ಮಂಗಳೂರಿನ ಪುರಭವನದಲ್ಲಿ ಗಾಂಧಿ ಜಯಂತಿ ಆಚರಣೆ – ಕಹಳೆ ನ್ಯೂಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗಾಂಧಿ ಜಯಂತಿಯನ್ನ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇದರ ಸಂಯುಕ್ತಾಶ್ರಯದಲ್ಲಿ ಗಾಂಧಿ ಜನ್ಮದಿನಾಚರಣೆ ಕಾರ್ಯಕ್ರಮ ನಡಿಯಿತು. ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಿ.ವೇದವ್ಯಾಸ ಕಾಮತ್‌ರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಪುರಭವನದಲ್ಲಿ ಈ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಉಸ್ತುವಾರಿ ಸಚಿವ ಯು.ಟಿ.ಖಾದರ್...