12,100 ಕೋಟಿ ರೂ ಕೃಷಿ ಸಾಲ ಮನ್ನಾ ; ತಮಿಳುನಾಡು ಸರ್ಕಾರ ಘೋಷಣೆ-ಕಹಳೆ ನ್ಯೂಸ್
ಚೆನ್ನೈ : ತಮಿಳುನಾಡು ಸರ್ಕಾರ 12,100 ಕೋಟಿ. ರೂ ಮೊತ್ತದ ಕೃಷಿ ಸಾಲ ಮನ್ನಾ ಮಾಡುವುದಾಗಿ ಶುಕ್ರವಾರ ಘೋಷಣೆ ಮಾಡಿದೆ. ವಿಧಾನಸಭೆಯಲ್ಲಿ ಸಿಎಂ ಕೆ.ಪಳನಿಸ್ವಾಮಿ ಅವರು ಈ ಸಾಲ ಮನ್ನಾ ಯೋಜನೆಯಿಂದ ರಾಜ್ಯದ 16.43 ಲಕ್ಷ ರೈತರಿಗೆ ಲಾಭವಾಗಲಿದೆ. ತಕ್ಷಣದಿಂದ ಈ ಯೋಜನೆಯು ಜಾರಿಗೆ ಬರಲಿದೆ. ಶೀಘ್ರದಲ್ಲೇ ಅವಶ್ಯವಿರುವ ಅನುದಾನವನ್ನು ಒದಗಿಸಲಾಗುವುದು ಎಂದು ಹೇಳಿದರು. ಎಐಎಡಿಎಂಕೆವು, ನೀಡಿರುವ ಭರವಸೆಗಳನ್ನು ಈಡೇರಿಸುವುದರೊಂದಿಗೆ ನೂತನ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು ಏಕೈಕ ಪಕ್ಷವಾಗಿದೆ...