ಪುತ್ತೂರಿನಲ್ಲಿ ಚೀನಾದ ಧ್ವಜಕ್ಕೆ ಬೆಂಕಿಯಿಟ್ಟು ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರ ಆಕ್ರೋಶ ; ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಕರೆ ನೀಡಿದ ವಿದ್ಯಾರ್ಥಿ ಶಕ್ತಿ – ಕಹಳೆ ನ್ಯೂಸ್
ಪುತ್ತೂರು: ಲಡಾಕ್‌ನ ಗಲ್ವಾನ್ ಕಣಿವೆಯಲ್ಲಿ ಚೀನಾದ ಜತೆಗಿನ ಗಡಿ ಸಂಘರ್ಷದಲ್ಲಿ ಕರ್ನಲ್ ಸೇರಿದಂತೆ 20 ಯೋಧರು ಹುತಾತ್ಮರಾದ ಬಳಿಕ ದೇಶದಲ್ಲಿ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸಬೇಕು ಎಂಬ ಒತ್ತಡ ಹೆಚ್ಚುತ್ತಿದೆ. ಪುತ್ತೂರಿನಲ್ಲೂ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಜೊತೆಗೆ ಜೂ. 18ರಂದು ಮುಸ್ಸಂಜೆ ಇಲ್ಲಿನ ಕಿಲ್ಲೆ ಮೈದಾನದಲ್ಲಿರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಎದುರು ಎಬಿವಿಪಿ ಕಾರ್ಯಕರ್ತರು ಚೀನಾದ ಧ್ವಜಕ್ಕೆ ಬೆಂಕಿಯಿಟ್ಟು ಆಕ್ರೋಶ ವ್ಯಕ್ತಪಡಿಸಿದರು. ಸಂಘಪರಿವಾರದ ಹಿರಿಯ ಕಾರ್ಯಕರ್ತ ಚಂದ್ರಶೇಖರ್ ಅವರು ಹುತಾತ್ಮ...