Sunday, September 22, 2024

archiveಕಹಳೆ ನ್ಯೂಸ್

ಉಡುಪಿ

ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆಯಾಗಿ ಆಯ್ಕೆಯಾದ ಮೊದಲ ಕರಾವಳಿಯ ಯುವತಿ ಸುರೈಯ್ಯ ಅಂಜುಮ್- ಕಹಳೆ ನ್ಯೂಸ್

ಉಡುಪಿ- ರಾಷ್ಟ್ರೀಯ ಮಟ್ಟದ "ಯಂಗ್ ಇಂಡಿಯಾ ಕೇ ಬೋಲ್" ಸ್ಪರ್ಧೆಯಲ್ಲಿ ರಾಷ್ಟ್ರೀಯ ಮಟ್ಟದ ವಕ್ತಾರರ ಆಯ್ಕೆಗಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು. ದೇಶವ್ಯಾಪ್ತಿ 15,000 ಜನರು ಈ ಸ್ಪರ್ಧೆಯಲ್ಲಿ ಭಾಗವಹಿಸಿದು,್ದ ಕರ್ನಾಟಕದ ಹತ್ತು ವಾಗ್ಮಿಗಳು ದೆಹಲಿಯ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ದೇಶದಾದ್ಯಂತ 300 ಯುವ ಕಾಂಗ್ರೆಸ್ ವಕ್ತಾರರು ನವದೆಹಲಿಯ ಯುವ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸ್ಪರ್ಧೆಯಲ್ಲಿ ಆಯ್ಕೆಯಾಗಿದ್ದರು.   ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷೆಯಾದ...
ಕ್ರೀಡೆಸುದ್ದಿ

ಪಾಂಚಜನ್ಯ ಗೆಳೆಯರ ಬಳಗ ವಿಷ್ಣುನಗರ ಪಂಜಾಳ ಬಂದಾರು ಆಶ್ರಯದಲ್ಲಿ ನವೆಂಬರ್ 28ರಂದು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ – ಪಂದ್ಯಾಟದಲ್ಲಿ ಭಾಗವಹಿಸು ತಂಡಗಳಿಗೆ ವಿಶೇಷ ಸೂಚನೆ..?- ಕಹಳೆ ನ್ಯೂಸ್

ಬಂದಾರು: ಪಾಂಚಜನ್ಯ ಗೆಳೆಯರ ಬಳಗ ವಿಷ್ಣುನಗರ ಪಂಜಾಳ ಬಂದಾರು ಇದರ ಆಶ್ರಯದಲ್ಲಿ 5ನೇ ವರ್ಷದ ದೀಪಾವಳಿ ಪ್ರಯುಕ್ತ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಇದೇ ನವೆಂಬರ್ 28ರಂದು ಬೆಳ್ಳಗ್ಗೆ 9 ಗಂಟೆಗೆ ಕೊಳ್ಳಕೋಡಿ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನ ಬಂದಾರು ಗ್ರಾಮ ಪಂಚಾಯತ್‍ನ ಅಧ್ಯಕ್ಷರಾದ ಕೆ. ಪರಮೇಶ್ವರಿ ಜನಾರ್ದನ ಗೌಡ ಪುಯಿಲ ಉದ್ಗಾಟಿಸಲಿದ್ದಾರೆ.   ವಾಲಿಬಾಲ್ ಪಂದ್ಯಾಟದ ಪ್ರಥಮ ವಿಜೇತರಿಗೆ 3333 ಮತ್ತು ಟ್ರೋಫಿ, ದ್ವಿತೀಯ ವಿಜೇತರಿಗೆ 2222 ಮತ್ತು ಟ್ರೋಫಿ...
ಸುದ್ದಿ

ಬಿಜೆಪಿ ಎಸ್.ಸಿ ಮೋರ್ಚಾದ ವತಿಯಿಂದ ಸಂವಿಧಾನ ಸಮರ್ಪಣಾ ದಿನಾಚರಣೆ – ಕಹಳೆ ನ್ಯೂಸ್

ಸಂವಿಧಾನ ಸಮರ್ಪಣಾ ದಿನಾಚರಣೆಯ ಅಂಗವಾಗಿ ನಿನ್ನೆ ಬಿಜೆಪಿ ಎಸ್.ಸಿ ಮೋರ್ಚಾದ ವತಿಯಿಂದ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಭವಿಷ್ಯವನ್ನು ಚಿಂತಿಸಿ ಬರೆದ ಸಂವಿಧಾನವನ್ನು ಪ್ರತಿಯೊಬ್ಬ ಭಾರತೀಯರೂ ಆದರಿಸಬೇಕು ಎಂದು ಹೇಳಿದರು. ಸ್ವಾತಂತ್ರ್ಯದ ನಂತರದ ಭಾರತವು ಹೀಗಿರಬೇಕು ಎನ್ನುವ ಪರಿಕಲ್ಪನೆಯೊಂದಿಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಿದ್ಧಪಡಿಸಿದ ಸಂವಿಧಾನವನ್ನು ಗೌರವಿಸುವ ಕಾರ್ಯ ಆಗಬೇಕಿದೆ. ದೇಶದ ಪ್ರಗತಿಗೆ ಸಂವಿಧಾನವೆಂಬ...
ಹಾಸನ

‘ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನನ್ನು ಕ್ಷಮಿಸಿ’ ಎಂದು ತಾಯಿ ಮೊಬೈಲ್‍ಗೆ ಮೆಸೇಜ್ ಕಳುಹಿಸಿ ಅಪ್ರಾಪ್ತ ಬಾಲಕಿ ಆತ್ಮಹತ್ಯೆ- ಕಹಳೆ ನ್ಯೂಸ್

