Recent Posts

Sunday, January 19, 2025

archivecoalition government

ಸುದ್ದಿ

ರೈತರ ಸಮಸ್ಯೆಗೆ ಸ್ಪಂದಿಸುವುದಕ್ಕಿಂತ ಕುರ್ಚಿ ಉಳಿಸಿಕೊಳ್ಳುವುದೇ ಕುಮಾರಸ್ವಾಮಿಗೆ ಪ್ರಮುಖವಾಗಿದೆ: ಡಿ.ವಿ.ಎಸ್ – ಕಹಳೆ ನ್ಯೂಸ್

ಮಂಗಳೂರು: ರೈತರ ಸಮಸ್ಯೆಗೆ ಸ್ಪಂದಿಸುವುದಕ್ಕಿಂತ ಅಲುಗಾಡುತ್ತಿರುವ ಅವರ ಕುರ್ಚಿ ಉಳಿಸಿಕೊಳ್ಳುವುದೇ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಪ್ರಮುಖವಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು. ಮಂಗಳೂರಿನಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿ, ಈ ಸರ್ಕಾರಕ್ಕೆ ರೈತರ ಸಮಸ್ಯೆ ಹಾಗೆಯೇ ಉಳಿಯಬೇಕು. ರೈತ ಅಂತ ಹೇಳಿದ ತಕ್ಷಣ ಅವರ ಮೇಲೆ ಬಾಯಿಗೆ ಬಂದ ಹಾಗೆ ಮಾತನಾಡುವುದು, ಹಾದಿ ತಪ್ಪಿಸುವುದು ಮಾಡುತ್ತಿದ್ದಾರೆ. ಕಾರ್ಖಾನೆ ಮಾಲೀಕರಾಗಿರುವ ಸಚಿವರು ಮುಖ್ಯಮಂತ್ರಿ ಕರೆದ ಸಭೆಗೆ ಬರಲಿಲ್ಲ. ನಿಮಗೆ ನಾಚಿಕೆಯಾಗ್ಬೇಕು, ಅಂತಹ ಸಚಿವರನ್ನು...
ರಾಜಕೀಯಸುದ್ದಿ

ಮೊದಲು ರೈತರ ಸಮಸ್ಯೆ ಬಗೆಹರಿಸಿ, ರಾಜ್ಯ ಸರ್ಕಾರಕ್ಕೆ ಬಿಎಸ್​ವೈ ಎಚ್ಚರಿಕೆ – ಕಹಳೆ ನ್ಯೂಸ್

ಬೆಂಗಳೂರು:  ಸಿಎಂ ಆದಷ್ಟು ಬೇಗ ರೈತರಿಗೆ ಕಬ್ಬಿನ ಬಾಕಿ ಕೊಡಿಸುವ ತೀರ್ಮಾನ ಮತ್ತು ಕಬ್ಬಿಗೆ ಬೆಂಬಲ ಬೆಲೆ ನೀಡದೇ ಇದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ. ಮೊದಲು ರೈತರ ಸಮಸ್ಯೆ ಬಗೆಹರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಂದುವೇಳೆ ಸಿಎಂ ಆದಷ್ಟು ಬೇಗ ರೈತರಿಗೆ ಕಬ್ಬಿನ ಬಾಕಿ ಕೊಡಿಸುವ ತೀರ್ಮಾನ ಮತ್ತು ಕಬ್ಬಿಗೆ ಬೆಂಬಲ ಬೆಲೆ ನೀಡದೇ ಇದ್ದರೆ ರಾಜ್ಯಾದ್ಯಂತ ಉಗ್ರ...
ಸುದ್ದಿ

ಪ್ರವಾಸೋದ್ಯಮ ಅಭಿವೃದ್ಧಿ: ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ: ಡಿ.ಕೆ.ಶಿ – ಕಹಳೆ ನ್ಯೂಸ್

