ಗೋ ಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ವಿರೋಧ: ಬಿಜೆಪಿಗೆ ಎದುರಾಯಿತು ಸಂಕಷ್ಟ – ಕಹಳೆ ನ್ಯೂಸ್
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೋಹತ್ಯೆ ನಿಷೇಧಕ ವಿಧೇಯಕವನ್ನು ಜಾತ್ಯಾತೀತ ಜನತಾದಳ ಪಕ್ಷವು ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಜೆಡಿಎಸ್ ಅಧ್ಯಕ್ಷ ಎಚ್ ಡಿ ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, 2010ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ತಂದಾಗ ನಾವು ವಿರೋಧಿಸಿದ್ದೆವು. ಇದೀಗ ಬಿಜೆಪಿ ಸರ್ಕಾರ ಮತ್ತೊಮ್ಮೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ. ಹೀಗಾಗಿ ಈ...