ಹಾಸನ: ಬಾಲಕಿಯೊಬ್ಬಳು ತನ್ನ ತಾಯಿ ಮೊಬೈಲ್‍ಗೆ ಮೆಸೇಜ್ ಕಳುಹಿಸಿ, ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಹೊರವಲಯದಲ್ಲಿ ನಡೆದಿದೆ. ಹಾಸನದ ಖಾಸಗಿ ಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಪೂರ್ವಿಕಾ (15) ಸತ್ಯಮಂಗಲ ಬಡಾವಣೆಯ ಪ್ರಸಾದ್ ಮತ್ತು ಸುಬ್ಬಲಕ್ಷ್ಮಿ ಎಂಬುವವರ ಪುತ್ರಿ ಪೂರ್ವಿಕಾ. ತಾಯಿ ಮೊಬೈಲ್‍ಗೆ ‘ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನನ್ನು ಕ್ಷಮಿಸಿ' ಎಂದು ಮೆಸೇಜ್ ಕಳುಹಿಸಿ, ಬೆಳಗಿನ ಜಾವ ಮನೆಯಿಂದ ಹೊರ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಗ್ನಿಶಾಮಕ...
ಬಂಟ್ವಾಳ

ಬಂಟ್ವಾಳ: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ: ಯುವತಿಯೋರ್ವಳು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯರ ಪುತ್ರಿ ರಶ್ಮಿತ (24) ಬೆಳಿಗ್ಗೆ ದೇವರಿಗೆ ಪೂಜೆಗಾಗಿ ಹೂ ಕೊಯ್ಯಲು ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಪುತ್ತೂರು

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ಆಶ್ರಯದಲ್ಲಿ ನಡೆದ ಸಂವಿಧಾನ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ಆಶ್ರಯದಲ್ಲಿ ಶ್ರೀರಾಮ ಸಭಾ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಮಾತಾಡಿದ ಬಿಇಎಲ್ ಸಂಸ್ಥೆಯ ವಿಶ್ರಾಂತ ಹಿರಿಯ ಉಪ ಪ್ರಧಾನ ವ್ಯವಸ್ಥಾಪಕ ಟಿ. ಎನ್. ಸಿ. ಲಕ್ಷ್ಮಿನರಸಿಂಹನ್ ಸರ್ಕಾರವು ಸಂವಿಧಾನದ ಮೂಲಕ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳ ಅಧಿಕಾರ ವ್ಯಾಪ್ತಿಯನ್ನು ವ್ಯಾಖ್ಯಾನಿಸುತ್ತದೆ. ಪ್ರಜೆಗಳ ಹಕ್ಕು ಮತ್ತು ಕರ್ತವ್ಯಗಳನ್ನು ನಿರ್ಧರಿಸುತ್ತದೆ. ಹೀಗಾಗಿ ಸಂವಿಧಾನವು ಎಲ್ಲಾ ಕಾನೂನುಗಳಿಗಿಂತ ಮಿಗಿಲಾದುದು...
ಉಡುಪಿ

ಹೆಬ್ರಿಯ ಶಿವಪುರ ಹೊಳೆಗೆ ಈಜಲು ತೆರಳಿದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು – ಕಹಳೆ ನ್ಯೂಸ್

ಹೆಬ್ರಿ: ಈಜಲು ತೆರಳಿದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹೆಬ್ರಿಯ ಶಿವಪುರ ಹೊಳೆಯಲ್ಲಿ ನಡೆದಿದೆ. ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುದರ್ಶನ್ (16),ಸೋನಿತ್ (17) ಹಾಗೂ ಕಿರಣ್ (6) ಸಾವಿಗೀಡಾದ ವಿದ್ಯಾರ್ಥಿಗಳು. ಮೂವರು ವಿದ್ಯಾರ್ಥಿಗಳ ಮೃತದೇಹವನ್ನು ಸ್ಥಳೀಯರು ಮೇಲಕ್ಕೆ ಎತ್ತಿದ್ದಾರೆ. ಸ್ಥಳಕ್ಕೆ ಹೆಬ್ರಿ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಬಂಟ್ವಾಳ

ಕಲ್ಲಡ್ಕ ವಲಯದ ಸ್ವಸಾಯ ಸಂಘಗಳ ಗೋಳ್ತಮಜಲು-ಸಿ ಒಕ್ಕೂಟದ ನೂತನ ಅಧ್ಯಕ್ಷರಾಗಿ ಮಮತಾ ಎಸ್ ಶೆಟ್ಟಿ ಆಯ್ಕೆ- ಕಹಳೆ ನ್ಯೂಸ್

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವಸಾಯ ಸಂಘಗಳ ಗೋಳ್ತಮಜಲು- ಸಿ ಒಕ್ಕೂಟದ ಮುಂದಿನ ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಕಲ್ಲಡ್ಕ ವಲಯದ ಮಾಜಿ ಅಧ್ಯಕ್ಷರಾದ ಶ್ರೀಯುತ ಶೇಖರ್ ಪೂಜಾರಿ, ಮೇಲ್ವಿಚಾರಕರಾದ ಶ್ರೀಮತಿ ಸುಗುಣಾ ಶೆಟ್ಟಿ , ಮತ್ತು ಸೇವಾ ಪ್ರತಿನಿಧಿ ಶ್ರೀಮತಿ ಗಿರಿಜಾ ಇವರ ಉಪಸ್ಥಿತಿಯಲ್ಲಿ ರಾಜೀವ್ ಯುವಕ ಮಂಡಲ ಬಾಯಿಲ ವೀರಕಂಬದಲ್ಲಿ...
1 40 41 42 43 44 126
Page 42 of 126