Thursday, January 23, 2025

archiveಕಹಳೆ ನ್ಯೂಸ್

ಪುತ್ತೂರು

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೇರಳದಲ್ಲಿ ಬಂಧಿಸಿದ ಪೊಲೀಸರು – ಕಹಳೆ ನ್ಯೂಸ್

ಪುತ್ತೂರು: 26ವರ್ಷಗಳ ಹಿಂದೆ ಸಾಲ್ಮರದ ನಿವೃತ್ತ ತಹಸೀಲ್ದಾರ್ ಲಿಂಗಪ್ಪ ಗೌಡರ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬ0ಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಕೇರಳದ ಎರ್ನಾಕುಲಂ ನಿವಾಸಿ ಜೊಡ್‌ಸನ್ ಎಂಬ ಆರೋಪಿಯು 1995ರಲ್ಲಿ ಲಿಂಗಪ್ಪ ಗೌಡರ ಮನೆಗೆ ನೀರು ಕೇಳುವ ನೆಪದಲ್ಲಿ ಹೋಗಿ ಲಿಂಗಪ್ಪ ಗೌಡರ ಪತ್ನಿ ಗೀತಾ ಅವರಿಗೆ ಚೂರಿ ತೋರಿಸಿ ಕೈಯಲ್ಲಿದ್ದ ಬಂಗಾರದ ಬಲೆಗಳನ್ನು ದರೋಡೆ ಮಾಡಿದ್ದ. ಪ್ರಕರಣದ ಆರೋಪಿ...
ಕಡಬ

ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ ಶಿವರಾಜ್‌ನ ಕಾಮಪುರಾಣ; ಯುವತಿಗೆ ಗರ್ಭಧಾನ ಮಾಡಿ ಅಬಾರ್ಷನ್ ಮಾಡಿಸಿದ್ದ ಭೂಪ.. ಕದ್ದು ಮುಚ್ಚಿ ನಡೆಯುತ್ತಿದ್ದ ಪ್ರಕರಣವನ್ನು ಬೆಳಕಿಗೆ ತಂದ ಕಹಳೆ ನ್ಯೂಸ್ ವರದಿಗಾರ- ಕಹಳೆ ನ್ಯೂಸ್

ಕಡಬ: ಕಳೆದ ಕೆಲ ದಿನಗಳ ಹಿಂದೆ ಅಪ್ರಾಪ್ತೆ ಯುವತಿಯನ್ನು ತನ್ನ ಕಾಮದಾಟಕ್ಕೆ ಬಳಸಿಕೊಂಡಿದ್ದ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ವಿರುದ್ದ ಕೊನೆಗೂ ದೂರು ದಾಖಲಾಗಿದೆ. ನ್ಯಾಯಕ್ಕಾಗಿ ಕಡಬ ಠಾಣೆಗೆ ಕುಟುಂಬ ಕಲಹ, ಪತಿಯಿಂದ ಸಮಸ್ಯೆ ಹಾಗೂ ಹಲವಾರು ಸಮಸ್ಯೆಗಳಿಂದ ನ್ಯಾಯ ಅರಸುತ್ತಾ ಬರುವ ಮಹಿಳೆಯರೇ ಈ ಪೊಲೀಸ್ ಸಿಬ್ಬಂದಿ ಶಿವರಾಜ್‌ಗೆ ಟಾರ್ಗೆಟ್ ಎನ್ನಲಾಗಿದೆ. ಇನ್ನು ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ ಇದೇ ವ್ಯಾಪ್ತಿಯ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ್ದು, ಅವಳು...
ಪುತ್ತೂರುಬಂಟ್ವಾಳ

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಬರೆಂಜ ನಿವಾಸಿ ನಾರಾಯಣ ಮೂಲ್ಯರವರ ಮಗನ ಚಿಕಿತ್ಸೆಗೆ ಆರ್ಥಿಕ ಸಹಾಯದ ಚೆಕ್ಕನ್ನು ಹಸ್ತಾಂತರಿಸಿದ ಉದ್ಯಮಿ ಅಶೋಕ್ ಕುಮಾರ್ ರೈ- ಕಹಳೆ ನ್ಯೂಸ್

ಬಂಟ್ವಾಳ : ಪುಣಚ ಗ್ರಾಮದ ಬರೆಂಜ ನಿವಾಸಿ ನಾರಾಯಣ ಮೂಲ್ಯರ ಮಗ ಶೇಖರ್ ಅವರ ಅನಾರೋಗ್ಯದ ಚಿಕಿತ್ಸೆಗೆ ಬೇಕಾದ ಆರ್ಥಿಕ ಸಹಾಯದ ಚೆಕ್ಕನ್ನು ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ ತಮ್ಮ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನೀಡಿದರು....
ಕುಂದಾಪುರ

