Monday, January 20, 2025

archiveಕಹಳೆ ನ್ಯೂಸ್

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದಲ್ಲಿ ಕೋವಿಡ್‍ನಿಂದ ಮೃತಪಟ್ಟ 62 ಮಂದಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ : ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು –ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೋವಿಡ್‍ನಿಂದ ಮೃತಪಟ್ಟ ಒಟ್ಟು 62 ಮಂದಿಯ ಕುಟುಂಬಕ್ಕೆ ಸರಕಾರದಿಂದ ಬಿಡುಗಡೆಯಾಗ ನೆರವಿನ ಚೆಕ್‍ನ್ನ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹಸ್ತಾಂತರಿಸಿದರು. ಚೆಕ್ ನೀಡಿದ ಬಳಿಕ ಮಾತನಾಡಿದ ಶಾಸಕರು ಸರಕಾರದಿಂದ ಸಣ್ಣ ಮಟ್ಟಿನ ನೆರವು ನೀಡುವ ಕಾರ್ಯ ಮಾಡಲಾಗಿದೆ ಎಂದ್ರು ಇನ್ನು ಇದೇ ವೇಳೆ ಮೃತರ ಕುಟುಂಬಕ್ಕೆ ಸಾಂತ್ವನ ನೀಡಿದರು. ಹಕ್ಕುಪತ್ರ ವಿತರಣೆ ಸಣ್ಣಪುಟ್ಟ ಗೊಂದಲ ನಿವಾರಣೆ ಮಾಡಿ ನಿನ್ನೆ 15 ಮಂದಿಗೆ ಹಕ್ಕು ಪತ್ರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿಗೆ ರಕ್ಷಕ-ಶಿಕ್ಷಕ ಸಂಘದ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳನ್ನು ಉತ್ತೇಜಿಸಲು ಅಗತ್ಯವಿರುವ ವಸ್ತುಗಳ ಹಸ್ತಾಂತರ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ನರೇಂದ್ರ ಪದವಿ ಪೂರ್ವ ಕಾಲೇಜಿಗೆ ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಮೌಲ್ಯದ ವಸ್ತುಗಳ ಹಸ್ತಾಂತರ ಕಾರ್ಯಕ್ರಮ ಕಾಲೇಜಿನ ಪ್ರಗತಿಗಾಗಿ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳನ್ನು ಉತ್ತೇಜಿಸಲು ಅಗತ್ಯವಿರುವ ಸುಮಾರು ಒಂದು ಲಕ್ಷ ಮೌಲ್ಯದ ಝೆರಾಕ್ಸ್ ಮೆಷಿನ್ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕುಡಿಯುವ ನೀರಿನ ಶುದ್ದೀಕರಣದ ಎರಡು ಘಟಕಗಳು ವಾಟರ್ ಪ್ಯೂರಿಫಯರ್ ಗಳನ್ನು ಕೊಡುಗೆಯಾಗಿ ನೀಡಿದರು.ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿಯಾದ ಶ್ರೀಮತಿ...
ದಕ್ಷಿಣ ಕನ್ನಡಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ವಾರ್ಷಿಕ ಮಹಾಸಭೆ – ಕಹಳೆ ನ್ಯೂಸ್

ಪುತ್ತೂರು : ಪ್ರಸ್ತುತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಕಾರಿ ಶಿಕ್ಷಣ ಸಂಸ್ಥೆಗಳು ಸ್ಪರ್ಧೆಯನ್ನು ನೀಡುತ್ತಿದೆ. ಇಂತಹ ಸಂದರ್ಭಗಳಲ್ಲಿ ಶಿಕ್ಷಣ ಸಂಸ್ಥೆಗಳ ಏಳಿಗೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘ ಮಹತ್ತರವಾದ ಪಾತ್ರವನ್ನು ವಹಿಸುತ್ತಿದೆ. ಕೊರೋನಾ ನಂತರ ಕಾಲೇಜಿನ ಅನೇಕ ಚಟುವಟಿಕಗಳು ಸ್ತಬ್ಧವಾಗಿದೆ. ಹಿರಿಯ ವಿದ್ಯಾರ್ಥಿಗಳು ತಮ್ಮ ಕೆಲಸದ ಒತ್ತಡದಿಂದ ಕಾಲೇಜಿನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರಲ್ಲಿ ಹಿಂದೆ ಸರಿಯುತ್ತಿದ್ದಾರೆ. ಈ ಕಾರಣದಿಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘವನ್ನು ಮತ್ತೊಮ್ಮೆ ಎದ್ದು ನಿಲ್ಲಿಸುವ ಪ್ರಕ್ರಿಯೆಗಳು ನಡೆಯಬೇಕಿದೆ. ನವ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ : ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಬೇಕು- ಡಾ. ಸುದೀಪ್ ಡಿ ಘಾಟೆ – ಕಹಳೆ ನ್ಯೂಸ್

