Recent Posts

Tuesday, November 26, 2024

archiveಕಹಳೆ ನ್ಯೂಸ್

ಬಂಟ್ವಾಳ

ಮೆಲ್ಕಾರ್ : ರಾಜಿ ಸಂದಾನಕ್ಕೆ ಬಂದ ಎರಡು ತಂಡಗಳ ನಡುವೆ ಹೊಡಿಬಡಿ – ಸಾಮಾಜಿಕ ಜಾಲತಾಣಗಳಲ್ಲಿ ವಿಡೀಯೋ ವೈರಲ್ : ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಬಂಟ್ವಾಳ ಪೊಲೀಸರು- ಕಹಳೆ ನ್ಯೂಸ್

ಬಂಟ್ವಾಳ: ಕಳೆದ ಕೆಲ ದಿನಗಳ ಹಿಂದೆ ಬಂಟ್ವಾಳದಲ್ಲಿ ನಡೆದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಸಂತೋಷ್ ಎಂಬವರಿಗೆ ಅವಿನಾಶ್ ಎಂಬವರು ಹಲ್ಲೆ ನಡೆಸಿದ್ದು, ಇದರ ರಾಜಿ ಪಂಚಾಯತಿಗಾಗಿ ಮೆಲ್ಕಾರ್ ನಲ್ಲಿ ಎರಡು ತಂಡಗಳು ಸೇರಿದ್ದವು. ಇದೇ ವಿಚಾರವಾಗಿ ಎರಡು ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಪರಸ್ಪರ ಮರದ ಸೊಂಟೆ ಹಾಗೂ ಸೋಡದ ಬಾಟಲಿಗಳಿಂದ ಹೊಡೆದಾಟ ನಡೆದಿದ್ದು, ಹೊಡೆದಾಡಿದ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಘಟನೆ ಬಗ್ಗೆ ಮಾಹಿತಿ ಪಡೆದ, ಬಂಟ್ವಾಳ...
ಸುದ್ದಿ

ಕಾರು-ಬೈಕ್ ಮುಖಾಮುಖಿ ಢಿಕ್ಕಿ : ಬೈಕ್ ಸವಾರ ಸಾವು- ಕಹಳೆ ನ್ಯೂಸ್

ವಿಟ್ಲ : ಬೈಕ್- ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ನಡೆದಿದೆ. ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕ ಅವರ ಪುತ್ರ ಪ್ರಜ್ವಲ್ (26) ಮೃತ ದುರ್ದೈವಿ. ಮಂಗಳೂರಿನ ಎನ್‍ಎಂಪಿಟಿ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ಪ್ರಜ್ವಲ್ ಬೈಕ್‍ನಲ್ಲಿ ಹೋಗುತ್ತಿದ್ದ ಸಂದರ್ಭ ಕಾರು ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡಿದ್ದ, ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ....
ಪುತ್ತೂರು

ವಿವೇಕಾನಂದ ಮಹಾವಿದ್ಯಾಲಯದಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ನೂತನ ಶಿಕ್ಷಣ ನೀತಿಯೊಂದಿಗೆ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ, ಪ್ರತಿಭಾ ಪುರಸ್ಕಾರ ಮತ್ತು ರ‍್ಯಾಂಕ್ ವಿಜೇತರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ಹಿಂದೆ ಭಾರತೀಯ ಸಂಸ್ಕøತಿ, ಸಂಸ್ಕಾರದೊಂದಿಗೆ ಜೀವನಕ್ರಮ ಅವಿನಾಭಾವ ಸಂಬಂಧವನ್ನು ಹೊಂದಿತ್ತು. ಗುರುಕುಲ ಪದ್ಧತಿಯ ಮೂಲಕ ಶಿಕ್ಷಣವು ಎಲ್ಲಾ ವರ್ಗದ ಜನರಿಗೂ ಸಮಾನವಾಗಿ ಲಭ್ಯವಿತ್ತು. ತನ್ನ ಕಾಲಮೇಲೆ ತಾನು ನಿಂತುಕೊಳ್ಳುವಂತಹ ಶಕ್ತಿಯನ್ನು...
ಬಂಟ್ವಾಳ

ಮಂಚಿ: ಉರುಳಿಗೆ ಸಿಲುಕಿದ್ದ ಚಿರತೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾದ ಬಂಟ್ವಾಳ ಅರಣ್ಯ ಇಲಾಖೆ ಸಿಬ್ಬಂದಿ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯೊಂದನ್ನು ಬಂಟ್ವಾಳದ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುತ್ತ ಮನೆಗಳೇ ಇರುವ ಜಾಗದಲ್ಲಿ ಚಿರತೆಯೊಂದು ಉರುಳಿಗೆ ಸಿಲುಕಿಕೊಂಡಿರುವ ಬಗ್ಗೆ ಸ್ಥಳೀಯರ ಮಾಹಿತಿ ಆಧಾರದಲ್ಲಿ ಕೂಡಲೇ ಕಾರ್ಯಾಚರಣೆಗಿಳಿದ ಅರಣ್ಯ ಇಲಾಖೆ ಸುಮಾರು 4 ತಾಸುಗಳ ಪರಿಶ್ರಮದ ಬಳಿಕ ಚಿರತೆಯ ಪ್ರಜ್ಞೆ ತಪ್ಪಿಸಿ, ಕೊಂಡೊಯ್ಯುವಲ್ಲಿ ಸಫಲವಾಯಿತು. ಮಂಗಳೂರಿನ ಡಾ. ಯಶಸ್ವಿ ಹಾಗೂ ವೈದ್ಯರ ತಂಡ ಮತ್ತು...
ಬೆಳ್ತಂಗಡಿ