250 ವರ್ಷ ಹಳೆಯ‘ಮಾನಸ ಚರಿತ್ರೆ’ ಎಂಬ ಅಪೂರ್ವ ಯಕ್ಷಗಾನ ಪ್ರಸಂಗದ ತಾಳೆಗರಿ ಪತ್ತೆ – ಕಹಳೆ ನ್ಯೂಸ್

ಕುಂದಾಪುರ : ಹದಿನೆಂಟನೆಯ ಶತಮಾನದ ಮೂಲಿಕೆ ವೆಂಕಣ್ಣ ಕವಿ ವಿರಚಿತ "ಮಾನಸಚರಿತ್ರೆ" ಎಂಬ ಅಪೂರ್ವ ಯಕ್ಷಗಾನ ಪ್ರಸಂಗದ ತಾಳೆಗರಿ ಪತ್ತೆಯಾಗಿದೆ. ಉಡುಪಿ ಜಿಲ್ಲೆಯ ದಿ॥ ಶಿರೂರು ಫಣಿಯಪ್ಪಯ್ಯ ಎಂಬ ಭಾಗವತರ ಸಂಗ್ರಹದಲ್ಲಿದ್ದ ತಾಳೆಗರಿ ಮತ್ತು ಅವರ ಹಸ್ತ ಪ್ರತಿ ಭಾಗವತರ ಸುಪುತ್ರ ಉಮೇಶ ಶಿರೂರು ಅವರಿಗೆ ದೊರೆತಿದೆ. ಈ ತಾಳೆಗರಿಯನ್ನು ಓದಿ ಗ್ರಂಥವನ್ನು ಸಂಪಾದಿಸುತ್ತಿರುವ ಯಕ್ಷಗಾನ ವಿದ್ದಾಂಸ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಅವರು ಇದರಲ್ಲಿ ಮನಸ್ಸಿನ ವಿವಿಧ ಭಾವನೆಗಳೇ...
ಸುದ್ದಿ

ಭಾರತ್ ಬಂದ್ ಮಾಡಿ ಈಗಷ್ಟೇ ಜನರು ಚೇತರಿಸಿಕೊಳ್ಳುತ್ತಿರುವ ಜನರಿಗೆ ತೊಂದರೆ ಕೊಡುವುದು ಸರಿಯಲ್ಲ; ಪ್ರತಿಭಟನಾಕಾರರಿಗೆ ಸಿಎಂ ಮನವಿ- ಕಹಳೆ ನ್ಯೂಸ್

ಹುಬ್ಬಳ್ಳಿ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆ ನಡೆಸುತ್ತಿರುವ ಭಾರತ್ ಬಂದ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಬಂದ್ ಹೆಸರಲ್ಲಿ ಪ್ರತಿಭಟನೆ ನಡೆಸಿ ಜನರಿಗೆ ತೊಂದರೆ ಕೊಡುತ್ತಿರುವುದು ಸರಿಯಲ್ಲ ಎಂದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಕೋವಿಡ್ ನಿಂದ ಸಾಕಷ್ಟು ಜನರು ತೊಂದರೆ ಅನುಭವಿಸಿದ್ದಾರೆ. ಈಗಷ್ಟೇ ವ್ಯಾಪಾರ, ವಹಿವಾಟು ಆರಂಭವಾಗಿದೆ. ಬಂದ್ ನಡೆಸಿ ಜನರಿಗೆ ಇನ್ನಷ್ಟು ತೊಂದರೆ ಕೊಡುವುದು ಸರಿಯಲ್ಲ. ಪ್ರತಿಭಟನಾಕಾರರು ಬೇರೆ ವೈಜ್ಞಾನಿಕ ರೀತಿಯಲ್ಲಿ ಧರಣಿ ನಡೆಸಿ...
ಸುದ್ದಿ

ಜ್ಯೋತಿ ಕೆ.ಎಂ.ಸಿ ಆಸ್ಪತ್ರೆ ಇದರ ಸಹಯೋಗದೊಂದಿಗೆ ಸುಂಕದಕಟ್ಟೆಯಲ್ಲಿರುವ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ರಕ್ತದಾನ ಶಿಬಿರ- ಕಹಳೆ ನ್ಯೂಸ್

