Wednesday, January 22, 2025

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

BREAKING NEWS : ನಟಿ ರಾಗಿಣಿ ಪರಪ್ಪನ ಅಗ್ರಹಾರದಿಂದ ಆಸ್ಪತ್ರೆಗೆ ಶಿಫ್ಟ್ – ಕಹಳೆ ನ್ಯೂಸ್

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ಅವರನ್ನು ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ಅವರಿಗೆ ತಡರಾತ್ರಿ ಉಸಿರಾಟ, ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ....
ಹೆಚ್ಚಿನ ಸುದ್ದಿ

ಮೊಬೈಲ್‌ ಆಪ್‌ಗಳ ಮೂಲಕ ಸಾಲ ಪಡೆಯುತ್ತಿದ್ದೀರಾ? ಹಾಗಾದ್ರೇ RBI ನೀಡಿರುವ ‘ಈ ಎಚ್ಚರಿಕೆ’ಯನ್ನು ತಪ್ಪದೇ ಓದಿ.! – ಕಹಳೆ ನ್ಯೂಸ್

ನವದೆಹಲಿ: ಅನಧಿಕೃತ ಸಾಲ ನೀಡುವ ವೇದಿಕೆಗಳು ಮತ್ತು ಮೊಬೈಲ್ ಆಯಪ್ ಗಳ ವಿರುದ್ಧ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿಐ) ಬುಧವಾರ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.ತ್ವರಿತ ಮತ್ತು ತೊಂದರೆರಹಿತ ಸಾಲಗಳನ್ನು ಪಡೆಯುವ ವೇಳೆಯಲ್ಲಿ ಜನರು ಡಿಜಿಟಲ್ ಸಾಲ ಹಗರಣಕ್ಕೆ ಬಲಿಯಾಗುತ್ತಿದ್ದಾರೆ ಎಂಬ ವರದಿಗಳು ಬಂದಿವೆ ಎಂದು ಆರ್ ಬಿಐ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಆರ್‌ಬಿಐ ಹೇಳಿರೋದು ಏನು? : ಸಾಲ ಪಡೆಯುವ ಭರವಸೆಗಳ ಮೇಲೆ ಹೆಚ್ಚುತ್ತಿರುವ ಅನಧಿಕೃತ ಡಿಜಿಟಲ್...
ಹೆಚ್ಚಿನ ಸುದ್ದಿ

ಕರ್ಫ್ಯೂ ವೇಳೆ ಬಾರ್, ಪಬ್ ಮುಚ್ಚದಿದ್ದರೆ ಅಬಕಾರಿ ಪರವಾನಗಿ ರದ್ದು; ಸಚಿವರ ಖಡಕ್​ ಎಚ್ಚರಿಕೆ – ಕಹಳೆ ನ್ಯೂಸ್

ಬೆಂಗಳೂರು : ಕರ್ಫ್ಯೂ ಸಂದರ್ಭದಲ್ಲಿ ಬಾಗಿಲು ಮುಚ್ಚದಿರುವ ಪಬ್ ಹಾಗೂ ಮದ್ಯದಂಗಡಿಗಳ ಪರವಾನಗಿಯನ್ನೇ ಅಮಾನತು ಮಾಡಲಾಗುವುದು ಎಂದು ಅಬಕಾರಿ ಇಲಾಖೆ ಸಚಿವ ಎಚ್. ನಾಗೇಶ್ ಎಚ್ಚರಿಕೆ ನೀಡಿದ್ದಾರೆ. ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲು ಕಮಿಷನರ್‌ಗೆ ಸೂಚಿಸಿದ್ದೇನೆ. ಬ್ರಿಟನ್‌ನಲ್ಲಿ ಕಂಡುಬಂದಿರುವ ರೂಪಾಂತರಿ ಕರೊನಾ ತಡೆಯುವ ಸಲುವಾಗಿ ಸರ್ಕಾರ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ವಿಧಿಸಿದೆ. ಹಾಗಾಗಿ, ಎಲ್ಲ ಮದ್ಯದಂಗಡಿ ಮಾಲೀಕರು ಕಡ್ಡಾಯವಾಗಿ ರಾತ್ರಿ 10 ಗಂಟೆಯೊಳಗೆ ಪಬ್ ಹಾಗೂ...
ಹೆಚ್ಚಿನ ಸುದ್ದಿ

‘ಈಗಾಗಲೇ ವಿಶ್ವದ 23 ಲಕ್ಷ ಮಂದಿಗೆ ಕೊರೊನಾ ಲಸಿಕೆ ತಲುಪಿದೆ; ಭಾರತದ ಸರದಿ ಯಾವಾಗ?’ – ರಾಹುಲ್ ಪ್ರಶ್ನೆ- ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು "ಈಗಾಗಲೇ ವಿಶ್ವದ 23 ಲಕ್ಷ ಮಂದಿಗೆ ಕೊರೊನಾ ಲಸಿಕೆ ತಲುಪಿದೆ. ಚೀನಾ, ಅಮೇರಿಕಾ, ಯುಕೆ, ರಷ್ಯಾದಲ್ಲಿ ಕೊರೊನಾ ಲಸಿಕೆ ಹಾಕುವ ಪ್ರಕ್ರಿಯೆ ಪ್ರಾರಂಭವಾಗಿದೆ. ಇನ್ನೂ ಭಾರತದ ಸರದಿ ಯಾವಾಗ ಬರುತ್ತದೆ?" ಎಂದು ಪ್ರಶ್ನಿಸಿದ್ದಾರೆ. ಹಾಗೆಯೇ "ಚೀನಾವು ಕೊರೊನಾ ಲಸಿಕೆ ಹಾಕುವ ರಾಷ್ಟ್ರಗಳಲ್ಲಿ ಮುಂಚೂಣಿಯಲ್ಲಿವೆ. ನಂತರದ ಸ್ಥಾನಗಳಲ್ಲಿ ಅಮೇರಿಕಾ, ಬ್ರಿಟನ್‌‌‌, ರಷ್ಯಾ ಇದೆ" ಎಂದು ಟ್ವೀಟ್‌ ಮಾಡಿದ್ದಾರೆ....
ಹೆಚ್ಚಿನ ಸುದ್ದಿ