ಮಂಡ್ಯ ಜಿಲ್ಲೆಯಲ್ಲಿರುವ ಕೃಷ್ಣರಾಜ ಸಾಗರದ ಬಳಿ ಕಾವೇರಿ ಪ್ರತಿಮೆ ನಿರ್ಮಾಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ. ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರಕಾರದ ಮೊದಲ ಬಜೆಟ್‌ನಲ್ಲಿ ಕೆಆರ್‌ಎಸ್ ಬಳಿ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸುವುದಾಗಿ ಘೋಷಿಸಲಾಗಿತ್ತು. ನಮ್ಮಲ್ಲಿರುವ ವನ್ಯಜೀವಿ, ಅರಣ್ಯ ಸಂಪತ್ತು...
ರಾಜಕೀಯಸುದ್ದಿ

ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಾಂಗ್ರೆಸ್ ಸೇರ್ಪಡೆ: ಆಕ್ರೋಶ ವ್ಯಕ್ತಪಡಿಸಿದ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಉಡುಪಿ: ರಾಮನಗರ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುರುವಾರ ಉಡುಪಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ರಾಮನಗರ ಬಿಜೆಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದಾರೆ ಎಂಬ ಮಾಹಿತಿ ಇದೆ. ಇದು ಬಹಳ ಆತಂಕಕಾರಿ ವಿಚಾರ. ಕುಮಾರಸ್ವಾಮಿ ಮತ್ತು ಡಿಕೆಶಿಗೆ ಒಂದು ಪ್ರಶ್ನೆ ಕೇಳುತ್ತೇನೆ‌. ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ಎದುರಿಸುವ ಧೈರ್ಯ ಇಲ್ಲವೇ? ಅಭ್ಯರ್ಥಿಯನ್ನೇ ಸೆಳೆದಿರುವುದು ಪ್ರಜಾಪ್ರಭುತ್ವಕ್ಕೆ...
ಸುದ್ದಿ

ಬಳ್ಳಾರಿ ಲೋಕಸಭಾ ಉಪಚುನಾವಣಾ ಪ್ರಚಾರ: ಡಿ ಕೆ ಶಿ ಬರುತ್ತಿದ್ದಂತೆ ಜಾರಕಿಹೊಳಿ ಜೂಟ್ – ಕಹಳೆ ನ್ಯೂಸ್

ಬೆಂಗಳೂರು: ಬಳ್ಳಾರಿ ಲೋಕಸಭಾ ಉಪಚುನಾವಣಾ ಪ್ರಚಾರಕ್ಕಾಗಿ ಕೂಡ್ಲಿಗಿಗೆ ಡಿ ಕೆ ಶಿವಕುಮಾರ್ ಬರುತ್ತಿದ್ದಂತೆಯೇ, ರಮೇಶ್ ಜಾರಕಿಹೊಳಿ ಅಲ್ಲಿಂದ ಹೊರಟು ಹೋಗಿದ್ದಾರೆ. ಇದರಿಂದ, ಡಿಕೆಶಿ ಸ್ಥಳೀಯ ಕಾಂಗ್ರೆಸ್ ಮುಖಂಡರ ಮುಂದೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಬೆಳಗಾವಿ ರಾಜಕಾರಣದಲ್ಲಿನ ಹಸ್ತಕ್ಷೇಪ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರದಲ್ಲಿ ಡಿ ಕೆ ಶಿವಕುಮಾರ್ ಮತ್ತು ಜಾರಕಿಹೊಳಿ ಸಹೋದರರ ನಡುವಿನ ಮನಸ್ತಾಪ, ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದ ಬುಡವನ್ನೇ ಅಲುಗಾಡಿಸಿತ್ತು. ರಮೇಶ್ ಜಾರಕಿಹೊಳಿಯನ್ನು ಕರೆಸಿ ವರಿಷ್ಠರು ಮಾತುಕತೆ...
ಸುದ್ದಿ