ಮಂಗಳೂರು : ವಿಶ್ವ ಹಿಂದೂ ಪರಿಷತ್ ಬಜರಂಗದಳ ರಕ್ಷಕ್ ಶಾಖೆ ಸುಂಕದಕಟ್ಟೆ ಗುರುಪುರ ಪ್ರಖಂಡ ಹಾಗೂ ಜ್ಯೋತಿ ಕೆ.ಎಂ.ಸಿ ಆಸ್ಪತ್ರೆ ಇದರ ಸಹಯೋಗದೊಂದಿಗೆ ಸುಂಕದಕಟ್ಟೆಯಲ್ಲಿರುವ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಸಭಾಗೃಹದಲ್ಲಿ ರಕ್ತದಾನ ಶಿಬಿರವು ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ವೈ. ಭರತ್ ಶೆಟ್ಟಿಯವರು ಭಾಗವಹಿಸಿ, ಸಂಘಟನೆಯ ಯುವಕರ ಮಾದರಿ ಕಾರ್ಯವನ್ನು ಅಭಿನಂದಿಸಿದರು....
ಸುದ್ದಿ

ಕಚ್ಚೂರು ಶ್ರೀ ಮಾಲ್ತಿದೇವಿ ಬಬ್ಬುಸ್ವಾಮಿ ಮೂಲಕ್ಷೇತ್ರದ ನೂತನ ಅಧ್ಯಕ್ಷರಾದ ಶಿವಪ್ಪ ನಂತೂರು ಅವರನ್ನು ಅಭಿನಂದಿಸಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು: ಕಚ್ಚೂರು ಶ್ರೀ ಮಾಲ್ತಿದೇವಿ ಬಬ್ಬುಸ್ವಾಮಿ ಮೂಲಕ್ಷೇತ್ರ ಬಾರ್ಕೂರು ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಿವಪ್ಪ ನಂತೂರು ಅವರನ್ನು ಮಂಗಳೂರು ಉತ್ತರ ಶಾಸಕರಾದ ಡಿ.ವೇದವ್ಯಾಸ ಕಾಮತ್ ಅವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರಪಾಲಿಕೆ ಪೂಜ್ಯ ಮಹಾಪೌರರಾದ ಪ್ರೇಮಾನಂದ ಶೆಟ್ಟಿ ,ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ರೂಪ ಡಿ ಬಂಗೇರ ಮತ್ತು ಸುರೇಂದ್ರ ಜೆ, ಮಾಜಿ ಮೇಯರ್ ಆದ...
ಕ್ರೈಮ್

ಕೇಸರಿ ಶಾಲು ಧರಿಸಿದ ವಿಚಾರ; ಅಡ್ಯನಡ್ಕ ಗಡಿ ಭಾಗದಲ್ಲಿ ಹಿಂದೂ ಯುವಕನಿಗೆ ಇರಿತ; ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು -ಕಹಳೆ ನ್ಯೂಸ್

  ವಿಟ್ಲ: ಅನ್ಯಕೋಮಿನ ತಂಡವೊಂದು ಯುವಕನನ್ನು ಅಡ್ಡಗಟ್ಟಿ ದಾಳಿ ನಡೆಸಿದ ಘಟನೆ ಸೆ.26 ರಂದು ರಾತ್ರಿ ಅಡ್ಯನಡ್ಕದ ಮರಿಕ್ಕಿನಿಯಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಗಿರೀಶ್ (33) ಎಂದು ಗುರುತಿಸಲಾಗಿದೆ. ಗಿರೀಶ್ ರವರು ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ದಾರಿ ಮಧ್ಯೆ ಅಡ್ಡಗಟ್ಟಿದ ಅನ್ಯಕೋಮಿನ ತಂಡ 'ನೀನು ಕೇಸರಿ ಶಾಲು ಹಾಕಿಕೊಂಡು ಬಾರಿ ತಿರುಗಾಟ ನಡೆಸುತ್ತಿಯಾ ಎಂದು ಗದರಿಸಿ ಹಲ್ಲೆ ನಡೆಸಿದ್ದಾರೆ'. ಹಲ್ಲೆ ನಡೆಸಿದವರ ಪೈಕಿ ಮಹಮ್ಮದ್, ಅಲಿ ಎಂಬಿಬ್ಬರ ಪರಿಚಯವಿದೆ. ಮತ್ತೆ ನಾಲ್ವರನ್ನು...
1 80 81 82 83 84 126
Page 82 of 126