Thursday, January 23, 2025

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಪೆಟ್ರೋಲ್ ಮತ್ತು ಡೀಸೇಲ್ ದರ ಲೀಟರ್‌ಗೆ ತಲಾ 25 ಪೈಸೆ ಹೆಚ್ಚಳ -ಕಹಳೆ ನ್ಯೂಸ್

ಜನವರಿ 18ರಿಂದ ದೆಹಲಿಯಲ್ಲಿ ಪೆಟ್ರೋಲ್ ದರವು ಲೀಟರ್‌ಗೆ ರೂ. 84.95 ತಲುಪಿದೆ. ತೈಲ ಮಾರ್ಕೆಟಿಂಗ್ ಕಂಪನಿಗಳ ಅಧಿಸೂಚನೆ ಅನ್ವಯ ದೆಹಲಿ ಮತ್ತು ಇತರ ಕಡೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಲೀಟರ್‌ಗೆ ತಲಾ 25 ಪೈಸೆಗಳ ಸರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಪೆಟ್ರೋಲ್-ಡೀಸೆಲ್ ಮೇಲೆ ಹಾಕಿರುವ ಅಬಕಾರಿ ಸುಂಕ 48% ಆಗಿದ್ದು, 2020ರ ಏಪ್ರಿಲ್ ನಿಂದ ನವೆಂಬರ್ ತಿಂಗಳವರೆಗೆ ಅಬಕಾರಿ ಸುಂಕ 1,96,342 ಕೋಟಿ, ಹಾಗೆಯೇ...
ಹೆಚ್ಚಿನ ಸುದ್ದಿ

ಶಿಶು ಮಾರಾಟ ಜಾಲ ಪ್ರಕರಣ ಸಂಬಂಧಿಸಿದಂತೆ ಆರು ಮಹಿಳೆಯರ ಸಹಿತ ಎಂಟು ಮಂದಿ ಬಂಧನ-ಕಹಳೆ ನ್ಯೂಸ್

ಮುಂಬೈ: ಮಕ್ಕಳ ಬೃಹತ್ ಮಾರಾಟ ಜಾಲ ಪ್ರಕರಣ ಸಂಬಂಧ ಆರು ಮಹಿಳೆಯರ ಸಹಿತ ಎಂಟು ಮಂದಿಯನ್ನು ಮುಂಬೈ ಪೊಲೀಸರು ಬಂದಿಸಿದ್ದಾರೆ. ಕಳೆದ ಆರು ತಿಂಗಳಲ್ಲಿ ಈ ತಂಡ ನಾಲ್ಕು ಶಿಶುಗಳನ್ನು ಮಾರಾಟ ಮಾಡಿದೆ. ಇವರ ತಂಡವನ್ನು ಪೊಲೀಸ್ ಅಧಿಕಾರಿಗಳಾದ ಯೋಗೇಶ್ ಚವಾಣ್ ಮತ್ತು ಮನಿಷ್ ನೇತೃತ್ವದ ತಂಡ ಈ ಪ್ರಕರಣ ಬಯಲಿಗೆಳೆದಿದೆ. ರುಕ್ಸಾರ್ ಶೇಖ್, ಶಾಹಜಹಾನ್ ಹಾಗೂ ರೂಪಾಲಿ ವರ್ಮ ಈ ತಂಡದ ಪ್ರಮುಖ ಸದಸ್ಯರಾಗಿದ್ದಾರೆ. ಇವರು 60000 ರೂಪಾಯಿಗೆ...
ಹೆಚ್ಚಿನ ಸುದ್ದಿ

ಅರಣ್ಯ ಇಲಾಖೆಯ ಅರೆಕಾಲಿಕ ನೌಕರನೊಬ್ಬ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿಟ್ಟು ಕಚೇರಿಯಲ್ಲಿ ನೇಣಿಗೆ ಶರಣು-ಕಹಳೆ ನ್ಯೂಸ್

