ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ನೇತಾಜಿ ಜನ್ಮದಿನ ಹಾಗೂ ಪರಾಕ್ರಮ ದಿನದ ಆಚರಣೆ-ಕಹಳೆ ನ್ಯೂಸ್
“ರಾಷ್ಟ್ರಕ್ಕೆ ನೇತಾಜಿಯ ಅದಮ್ಯ ನೇತಾಜಿಯ ಮತ್ತು ನಿಸ್ವಾರ್ಥ ಸೇವೆಯನ್ನು ಗೌರವಿಸುವ ಮತ್ತು ನೆನಪಿಸುವ ಸಲುವಾಗಿ, ವಿಶೇಷವಾಗಿ ಯುವಕರಿಗೆ ಸ್ಪೂರ್ತಿ ನೀಡುವ ಸಲುವಾಗಿ ಈ ವರ್ಷದಿಂದ ಪ್ರತಿ ವರ್ಷ ಜನವರಿ 23 ರಂದು “ಪರಾಕ್ರಮ ದಿನ” ಎಂದು ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ದಿನಾಂಕ 23/01/2021 ರಂದು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ನೇತಾಜಿ ಜನ್ಮದಿನ ಹಾಗೂ ಪರಾಕ್ರಮ ದಿನವನ್ನು ಆಚರಿಸಲಾಯಿತು. “ನೇತಾಜಿ ಪ್ರತಿಕೂಲ ಪರಿಸ್ಥಿತಿಯಲ್ಲಿ...