Sunday, November 24, 2024

archiveಕಹಳೆ ನ್ಯೂಸ್

ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಂದ ವಿನೂತನ ಪ್ರಯತ್ನ ಸ್ವಾತಂತ್ರ್ಯ ಅಮೃತ ಸಂಭ್ರಮದ ಪ್ರಯುಕ್ತ ಸಂಗ್ರಾಮ ಸ್ಮರಣೆ- ಬಲಿದಾನ ಸಂಸ್ಮರಣೆ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಸ್ವಾತಂತ್ರ್ಯ ಅಮೃತ ಸಂಭ್ರಮದ ಪ್ರಯುಕ್ತ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮತ್ತು ಉಪನ್ಯಾಸಕರ ಸಹಕಾರದಿಂದ ಸಂಗ್ರಾಮ ಸ್ಮರಣೆ- ಬಲಿದಾನ ಸಂಸ್ಮರಣೆ ಎಂಬ ಕಾರ್ಯಕ್ರಮವು ಯುಟ್ಯೂಬ್‍ನಲ್ಲಿ ಬಿತ್ತರಗೊಳ್ಳಲಿದ್ದು, ಈ ಕಾರ್ಯಕ್ರಮವು ಆಗಸ್ಟ್ 15 ರಂದು ಸಂಜೆ ಐದು ಗಂಟೆಗೆ ಪ್ರಸಾರವಾಗಲಿದೆ. ಇದು ಭಾರತ ಸ್ವಾತಂತ್ರ್ಯ ಸಂಗ್ರಾಮದ ಹೋರಾಟ ಬಲಿದಾನಗಳ ಕಲಾತ್ಮಕ ಮತ್ತು ಸೃಜನಶೀಲ ಪ್ರಸ್ತುತಿಯಾಗಿದೆ. ಹಾಡುಗಾರಿಕೆಯಲ್ಲಿ ವಿದ್ಯಾರ್ಥಿಗಳಾದ ಹೇಮಸ್ವಾತಿ ಕುರಿಯಾಜೆ ಮತ್ತು ಶ್ರೇಯಾ ಎ, ಚೆಂಡೆಮದ್ದಳೆಯಲ್ಲಿ ಅಂಬಾತನಯ ಅರ್ನಾಡಿ, ಲಕ್ಷ್ಮೀಶ...
ಅಂಕಣ

ಆಗಸ್ಟ್ 15ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರ ಜನ್ಮ ದಿನದ ಕುರಿತು ವಿಶೇಷ ಲೇಖನ- ಕಹಳೆ ನ್ಯೂಸ್

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಎಂಬ ಗ್ರಾಮದಲ್ಲಿ ಹುಟ್ಟಿದ ರಾಯಣ್ಣ, ಕೇವಲ 32 ವರ್ಷಗಳ ಕಾಲ ಬದುಕಿದ್ದರೂ, ಅವರ ಹೋರಾಟದ ಕಥೆ ಭಾರತೀಯರೆಲ್ಲರಿಗೂ ಸ್ಫೂರ್ತಿಯನ್ನು ನೀಡುತ್ತದೆ. ರಾಯಣ್ಣನವರ ಹುಟ್ಟೂರು ಸಂಗೊಳ್ಳಿ. ಕಿತ್ತೂರಿನಿಂದ 14 ಕಿ.ಮೀ ದೂರದಲ್ಲಿ ಮಲಪ್ರಬಾ ಹೊಳೆಯ ದಂಡೆಯ ಮೇಲೆ ನೆಲೆಸಿರುವ ಹಳ್ಳಿ. ಬರಮಪ್ಪ ಮತ್ತು ಕೆಂಚವ್ವ ದಂಪತಿಗಳ ಕಿರಿಯ ಮಗನಾಗಿ ರಾಯಣ್ಣ ಹುಟ್ಟಿದ್ದು ಆಗಸ್ಟ್ 15, 1798 ರಂದು. ತಂದೆ ಬರಮಪ್ಪ ಊರು ಮಂದಿಗೆ ಕಾಡುತ್ತಿದ್ದ...
ಕ್ರೀಡೆಹೆಚ್ಚಿನ ಸುದ್ದಿ

ಟೋಕಿಯೋ ಒಲಂಪಿಕ್‍ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಭಾರತ ಮಹಿಳಾ ಹಾಕಿ ತಂಡದ ಕೋಚ್ ಅಂಕಿತಾ ಬಿಲ್ಲವ ಸುರೇಶ ಅವರನ್ನು ಸನ್ಮಾನಿಸಿ ಗೌರವಿಸಿದ ಸಿಎಂ- ಕಹಳೆ ನ್ಯೂಸ್