ನವಂಬರ್ 11 ರ ನಂತರ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ಇನ್ನೇನು ಸಚಿವ ಸಂಪುಟ ವಿಸ್ತರಣೆ ಆಗಿಯೇ ಹೋಯಿತು ಎಂದು ಅಂದುಕೊಳ್ಳುತ್ತಿರುವಾಗ ಉಪಚುನಾವಣೆ ದಿನಾಂಕ ಘೋಷಣೆಯಾಗಿ ಸಚಿವ ಸಂಪುಟ ವಿಸ್ತರಣೆಗೆ ಮಹೂರ್ತ ಮುಂದಕ್ಕೆ ಹೋಗಿತ್ತು. ಈಗ ಬಹುತೇಕ ನವಂಬರ್ 11 ರ ನಂತರ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಸಚಿವ ಸ್ಥಾನಕ್ಕಾಗಿ 30 ಕ್ಕೂ ಹೆಚ್ಚು ಮಂದಿ ಸಮ್ಮಿಶ್ರ ಸರ್ಕಾರದ ಉಭಯ ಪಕ್ಷಗಳಲ್ಲಿ ಲಾಭಿ ನಡೆಸಿದ್ದಾರೆ. ಇದು ಕಾಂಗ್ರೆಸಗನಲ್ಲಿ ಎನ್ನುವುದು ವಿಶೇಷವಾಗಿದೆ. ಉಪ ಚುನಾವಣೆಯ ಬಿಜಿಯಲ್ಲಿರುವ...
ರಾಜಕೀಯಸುದ್ದಿ

ಪಕ್ಷದ ಕೆಲಸ ಮಾಡುವ ಸದುದ್ದೇಶಕ್ಕಾಗಿಯೇ ರಾಜೀನಾಮೆ: ಎನ್.ಮಹೇಶ್

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಎನ್.ಮಹೇಶ್ ಅವರು ಹಠಾತ್ತನೆ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಎಸ್‌ಪಿ ಪಕ್ಷದಿಂದ ಅವರು ಆರಿಸಿ ಬಂದಿದ್ದರು. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ. ನಾಲ್ಕು ತಿಂಗಳಿಂದ ಸಚಿವನಾಗಿ ಕೆಲಸ ಮಾಡಿದ್ದೇನೆ, ಇದರ ನಡುವೆ ಪಕ್ಷದ ಕೆಲಸ, ಕ್ಷೇತ್ರದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಹಾಗಾಗಿ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೆ ಮಾಯಾವತಿ ಅವರು ಕಾಂಗ್ರೆಸ್ ಜೊತೆ ಮೈತ್ರಿಯನ್ನು ನಿರಾಕರಿಸಿದ್ದರು. ಅಲ್ಲದೆ ಕಾಂಗ್ರೆಸ್...
ರಾಜಕೀಯಸುದ್ದಿ

ಸಚಿವ ಎನ್ ಮಹೇಶ್ ರಾಜೀನಾಮೆ: ಮೈತ್ರಿಗೂ ಘಟನೆಗೂ ಸಂಬಂಧವಿಲ್ಲ: ಬಂಡೆಪ್ಪ ಕಾಶಂಪರ್ – ಕಹಳೆ ನ್ಯೂಸ್

ಚಿಕ್ಕಮಗಳೂರು: ಸಚಿವ ಎನ್ ಮಹೇಶ್ ರಾಜೀನಾಮೆ ಮೈತ್ರಿ ಸರ್ಕಾರಕ್ಕೆ ಇನ್ನೊಂದು ತಲೆನೋವಾಗಿದೆ. ಇದರ ಬೆನ್ನಲ್ಲೆ ಸಹಕಾರ ಸಚಿವ ಈ ಘಟನೆಯ ಕುರಿತು ಮಾತನಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಚಿವ ಬಂಡೆಪ್ಪ ಕಾಶಂಪರ್, ಮಹೇಶ್ ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಇಲ್ಲ. ಹೈಕಮಾಂಡ್ ಆದೇಶದ ಮೇಲೆ ಅವರು ರಾಜೀನಾಮೆ ನಿರ್ಧಾರ ತೆಗೆದುಕೊಂಡಿರಬಹುದು. ದೇವೇಗೌಡ ಹಾಗೂ ಮಾಯವತಿಯವರು ಚರ್ಚಿಸಿ ಸರಿಪಡಿಸುತ್ತಾರೆ. ಮೈತ್ರಿಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ....
1 2
Page 1 of 2