ಬೆಳ್ತಂಗಡಿ : ಅಕ್ರಮ ಗೋಸಾಗಾಟ ಹಿಂದೂ ಜಾಗರಣ ವೇದಿಕೆಯ ಮಿಂಚಿನ ದಾಳಿ, ವಾಹನ ಸಹಿತ ಆರೋಪಿ ಪೋಲಿಸರ ವಶಕ್ಕೆ – ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪ ಮತ್ತೊಂದು ಅಕ್ರಮ ಗೋಸಾಗಾಟ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಪಾಂಡಿಬೆಟ್ಟುನಿಂದ ಕೊಕ್ಕಡ ಸಮೀಪದ ಮಲ್ಲಿಗೆ ಮಜಲ್ ಗೆ ವಾಹನವೊಂದರಲ್ಲಿ ಎರಡು ಗೋವುಗಳ ಸಾಗಿಸುತ್ತಿರುವ ಬಗ್ಗೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಮಾಹಿತಿ ಲಭಿಸಿದ್ದು ಕೂಡಲೇ ಕಾರ್ಯ ಪ್ರವೃತ್ತರಾದ ಕೊಕ್ಕಡ ಜಾಗರಣ ವೇದಿಕೆಯ ಕಾರ್ಯಕರ್ತರು ತಿಪ್ಪೆಮಜಲು ಎಂಬಲ್ಲಿ ವಾಹನವನ್ನು ತಡೆದು, ಅಕ್ರಮ ಗೋಸಾಗಾಟ ವಾಹನ ಸಹಿತ ಆರೋಪಿಗಳನ್ನು ಪೋಲಿಸರಿಗೊಪ್ಪಿಸಿದ್ದಾರೆ. ನಂತರ ಧರ್ಮಸ್ಥಳ ಠಾಣೆಗೆ ಸುದ್ದಿ...
ಸುದ್ದಿ

ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಹತ್ತನೇ ತರಗತಿ ವಿದ್ಯಾರ್ಥಿನಿ- ಕಹಳೆ ನ್ಯೂಸ್

ಉಪ್ಪಿನಂಗಡಿ: ಹತ್ತನೇ ತರಗತಿ ವಿದ್ಯಾರ್ಥಿನಿ ಹೆಣ್ಣು ಮಗುವಿಗೆ ಸಹಜ ಹೆರಿಗೆಯಲ್ಲಿ ಜನ್ಮ ನೀಡಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪ್ರೌಢಶಾಲೆಯೊಂದರಲ್ಲಿ ಪ್ರಸಕ್ತ ಹತ್ತನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ ಎಂದು ತಿಳಿದು ಹೆತ್ತವರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ತುಂಬು ಗರ್ಭವತಿಯಾಗಿರುವುದು ಬೆಳಕಿಗೆ ಬಂದಿದ್ದು, ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಸಹಜ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಕರಣವನ್ನು ಉಪ್ಪಿನಂಗಡಿ ಪೆÇಲೀಸರ ಗಮನಕ್ಕೆ ತಂದಿದ್ದರು. ಈ ಬಗ್ಗೆ ವಿದ್ಯಾರ್ಥಿನಿಯನ್ನು...
ಬಂಟ್ವಾಳ

ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿದ ಅಪರಿಚಿತ ಮಹಿಳೆ- ಕಹಳೆ ನ್ಯೂಸ್

ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಮಹಿಳೆಯೋರ್ವಳು ನದಿಗೆ ಹಾರಿದ್ದನ್ನು ವಾಹನ ಸವಾರರು ನೋಡಿ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೂಡಲೇ ಸ್ಥಳೀಯ ಮುಳುಗುಗಾರರು ದೋಣಿಯ ಮೂಲಕ ನೇತ್ರಾವತಿ ಸೇತುವೆಯ ಬಳಿಗೆ ಬಂದಿದ್ದು, ಅದಾಗಲೇ ಮಹಿಳೆ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ. ನದಿಗೆ ಹಾರಿದ ಮಹಿಳೆ ಯಾರು ಎಂಬ ಮಾಹಿತಿ ಇನ್ನೂ ಕೂಡ ಲಭ್ಯವಾಗಿಲ್ಲ. ಘಟನೆ ನಡೆದ ಬಳಿಕ...
ಬಂಟ್ವಾಳ

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಆಗತ ಸ್ವಾಗತ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಪ್ರವೇಶೋತ್ಸವ ಹಾಗೂ ನೂತನ ವಿಜ್ಞಾನ ಪ್ರಯೋಗಾಲಯ ಮತ್ತು ಕಂಪ್ಯೂಟರ್ ಕೊಠಡಿ ಮತ್ತು ಸ್ಟಾರ್ಟ್ ಕ್ಲಾಸ್ ರೂಮ್‍ನ ಉದ್ಘಾಟನೆ ಕಾರ್ಯಕ್ರಮ ನೆರವೇರಿತು. ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಕೊಠಡಿ ಮತ್ತು ಸ್ಮಾಟ್ ಕ್ಲಾಸ್ ನ್ನು ಉದ್ಘಾಟಿಸಿ, ಬಳಿಕ ಮಾತನಾಡಿದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಜಗತ್ತಿನಲ್ಲಿ ಅತ್ಯಂತ ಶ್ರೀಮಂತ ದೇಶ ಭಾರತವಾಗಿತ್ತು. ಅನೇಕ...
1 44 45 46 47 48 126
Page 46 of 126