ಗಂಗಾವತಿ : ನಿವೃತ್ತಿ ಅಂಚಿನಲ್ಲಿದ್ದ ಅರಣ್ಯ ಇಲಾಖೆಯ ಅರೆಕಾಲಿಕ ನೌಕರನೊಬ್ಬ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ, ಸೋಮವಾರ ಬೆಳಗ್ಗೆ ಕಚೇರಿಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ನೌಕರನನ್ನು 59 ಪ್ರಾಯದ ಟಿ.ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದೆ. ಕಳೆದ 37 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಅರೆಕಾಲಿಕ ನೌಕರನಾಗಿ ಕೆಲಸ ಮಾಡುತ್ತಿದ್ದ ಇವರು ಇದೇ ವರ್ಷ ಮೇ...
ಹೆಚ್ಚಿನ ಸುದ್ದಿ

ಗಣರಾಜ್ಯೋತ್ಸವದಂದು ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಆರಂಭ-ಕಹಳೆ ನ್ಯೂಸ್

ಲಕ್ನೋ : ಗಿಡ ನೆಡುವ ಅಭಿಯಾನ ಹಾಗೂ ರಾಷ್ಟ್ರ ಧ್ವಜಾರೋಹಣದೊಂದಿಗೆ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಗಣರಾಜ್ಯೋತ್ಸವದಂದು ಚಾಲನೆ ನೀಡಲಾಗುತ್ತಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅನುವು ಮಾಡಿಕೊಟ್ಟ ಸುಪ್ರೀಂಕೋರ್ಟ್‍ನ ಐತಿಹಾಸಿಕ ತೀರ್ಪಿನ ಅನ್ವಯ ಜಿಲ್ಲೆಯಲ್ಲೇ ಮಸೀದಿ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡುವಂತೆ ಸೂಚಿಸಿದ ಕಾರಣದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ದೇಗುಲು ನಿರ್ಮಾಣವಾಗುವ ಸ್ಥಳದಿಂದ 25 ಕಿಲೋ ಮೀಟರ್ ದೂರದಲ್ಲಿ ಮಂಜೂರು ಮಾಡಲಾಗಿರುವ ಐದು ಎಕರೆ ಜಮೀನಿನಲ್ಲಿ ಭವ್ಯ ಮಸೀದಿ ನಿರ್ಮಾಣದ ಕಾರ್ಯವನ್ನು...
ಹೆಚ್ಚಿನ ಸುದ್ದಿ

ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ಬೋನಿಗೆ ಬಿದ್ದ ಚಿರತೆ-ಕಹಳೆ ನ್ಯೂಸ್

ಗಂಗಾವತಿ : ಗಂಗಾವತಿ ತಾಲೂಕಿನ ಆನೆಗೊಂದಿಯ ಐತಿಹಾಸಿಕ ದುರ್ಗಾದೇವಿ ಬೆಟ್ಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೋಮವಾರ ಬೆಳಗ್ಗೆ ಚಿರತೆ ಬಿದ್ದಿದೆ. ಅಂದಾಜು 6 ರಿಂದ 7 ವರ್ಷದ ಗಂಡು ಚಿರತೆ ಇದಾಗಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆ ಆನೆಗೊಂದಿ ವ್ಯಾಪ್ತಿಯಲ್ಲಿಯೇ ಕಳೆದ ಮೂರು ತಿಂಗಳಿಂದ ಚಿರತೆ ಸೆರೆಹಿಡಿಯಲು ಬೀಡುಬಿಟ್ಟಿತ್ತು. ಇದೇ ಬೆಟ್ಟದಲ್ಲಿ ಕಳೆದ ತಿಂಗಳು ಚಿರತೆಯೊಂದನ್ನ ಸೆರೆಹಿಡಿಯಲಾಗಿತ್ತು. ಇದೀಗ ಎರಡನೇ ಚಿರತೆಯು ಬೋನಿಗೆ...
ಹೆಚ್ಚಿನ ಸುದ್ದಿ

ಇಂದಿನಿಂದ ಕೊರೋನಾ ಲಸಿಕೆ ಅಭಿಯಾನ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ನಡೆಯಲಿದೆ; ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್-ಕಹಳೆ ನ್ಯೂಸ್

