯಾರ್ಥಿ-ಕಹಳೆ ನ್ಯೂಸ್
ಬಂಟ್ವಾಳ: ಕಡೇಶ್ವಾಲ್ಯ ಸರಕಾರಿ ಶಾಲೆಯ ವಿದ್ಯಾರ್ಥಿಯೋರ್ವ ತನ್ನಲ್ಲಿರುವ ಸಾಮಾನ್ಯ ಸೈಕಲನ್ನು ಎಲೆಕ್ಟ್ರಿಕ್ ಸೈಕಲಾಗಿ ಪರಿವರ್ತಿಸಿ ತನ್ನ ಪ್ರತಿಭೆಯನ್ನು ಮೆರೆದಿದ್ದಾನೆ. ಕೆದಿಲ ಗ್ರಾಮದ ಗುಡ್ಡಕೋಡಿ ನಿವಾಸಿ ಲಿಂಗಪ್ಪ ನಾಯ್ಕ-ಆಶಾ ದಂಪತಿಯ ಪುತ್ರ, ಕಡೇಶ್ವಾಲ್ಯ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಮೋಕ್ಷಿತ್ ನಾಯ್ಕ ಈಗ 2 ಕಿ.ಮೀ.ದೂರದ ಶಾಲೆಗೆ ಇದೇ ಸೈಕಲ್ನಲ್ಲಿ ಹೋಗುತ್ತಾನೆ. 9 ಸಾವಿರ ರೂ. ವೆಚ್ಚ ಮೋಕ್ಷಿತ್ಗೆ ಶಾಲೆಗೆ ಹೋಗಲು ಹೆತ್ತವರು ಸೈಕಲ್ ತೆಗೆದುಕೊಟ್ಟಿದ್ದರು. ಅದನ್ನು ಎಲೆಕ್ಟ್ರಿಕ್ ಸೈಕಲಾಗಿ...