ಟೋಕಿಯೋ-2020-21 ಓಲಂಪಿಕ್‍ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಹಿಳಾ ಹಾಕಿ ತಂಡದ ತರಬೇತುದಾರರಲ್ಲಿ ಒಬ್ಬರಾದ ಅಂಕಿತಾ ಬಿಲ್ಲವ ಸುರೇಶ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಸನ್ಮಾನಿಸಿ ಗೌರವಿಸಿದ್ದಾರೆ. ಟೋಕಿಯೋ ಒಲಂಪಿಕ್ ಟೂರ್ನಿಯಲ್ಲಿ ಭಾರತ ಮಹಿಳಾ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ತೋರಿ, ಪದಕ ಗೆಲ್ಲಲು ಸಾಧ್ಯವಾಗದಿದ್ದರೂ ಭಾರತೀಯರ ಮನಸ್ಸನ್ನು ಮಹಿಳಾ ತಂಡ ಗೆದ್ದಿದೆ. ಕನ್ನಡದ ಯುವತಿ ಭಾರತ ತಂಡದ ಕೋಚ್ ಆಗಿರುವುದು ಹೆಮ್ಮೆಯ ಸಂಗತಿ ಆಗಿದೆ. ಅಂಕಿತ ಅವರು ಮಡಿಕೇರಿ ಮೂಲದವರಾಗಿದ್ದು,...
ಸುದ್ದಿ

ವಿವಿ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆಯ ಅಂಗವಾಗಿ ವೆಬಿನಾರ್- ಕಹಳೆ ನ್ಯೂಸ್

ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 130 ನೇ ಗ್ರಂಥಪಾಲಕರ ದಿನಾಚರಣೆಯ ಭಾಗವಾಗಿ ಆಯೋಜಿಸಲಾಗಿದ್ದ ʼಇಂದು ಡಾ. ಎಸ್ ಆರ್ ರಂಗನಾಥ್ ಅವರ ತತ್ವಶಾಸ್ತ್ರದ ಪ್ರಸ್ತುತತೆʼ ಎಂಬ ವೆಬಿನಾರ್‍ನಲ್ಲಿ ಮೊದಲು 75,000 ಕ್ಕೂ ಹೆಚ್ಚು ಪುಸ್ತಕಗಳಿರುವ ವಿವಿ ಕಾಲೇಜಿನ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನವನ್ನು ದೀಪ ಬೆಳಗಿಸಿ, ಡಾ. ಎಸ್ ಆರ್ ರಂಗನಾಥ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನಗೈದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಕರ್ನಾಟಕ ರಾಜ್ಯ ಕಾಲೇಜು ಗ್ರಂಥಪಾಲಕರ ಒಕ್ಕೂಟದ (ಕೆಎಸ್‍ಸಿಎಲ್‍ಎ) ಅಧ್ಯಕ್ಷ...
ಪುತ್ತೂರು

ಕನ್ನಡದ ಕಲರ್ಸ್ ಎದೆ ತುಂಬಿ ಹಾಡವೆನು ರಿಯಾಲಿಟಿ ಶೋ ಗೆ ಪುತ್ತೂರಿನ ಗಾನಸಿರಿಯ ಪ್ರಾಪ್ತಿ ಪಿ. ಶೆಟ್ಟಿ ಆಯ್ಕೆ- ಕಹಳೆ ನ್ಯೂಸ್

ಪುತ್ತೂರು: ಎಸ್.ಪಿ.ಬಾಲಸುಬ್ರಹ್ಮಣ್ಯ ಅವರ ನೆನಪಿಗಾಗಿ ಕಲರ್ಸ್ ವಾಹಿನಿ ಮುನ್ನಡೆಸಿಕೊಂಡು ಬರುತ್ತಿರುವ ಪ್ರತಿಷ್ಠಿತ ರಿಯಾಲಿಟಿ ಶೋ “ ಎದೆ ತುಂಬಿ ಹಾಡುವೆನು” ಆಡಿಷನ್ ನಲ್ಲಿ ಭಾಗವಹಿಸಿದ್ದ ಧರ್ಮಸ್ಥಳ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಹಾಗೂ ಪುತ್ತೂರಿನ ಗಾನಸಿರಿ ಸಂಗೀತ ಸಂಸ್ಥೆಯ ಉದಯೋನ್ಮುಖ ಪ್ರತಿಭೆಯಾಗಿರುವ ಕುಮಾರಿ ಪ್ರಾಪ್ತಿ.ಪಿ.ಶೆಟ್ಟಿಯವರು ತೀರ್ಪುಗಾರರ ಮನಗೆದ್ದು ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿರುತ್ತಾರೆ. ರಾಜ್ಯ, ಜಿಲ್ಲಾ ಮಟ್ಟದ ಹಲವಾರು ಗಾಯನ ಸ್ಪರ್ಧೆಗಳಲ್ಲೂ ಬಹುಮಾನಗಳನ್ನು ಪಡೆದಿಕೊಂಡಿರುವ ಪ್ರಾಪ್ತಿ ಯವರು ಧರ್ಮಸ್ಥಳ...
ದಕ್ಷಿಣ ಕನ್ನಡ