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಇಂದಿನಿಂದ ಕೊರೋನಾ ಲಸಿಕೆ ಅಭಿಯಾನ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. ಅಲ್ಲದೇ ಕೊರೋನಾ ಲಸಿಕೆ ಪಡೆದವರಲ್ಲಿ ಯಾರಿಗೂ ಅಡ್ಡ ಪರಿಣಾಮ ಉಂಟಾಗಿಲ್ಲ. ಕೊರೋನಾ ಲಸಿಕೆಯನ್ನು ಡಾ. ಸುದರ್ಶನ್ ಬಲ್ಲಾಳ್ ಅವರು ಕೂಡ ಪಡೆದಿದ್ದು, ಅವರಿಗೂ ಯಾವುದೇ ಸಮಸ್ಯೆಯಾಗಿಲ್ಲ. ಲಸಿಕೆಯ ಮೇಲೆ ವಿಶ್ವಾಸವಿಡಿ. ಲಸಿಕೆ ಪಡೆದವರು ಮೈ ಮರೆಯದೇ, ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಲೇ ಬೇಕು ಎಂದು...
ಹೆಚ್ಚಿನ ಸುದ್ದಿ

ಪ್ರೇಯಸಿ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಾಳೆಂಬ ಕಾರಣಕ್ಕೆ ಕೊಲೆ ಮಾಡಿ ಗೋಡೆಯೊಳಗೆ ಹಾಕಿ ಮುಚ್ಚಿಟ್ಟಿದ್ದ ಕಿರಾತಕ-ಕಹಳೆ ನ್ಯೂಸ್

ಪಾಲ್ಘರ್ ಜಿಲ್ಲೆಯಲ್ಲಿ ಪ್ರೇಯಸಿ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಾಳೆಂಬ ಕಾರಣಕ್ಕೆ ಸಿಟ್ಟಿಗೆದ್ದ ಪ್ರೇಮಿ ಆಕೆಯನ್ನು ಕೊಲೆ ಮಾಡಿ ಗೋಡೆಯೊಳಗೆ ಮರೆಮಾಚಿ ಇಟ್ಟಿದ್ದ ಘಟನೆ ನಡೆದಿದೆ. ಯುವಕನೋರ್ವ 32 ವರ್ಷದ ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದ. ಆದರೆ, ಯುವಕನ ಮನೆಯಲ್ಲಿ ಇವರಿಬ್ಬರ ಪ್ರೀತಿಗೆ ಒಪ್ಪಿಗೆ ಇರಲಿಲ್ಲ. ಆದರೆ, ಯುವತಿ ತನ್ನನ್ನು ಮದುವೆಯಾಗುವಂತೆ ಯುವಕನನ್ನು ಒತ್ತಾಯಿಸುತ್ತಿದ್ದಳು. ಇದರಿಂದ ಕೋಪಗೊಂಡ ಆ ಯುವಕ ಕಳೆದ ವರ್ಷ ಅಕ್ಟೋಬರ್ ನಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ....
ಹೆಚ್ಚಿನ ಸುದ್ದಿ

ಪಡುಬಿದ್ರಿ ಠಾಣಾ ವ್ಯಾಪ್ತಿಯ ಅದಮಾರು ಕುಂಜೂರು ರೈಲ್ವೆ ಹಳಿಯ ಬಳಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ-ಕಹಳೆ ನ್ಯೂಸ್

ಪಡುಬಿದ್ರಿ : ಪಡುಬಿದ್ರಿ ಠಾಣಾ ವ್ಯಾಪ್ತಿಯ ಅದಮಾರು ಕುಂಜೂರು ರೈಲ್ವೆ ಹಳಿಯ ಬಳಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ಈ ಮೃತದೇಹ ಬಾಗಲಕೋಟೆ ಮೂಲದ ಹುಲ್ಲಪ್ಪ ಆಗಿದ್ದು, ಈ ವ್ಯಕ್ತಿಗೆ ವಿವಾಹವಾಗಿ 2 ಮಕ್ಕಳು ಇದ್ದಾರೆ ಎಂದು ತಿಳಿದು ಬಂದಿದೆ. ಆದರೆ ಆತ್ಮಹತ್ಯೆಗೆ ಕಾರಣವೇನೆಂದು ಇದುವರೆಗೂ ತಿಳಿದುಬಂದಿಲ್ಲ. ಆದರೆ ಮೃತದೇಹವನ್ನು ಕಾಪುವಿನ ಸಮಾಜ ಸೇವಕ ಸೂರಿ ಶೆಟ್ಟಿ ಹಾಗೂ ನಾಗರಾಜರ ಸಹಾಯದಿಂದ ಆಂಬುಲೆನ್ಸ್ ಮೂಲಕ ಶವವನ್ನು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ...
1 72 73 74 75 76 132
Page 74 of 132