Saturday, November 23, 2024

archiveAyodhya

ಸುದ್ದಿ

ಅಯೋಧ್ಯೆ ರಾಮಮಂದಿರ ವಿವಾದ, ತ್ವರಿತ ವಿಚಾರಣೆ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್

ನವದೆಹಲಿ: ಅಯೋಧ್ಯೆಯ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಅಖಿಲಾ ಭಾರತ ಹಿಂದೂ ಮಹಾಸಭಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ, ಈಗಾಗಲೇ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪನ್ನು ನೀಡಿದ್ದೇವೆ. ಅಲ್ಲದೇ ಅರ್ಜಿಯ ವಿಚಾರಣೆಗಳನ್ನು ಜನವರಿಯಲ್ಲಿ ಪರಿಶೀಲಿಸುತ್ತೇವೆ. ಹೀಗಾಗಿ ಇದಕ್ಕೆ ಸಂಬಂಧಿಸಿದ ಯಾವುದೇ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ಸಾಧ್ಯವಿಲ್ಲವೆಂದು ಪೀಠ ನಿರಾಕರಿಸಿದೆ. ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿ ಎಸ್.ಕೆ.ಕೌಲ್ ಅವರಿದ್ದ...
ಸುದ್ದಿ

ಅಯೋಧ್ಯೆ ವಿವಾದ: ಜನವರಿ ಮೊದಲ ವಾರದಲ್ಲಿ ನಿರ್ಧಾರ – ಕಹಳೆ ನ್ಯೂಸ್

ಅಯೋಧ್ಯೆ: ಅಯೋಧ್ಯೆ ವಿವಾದ ಸದ್ಯಕ್ಕಂತೂ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ. ವಿವಾದಕ್ಕೆ ಸಂಬಂಧಿಸಿದ 14 ದೂರುಗಳ ವಿಚಾರಣೆಯ ದಿನಾಂಕವನ್ನು ಜನವರಿಯಲ್ಲಿ ನಿಗದಿಗೊಳಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ಸೋಮವಾರ ಈ ಸಂಬಂಧ ನಾಲ್ಕು ನಿಮಿಷಗಳವರೆಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಜನವರಿ ಮೊದಲ ವಾರದಲ್ಲಿ ಈ ಬಗ್ಗೆ ನಿರ್ಧಾರವಾಗಲಿದೆ ಎಂದಿದೆ. ಇದರಿಂದಾಗಿ ಬಿಜೆಪಿ ಅಧ್ಯಾದೇಶದ ಮೂಲಕ ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಮಾಡಿಕೊಡುತ್ತದೆಯೇ ಎಂಬ ಕುತೂಹಲ ಇನ್ನಷ್ಟು ಹೆಚ್ಚಾಗಿದೆ. ರಾಮಮಂದಿರ ವಿಚಾರದಲ್ಲಿ ಹಿಂದೂಗಳ ಸಹನೆ...
ಸುದ್ದಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ: ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್

ದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಲವಾರು ತಕರಾರು ವಾದಗಳು ಸೃಷ್ಟಿಯಾಗ್ತಾ ಇದ್ದು, ಸಾಮರಸ್ಯದ ಸ್ಥಳವಾಗಬೇಕಾಗಿದ್ದ ಜಗಳದ ಗೂಡಾಗಿದೆ. ಈ ಹಿನ್ನಲೆಯಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ. 2010 ರಲ್ಲಿ ಅಯೋಧ್ಯೆ ಜಮೀನನ್ನು ಮೂರು ಭಾಗಗಳಾಗಿ ವಿಂಗಡಿಸಿ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು. ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ ಈ ಅರ್ಜಿಯ ವಿಚಾರಣೆ ನಡೆಸಲಿದೆ....