Tuesday, November 26, 2024

archiveಕಹಳೆ ನ್ಯೂಸ್

ಕಾಸರಗೋಡು

ಪ್ರಜ್ಞೆ ತಪ್ಪಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಹೆಗಲ ಮೇಲೆ ಹೊತ್ತು ಸಾಗಿದ್ದ ಮಹಿಳಾ ಇನ್ಸ್ ಪೆಕ್ಟರ್ ರಾಜೇಶ್ವರಿ ಅವರನ್ನು ಅಭಿನಂದಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್- ಕಹಳೆ ನ್ಯೂಸ್

ಚೆನ್ನೈ: ಸುರಿಯುತ್ತಿರುವ ಭಾರೀ ಮಳೆಯ ನಡುವೆ ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಹೆಗಲ ಮೇಲೆ ಹೊತ್ತು ಸಾಗಿ, ಆಟೋ ಹತ್ತಿಸಿ ಆಸ್ಪತ್ರೆಗೆ ದಾಖಲಿಸಿದ್ದ, ಮಹಿಳಾ ಇನ್ಸ್ ಪೆಕ್ಟರ್ ರಾಜೇಶ್ವರಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅಭಿನಂದಿಸಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ತಮಿಳುನಾಡಿನಲ್ಲಿ ನಿರಂತವಾಗಿ ಮಳೆಯಾಗುತ್ತಿದೆ. ಇದರಿಂದಾಗಿ ಚೆನ್ನೈ ಮಹಾನಗರದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಇನ್‍ಸ್ಪೆಕ್ಟರ್ ರಾಜೇಶ್ವರಿ ಅವರು...
ಸುದ್ದಿ

ಕಾವೂರು ಬಸ್ ನಿಲ್ದಾಣದ ಬಳಿ ಮಾದಕ ವಸ್ತು ಸೇವಿಸಿದ ವ್ಯಕ್ತಿ ಅಬಕಾರಿ ಅಧಿಕಾರಿಗಳ ವಶಕ್ಕೆ- ಕಹಳೆ ನ್ಯೂಸ್

ಮಂಗಳೂರು: ನಗರದ ಕಾವೂರು ಬಳಿಯ ಮಹಾಲಿಂಗೇಶ್ವರ ದೇವಸ್ಥಾನದ ಎದುರುಗಡೆ ಇರುವ ಬಸ್ ನಿಲ್ದಾಣದ ಬಳಿ ಓರ್ವ ವ್ಯಕ್ತಿಯು ಗಾಂಜಾ ಸೇವನೆ ಮಾಡುತ್ತಿದ್ದ. ಈ ಬಗ್ಗೆ ಅಬಕಾರಿ ಇಲಾಖೆಗೆ ಖಚಿತ ಮಾಹಿತಿ ಲಭ್ಯವಾಗಿದ್ದು, ಅಧಿಕಾರಿಗಳು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ನಿನ್ನೆ ಅಬಕಾರಿ ಉಪ ಆಯುಕ್ತರು , ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರುರವರ ನಿರ್ದೇಶನದ ಮೇಲೆ, ಅಬಕಾರಿ ಉಪ ಅಧೀಕ್ಷಕರು ಮಂಗಳೂರು ಉಪ ವಿಭಾಗ -2 ಬೆಂಗಳೂರು ಇವರ ಮಾರ್ಗದರ್ಶದಂತೆ, ಪ್ರತಿಭಾ ಜಿ...
ಸುದ್ದಿ

ಮರೋಳಿ ವಾರ್ಡಿನ ಬಜ್ಜೋಡಿಯಲ್ಲಿ ಆರ್.ಸಿ.ಸಿ ತಡೆಗೋಡೆ ರಚನೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು: ಮರೋಳಿ ವಾರ್ಡಿನ ಬಜ್ಜೋಡಿಯಲ್ಲಿ ಆರ್.ಸಿ.ಸಿ ತಡೆಗೋಡೆ ರಚನೆ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಬಜ್ಜೋಡಿ ವ್ಯಾಯಾಮ ಶಾಲೆಯ ಬಳಿ ತಡೆಗೋಡೆ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆಯಾಗಿದೆ. ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಸಾರ್ವಜನಿಕರ ಸಹಕಾರದೊಂದಿಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೋರೇಟರ್ ಕೇಶವ ಮರೋಳಿ,...
ಸುದ್ದಿ

ಮಂಗಳೂರಿನ ಬಾಲ ಪ್ರತಿಭೆ ಮೇದ್ಯಾ ಕೊಟ್ಟಾರಿಗೆ ಕಲ್ಕೂರ ಪ್ರತಿಷ್ಠಾನ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ- ಕಹಳೆ ನ್ಯೂಸ್

ಮಂಗಳೂರು: ಕಲ್ಕೂರ ಪ್ರತಿಷ್ಠಾನ  ವತಿಯಿಂದ ಬಾಲ ಪ್ರತಿಭೆ ಮೇದ್ಯಾ ಕೊಟ್ಟಾರಿಗೆ ಕರ್ನಾಟಕ ರಾಜ್ಯೋತ್ಸವ ಗೌರವ ಪುರಸ್ಕಾರ ನೀಡಲಾಯಿತು. ಎಳೆಯ ಪ್ರಾಯದಲ್ಲಿ ಡ್ಯಾನ್ಸಿಂಗ್ ಸಿಂಗಿಂಗ್ ರಸಪ್ರಶ್ನೆ ಇರಲಿ ಯಾವುದೇ ವಿಭಾಗದಲ್ಲಿ ಗೆದ್ದು ಸಾಧನೆ ಮಾಡಿದ ಬಾಲ ಪ್ರತಿಭೆಯನ್ನು ಗುರುತಿಸಿ ಕರ್ನಾಟಕ ರಾಜ್ಯೋತ್ಸವ ಸಾಧಕ ಪುರಸ್ಕಾರ ನೀಡಿ ಗೌರವಿಸುವ ಕಾರ್ಯಕ್ರಮ ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ನಡೆಯಿತು. ಮೇದ್ಯಾ ಕೊಟ್ಟಾರಿಯ ಸಾಧನೆ ಉರಿನಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ....
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಸಂವಾದ- ಕಹಳೆ ನ್ಯೂಸ್