ದ.ಕ. ಜಿಲ್ಲೆಯಲ್ಲಿ ಈ ವಾರಾಂತ್ಯವು ಕರ್ಫ್ಯೂ ಜಾರಿ- ಕಹಳೆ ನ್ಯೂಸ್

ಮಂಗಳೂರು: ಕೊರೋನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಾಣದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಕಳೆದ ವಾರ ವಿಧಿಸಿದಂತೆ ಈ (ಆಗಸ್ಟ್ 14 ಮತ್ತು 15) ವಾರವೂ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ಅವರು ಹೇಳಿದ್ದಾರೆ. ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿ ಇರಲಿದ್ದು, ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು...
ಸುದ್ದಿ

44ನೇ ವಯಸ್ಸಿನಲ್ಲಿ ಎಸ್.ಎಸ್.ಎಲ್.ಸಿ ಪಾಸಾಗಿ ಅಪೂರ್ವ ಸಾಧನೆ ಮಾಡಿದ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಗುಮಾಸ್ತರಾಗಿರುವ ಜಯಶ್ರೀ ರಿಗೆ ಸನ್ಮಾನ-ಕಹಳೆ ನ್ಯೂಸ್

ಮಂಗಳೂರು: ಸಾಧನೆಗೆ ವಯಸ್ಸಿನ ಹಂಗಿಲ್ಲ ಎಂಬಂತೆ ತಮ್ಮ 44ನೇ ವಯಸ್ಸಿನಲ್ಲಿ ಎಸ್.ಎಸ್.ಎಲ್.ಸಿ ಪಾಸಾಗಿ ಅಪೂರ್ವ ಸಾಧನೆ ಮಾಡಿರುವ ಮಂಗಳೂರು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಗುಮಾಸ್ತರಾಗಿರುವ ಜಯಶ್ರೀ ಅವರನ್ನು ಜಿಲ್ಲೆಯ ಸಹಕಾರಿ ರಂಗದ ಧುರೀಣರು ಭೇಟಿ ಮಾಡಿ ಆತ್ಮೀಯವಾಗಿ ಸನ್ಮಾನಿಸಿದರು. ವಿಶ್ವಕರ್ಮ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಮತ್ತು ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಕೇಂದ್ರಗಳ ಅಧ್ಯಕ್ಷ ಹರೀಶ್ ಆಚಾರ್, ಕರಾವಳಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎ.ಎಸ್.ವೆಂಕಟೇಶ್,...
ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವತಿಯಿಂದ ರಾಜ್ಯ ಮಟ್ಟದ ಆನ್‍ಲೈನ್ ರಾಪೀಡೆಕ್ಸ್ ಕಾರ್ಪೊರೇಟ್ ಕ್ವಿಜ್ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಆಗಸ್ಟ್ 15ರಂದು ರಾಜ್ಯ ಮಟ್ಟದ ಆನ್‍ಲೈನ್ ರಾಪೀಡೆಕ್ಸ್ ಕಾರ್ಪೊರೇಟ್ ಕ್ವಿಜ್ ಕಾರ್ಯಕ್ರಮವು ನಡೆಯಲಿದ್ದು, ಈ ಸ್ಪರ್ಧೆಯಲ್ಲಿ 2021-22 ಶೈಕ್ಷಣಿಕ ವರ್ಷದ 9, 10 ನೇ ತರಗತಿ ಹಾಗೂ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ಭಾಗವಹಿಸಬಹುದು. ಸ್ಪರ್ಧೆಯು ಆದಿತ್ಯವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಒಟ್ಟು 50 ಪ್ರಶ್ನೆಗಳಿದ್ದು, ವಿದ್ಯಾರ್ಥಿಗಳು 10 ನಿಮಿಷದ ಒಳಗೆ ಉತ್ತರಿಸಬೇಕು. ಸಂಸ್ಥೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ...
1 113 114 115 116 117 126
Page 115 of 126