ಪುತ್ತೂರು: ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ನಿಟ್ಟೆಯ ಕೇಂದ್ರಿಯ ರಿಸರ್ಚ್ ಲ್ಯಾಬ್‍ನ ವಿಜ್ಞಾನಿ ಡಾ. ಸುದೀಪ್ ಡಿ ಘಾಟೆ ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಇಕೋ ಕ್ಲಬ್‍ನ ವತಿಯಿಂದ ವಿದ್ಯಾರ್ಥಿಗಳಿಗೆ ನಡೆದ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಉತ್ತಮ ವ್ಯಕ್ತಿತ್ವದ ಜೊತೆ ಒಳ್ಳೆಯ ಅಂಕಗಳು ಸಮ್ಮಿಳಿತಗೊಂಡಗ ಯಶಸ್ವಿ ವ್ಯಕ್ತಿ ರೂಪುಗೊಳ್ಳುತ್ತಾನೆ. ತನ್ನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಹಾರದಲ್ಲಿ ಪೌಷ್ಟಿಕತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಾಠ ಪೂರಕ ಚಟುವಟಿಕೆಯಾಗಿ ಅಧ್ಯಾಪಕರು ಕೋಸಂಬರಿ ತಯಾರಿಕೆಯ ಪ್ರಾತ್ಯಕ್ಷಿತೆಯನ್ನು ನಡೆಸಿಕೊಟ್ಟರು. ಆಹಾರದಲ್ಲಿನ ಪೌಷ್ಟಿಕಾಂಶದ ಅಗತ್ಯತೆ ಬಗ್ಗೆ ಅಧ್ಯಾಪಕರಾದ ರೂಪಕಲಾ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಸುದ್ದಿ

ಜನವರಿ 1 ರಿಂದ 25ವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜ್ ಕಾಂಪಸ್‍ಗಳಲ್ಲಿ ‘ಸಾಮರಸ್ಯದೆಡೆಗೆ ವಿದ್ಯಾರ್ಥಿಗಳ ನಡೆ’ ಕಾರ್ಯಕ್ರಮ- ಕಹಳೆ ನ್ಯೂಸ್

ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳ ಕಾಂಪಸ್‍ಗಳಲ್ಲಿ ಶಾಂತಿ, ಸೌಹಾರ್ದತೆ, ಸಾಮರಸ್ಯವನ್ನು ಕಾಪಾಡಿಕೊಂಡು ಬರುವುದು ಅಗತ್ಯವಾಗಿದೆ. ಇಂದಿನ ಮಕ್ಕಳೇ ಮುಂದಿನ ದೇಶದ ಆಸ್ತಿ ಆಗಲಿದ್ದಾರೆ. ಆದರೆ, ಕೆಲ ಸ್ಥಾಪಿತ ಹಿತಾಶಕ್ತಿಗಳು ರಾಜಕೀಯ ಲಾಭಕ್ಕಾಗಿ ಕಾಲೇಜು ಕ್ಯಾಂಪಸ್‍ಗಳಲ್ಲಿ ನಿರಂತರ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ವಿದ್ಯಾರ್ಥಿ ಸಮೂಹ ಇಂತಹ ಯಾವುದೇ ಪುಚೋದನೆ, ಪುಲೋಭನೆಗೆ ಒಳಗಾಗದೆ ತಮ್ಮ ಭವಿಷ್ಯದತ್ತ ಗಮನ ಹರಿಸಬೇಕಾಗಿದೆ. ಅನಗತ್ಯ ವಿಚಾರಗಳ ಮೂಲಕ ಮಕ್ಕಳ ಭವಿಷ್ಯದಲ್ಲಿ ಚೆಲ್ಲಾಟ ವಾಡುವುದು ನಿಲ್ಲಬೇಕಾಗಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ – ಕಹಳೆ ನ್ಯೂಸ್

ಬಂಟ್ವಾಳ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ ಬಿಸಿರೋಡು ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ‘ಶಕ್ತಿಯನ್ನು ಕಾರ್ಯಕರ್ತರಿಗೆ ಪಕ್ಷ ನೀಡಿದ್ದು, ಶಾಸಕ ಮುಖ್ಯವಲ್ಲ ಪಕ್ಷ ಮುಖ್ಯ’ ಎಂದು ಹೇಳಿದರು. ಎಲ್ಲಾ ಕಾರ್ಯಕರ್ತರು ಕೂಡ ಸಮರ್ಥರಾಗಿದ್ದು ಅವಕಾಶಗಳನ್ನು ಪಕ್ಷ ನೀಡಿದಾಗ ಅತ್ಯಂತ ಯಶಸ್ವಿಯಾಗಿ ನಿಭಾಯಿಸಲು ಅವರು ತಿಳಿಸಿದರು. ಬಂಟ್ವಾಳ ಕ್ಷೇತ್ರದಲ್ಲಿ ಸಾವಿರ ಕೋಟಿ ರೂಪಾಯಿಗೂ ಮಿಕ್ಕಿದ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡಬಿದ್ರಿಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಭವನದಲ್ಲಿ ಕಾನೂನು ಸೇವಾ ಶಿಬಿರ : ಮೂಡಬಿದಿರೆಯ ಕಾನೂನು ಸೇವಾ ಪ್ರಾಧಿಕಾರದ ಸದುಪಯೋಗಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಕರೆ – ಕಹಳೆ ನ್ಯೂಸ್

ಸಮಸ್ಯೆ ಅಥವಾ ದೌರ್ಜನ್ಯಗಳನ್ನು ಮೌನವಾಗಿಯೇ ಎದುರಿಸುವುದು ಯಾವುದೇ ಸಮಾಜದ ಒಳ್ಳೆಯ ಲಕ್ಷಣವಲ್ಲ, ಇಂತಹ ಸ್ಥಿತಿಗಳಲ್ಲಿ ನೆರವು ನೀಡಲು ಕಾನೂನು ಸೇವಾ ಪ್ರಾಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರು ಹೇಳಿದರು. ಡಿ.30ರ ಗುರುವಾರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೂಡಬಿದ್ರಿ ವಕೀಲರ ಸಂಘ ಹಾಗೂ ಮೂಡಬಿದ್ರಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಮೂಡಬಿದ್ರಿಯ...
1 20 21 22 23 24 126
Page 22 of 126