ಅವ್ಯವಹಾರದ ಶಂಕೆ: ಗ್ರಾ.ಪಂ, ಕಳಸ ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ – ಕಹಳೆ ನ್ಯೂಸ್
ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ಮತ್ತು ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ವರದಿಯಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೊರನಾಡು ಗ್ರಾಪಂ, ಕಳಸ ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನಾಡಕಚೇರಿ, ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರದ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ದೂರು ನೀಡಿದ್ದ ಹಿನ್ನಲೆಯಲ್ಲಿ ಅಧಿಕಾರಿಗಳು ಗ್ರಾಪಂ ಅಧ್ಯಕ್ಷೆ, ಸದಸ್ಯರು, ಅಧಿಕಾರಿಗಳ ವಿಚಾರಣೆ ನಡೆಸಿ ದಾಖಲೆಗಳನ್ನ ಪರಿಶೀಲಿಸಿದ್ದಾರೆ....