ಪುತ್ತೂರು: 2020-21 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸಿಇಟಿ, ಜೆಇಇ ಮತ್ತು ನೀಟ್ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆಗೈದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಜೊತೆ ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು. ನೀಟ್ ಪರೀಕ್ಷೆಯಲ್ಲಿ ಪಿಡಬ್ಲ್ಯೂಡಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಎರಡನೇ ರ‍್ಯಾಂಕ್ ಗಳಿಸಿದ ಸಿಂಚನಾಲಕ್ಷ್ಮಿ, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 579 ನೇ ರ‍್ಯಾಂಕ್ ಗಳಿಸಿದ ಅಮೃತಾ ಭಟ್, ಇಂಜಿನಿಯರಿಂಗ್ ವಿಭಾಗದಲ್ಲಿ 677ನೇ ರ‍್ಯಾಂಕ್ ಗಳಿಸಿದ ಗಣೇಶ ಕೃಷ್ಣ,...
ಬಂಟ್ವಾಳ

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ದೀಪಾವಳಿ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ದೀಪಾವಳಿ ಕೇವಲ ಪಟಾಕಿ ಹೊಡೆಯುವುದು, ದೀಪ ಉರಿಸುವುದು ಮೇಲ್ನೋಟಕ್ಕೆ ಕಂಡುಬಂದರೂ ಈ ಹಬ್ಬದ ಹಿಂದೆ ಹಲವು ಪುರಾಣಕಾಲದ ಕಥೆ, ಸಂಪ್ರದಾಯ, ಸಂಸ್ಕೃತಿ ಇದೆ. ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು ಅಜ್ಞಾನವೆಂಬ ಕತ್ತಲೆಯನ್ನು ಅಳಿಸಿ ಬೆಳಕೆಂಬ ಜ್ಞಾನವನ್ನು ಪಸರಿಸುವ ಬೆಳಕಿನ ಹಬ್ಬವಾಗಿದೆ ಎಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು...
ಸುದ್ದಿ

ಶ್ರೀ ಕೃಷ್ಣ ಕ್ಷೇತ್ರ ಮಂಗಳೂರು ಅತ್ತಾವರ ಶ್ರೀ ಚಕ್ರಪಾಣಿ ಗೋಪಿನಾಥ ಪುಣ್ಯ ಸನ್ನಿಧಿ ನೂತನ ಆಡಳಿತ ಮಂಡಳಿಯ ಸದಸ್ಯರ ಆಯ್ಕೆ -ಕಹಳೆ ನ್ಯೂಸ್

ಮಂಗಳೂರು :ಇತಿಹಾಸ ಪ್ರಸಿದ್ಧ ಶ್ರೀ ಕೃಷ್ಣ ಕ್ಷೇತ್ರ ಮಂಗಳೂರು ಅತ್ತಾವರದ ಶ್ರೀ ಚಕ್ರಪಾಣಿ ಗೋಪಿನಾಥ ದೇವಸ್ಥಾನದ, ನೂತನ ಆಡಳಿತ ಮಂಡಳಿಯ ಸದಸ್ಯರ ಆಯ್ಕೆ ನಡೆದಿದೆ. ಆಡಳಿತ ಮೊಕ್ತೇಸರರಾಗಿ ಅನಿಲ್ ಕುಮಾರ್ ಅತ್ತಾವರ, ಪ್ರದಾನ ಅರ್ಚಕರಾಗಿ ಗೋಪಾಲ ಕೃಷ್ಣ ಭಟ್, ಮೊಕ್ತೇಸರರಾಗಿ ಮನೋಜ್ ಬೋಳಾರ್, ಮೋಹನ್ ಪೂಜಾರಿ , ವಿವೇಕ್ ಪ್ರಭು, ಅಕ್ಷಿತ್ ಅತ್ತಾವರ, ರಘುವೀರ್ ಬಾಬುಗುಡ್ಡೆ, ಶ್ರೀಮತಿ ಆಶಾ ಬೋಪಣ್ಣ, ಶ್ರೀಮತಿ ಪ್ರೇಮಾ ಎಂ ನಾಯ್ಕ್ ಆಯ್ಕೆಯಾಗಿದ್ದಾರೆ. ಚಕ್ರಪಾಣಿ ಗೋಪಿನಾಥ...
ಪುತ್ತೂರು

ಪುತ್ತೂರು: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು – ಕಹಳೆ ನ್ಯೂಸ್

ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರ್ ಕಾಯರಪ್ಪು ನಿವಾಸಿ ವೇದಾವತಿಯವರ ಮಗಳು ಯಶಸ್ವಿನಿ (21) ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕುಟುಂಬದಲ್ಲಿ ಒಬ್ಬಳೇ ಪುತ್ರಿಯಾಗಿದ್ದ ಯಶಸ್ವಿನಿ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಶಸ್ವಿನಿ ನ.8ರಂದು ಕೊನೆಯುಸಿರೆಳೆದಿದ್ದಾರೆ. ಮೃತರು ತಾಯಿ ವೇದಾವತಿಯವರನ್ನು ಅಗಲಿದ್ದಾರೆ....
1 50 51 52 53 54 126
Page 52 of 126