ಜಿಎಸ್ಟಿ ಪರಿಹಾರ ಅನುದಾನ ಅವಧಿ 2025 ರವರೆಗೆ ವಿಸ್ತರಿಸಲು ಸಿಎಂ ಮನವಿ – ಕಹಳೆ ನ್ಯೂಸ್
ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‌ಟಿ) ಅನುಷ್ಠಾನದಲ್ಲಿ ಕನಾಟಕ ರಾಜ್ಯವು ದೇಶದ ಉಳಿದ ರಾಜ್ಯಗಳಿಗೆ ಮಾದರಿಯಾಗಿದೆ. ಆದರೂ, ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪರೋಕ್ಷ ತೆರಿಗೆ ಸಂಗ್ರಹಣೆಯಾಗುತ್ತಿಲ್ಲ. ಇದರಿಂದಾಗಿ ರಾಜ್ಯದ ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅನುದಾನದ ಕೊರತೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಜಿಎಸ್ಟಿ ಪರಿಹಾರದ ಅನುದಾನದ ನೆರವನ್ನು 2025 ರವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಇಂದು ಕೇಂದ್ರ ವಿತ್ತ ಸಚಿವ...