ಶಿವಮೊಗ್ಗದಲ್ಲಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ನೇಣಿಗೆ ಶರಣು- ಕಹಳೆ ನ್ಯೂಸ್

ಶಿವಮೊಗ್ಗ: ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯೋರ್ವಳು, ಕಾಲೇಜು ಹಾಸ್ಟೇಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಲಲಿತಾ ಎಂದು ಗುರುತಿಸಲಾಗಿದೆ. ಈಕೆ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು. ಈಕೆಯ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಈ ಪ್ರಕರಣವು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ....
ಹೆಚ್ಚಿನ ಸುದ್ದಿ

ದೇಶದಲ್ಲಿ ಇಂದು ರಾಷ್ಟ್ರೀಯ ರೈತರ ದಿನ- ಕಹಳೆ ನ್ಯೂಸ್

ನವದೆಹಲಿ: ಇಂದು ದೇಶದಲ್ಲಿ‌ ಪ್ರತಿ ವರ್ಷದಂತೆ ರಾಷ್ಟ್ರೀಯ ರೈತರ ದಿನ ಅಥವಾ ಕಿಸಾನ್ ದಿವಸ ಎಂದು ಆಚರಿಸಲಾಗುತ್ತದೆ. ಭಾರತದ 5ನೇ ಪ್ರಧಾನ ಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಸ್ಮರಣಾರ್ಥ ಜನ್ಮದಿನವನ್ನು ಕಿಸಾನ್ ದಿವಸ ಎಂದು ಆಚರಿಸಲಾಗುತ್ತದೆ. ಚೌಧರಿ ಚರಣ್ ಸಿಂಗ್ ಅವರು ಅಲ್ಪಾವಧಿಗೆ ಭಾರತದ ಪ್ರಧಾನ ಮಂತ್ರಿಯಾಗಿದ್ದರು.ಅವರು ಜುಲೈ 1979 ರಲ್ಲಿ ‌ಪ್ರಧಾನಿಯಾಗಿ ಹುದ್ದೆ ವಹಿಸಿ, 1980ರ ಜನವರಿಯವರೆಗೆ ಇದ್ದರು. ಈ ಅವಧಿಯಲ್ಲಿ ರೈತರ ಕಲ್ಯಾಣಕ್ಕೆ ಅವರು ತಂದ...
ಹೆಚ್ಚಿನ ಸುದ್ದಿ

BREAKING NEWS : ರಾಜ್ಯದಲ್ಲಿ ಇಂದು ರಾತ್ರಿಯಿಂದ ಜ.2ರವರೆಗೆ ‘ನೈಟ್ ಕರ್ಪ್ಯೂ’ ಜಾರಿ – ಸಿಎಂ ಯಡಿಯೂರಪ್ಪ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಕೋವಿಡ್ 19 ಹೊಸ...
ಹೆಚ್ಚಿನ ಸುದ್ದಿ

ಭಾರತವನ್ನು ವೈಜ್ಞಾನಿಕ ಕಲಿಕೆಗೆ ಅತ್ಯಂತ ವಿಶ್ವಾಸಾರ್ಹ ಕೇಂದ್ರವನ್ನಾಗಿ ಮಾಡಲು ತಮ್ಮ ಸರ್ಕಾರ ಕ್ರಮಕೈಗೊಳ್ಳುತ್ತಿದೆ; ಪ್ರಧಾನಿ ನರೇಂದ್ರ ಮೋದಿ-ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು "ಭಾರತವನ್ನು ವೈಜ್ಞಾನಿಕ ಕಲಿಕೆಗೆ ಅತ್ಯಂತ ವಿಶ್ವಾಸಾರ್ಹ ಕೇಂದ್ರವನ್ನಾಗಿ ಮಾಡಲು ತಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ" ಎಂದು ಹೇಳಿದ್ದಾರೆ. ಮೋದಿ ಅವರು "ಭಾರತವು, ವಿಶ್ವ ದರ್ಜೆ ವೈಜ್ಞಾನಿಕ ಪರಿಹಾರೋಪಾಯಗಳನ್ನು ಸಾಧಿಸಲು ಅವಶ್ಯವಿರುವಂತ ದತ್ತಾಂಶ, ಜನಸಂಖ್ಯೆ, ಬೇಡಿಕೆ ಹಾಗೂ ಪ್ರಜಾಪ್ರಭುತ್ವವನ್ನು ಹೊಂದಿದೆ" ಎಂದು ಭಾರತ ಅಂತರಾಷ್ಟ್ರೀಯ ವಿಜ್ಞಾನೋತ್ಸವ 2020ರ ಉದ್ಘಾಟನಾ ಭಾಷಣದಲ್ಲಿ ತಿಳಿಸಿದ್ದಾರೆ. ಹಾಗೆ "ಭಾರತವು ವಿಜ್ಞಾನ-ತಂತ್ರಜ್ಞಾನ ಮತ್ತು ನಾವೀನ್ಯತೆಗಳಲ್ಲಿ ಶ್ರೀಮಂತ ಪರಂಪರೆಯನ್ನು ಹೊಂದಿದೆ....
1 83 84 85 86 87 132
Page 85 of 132