Friday, November 22, 2024

archiveHighcourt

ಸುದ್ದಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ: ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್

ದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಲವಾರು ತಕರಾರು ವಾದಗಳು ಸೃಷ್ಟಿಯಾಗ್ತಾ ಇದ್ದು, ಸಾಮರಸ್ಯದ ಸ್ಥಳವಾಗಬೇಕಾಗಿದ್ದ ಜಗಳದ ಗೂಡಾಗಿದೆ. ಈ ಹಿನ್ನಲೆಯಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ. 2010 ರಲ್ಲಿ ಅಯೋಧ್ಯೆ ಜಮೀನನ್ನು ಮೂರು ಭಾಗಗಳಾಗಿ ವಿಂಗಡಿಸಿ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು. ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ ಈ ಅರ್ಜಿಯ ವಿಚಾರಣೆ ನಡೆಸಲಿದೆ....
ಸುದ್ದಿ

ಜನಾರ್ಧನ ಪೂಜಾರಿ ವಿರುದ್ಧದ ಚುನಾವಣಾ ಕೇಸನ್ನು ರದ್ದು ಮಾಡಿದ ಹೈಕೋರ್ಟ್ – ಕಹಳೆ ನ್ಯೂಸ್

ಮಂಗಳೂರು: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ಸಿಗ ಜನಾರ್ಧನ ಪೂಜಾರಿ ವಿರುದ್ಧದ ಚುನಾವಣಾ ಕೇಸನ್ನ ಹೈಕೋರ್ಟ್ ರದ್ದುಗೊಳಿಸಿದೆ. 2014 ರ ಲೋಕಸಭಾ ಚುನಾವಣೆಯಲ್ಲಿ ಜನಾರ್ಧನ ಪೂಜಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದೇ ವೇಳೆ ಪೂಜಾರಿಯವ್ರು ನಾಮಪತ್ರ ಸಲ್ಲಿಸಿದ ನಂತರ ಚುನಾವಣಾ ಆಯೋಗದ ಅನುಮತಿ ಇಲ್ದೇ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನನ್ವಯ...
ಸುದ್ದಿ

ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಅರ್ಜಿ ಹೈಕೋರ್ಟ್ ತಿರಸ್ಕಾರ – ಕಹಳೆ ನ್ಯೂಸ್

ಕಾಸರಗೋಡು: ಅಪ್ರಾಪ್ತ ಬಾಲಕಿಯ ಮೇಲೆ ಮಹಿಳೆ ಹಾಗೂ ಆಕೆಯ ಪತಿ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣವೊಂದು ಬದಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಹಿಳೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದರಿಂದ ಕಾಸರಗೋಡು ಡಿವೈಎಸ್ ಪಿ ಕಚೇರಿಯಲ್ಲಿ ಶರಣಾಗಿದ್ದಾಳೆ. ಪೋಕ್ಸೋ ಕಾಯ್ದೆಯಂತೆ ಈಕೆ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಳು. ಬದಿಯಡ್ಕದ ಝುಹರಾಬಿ (38) ಆರೋಪಿಯಾಗಿದ್ದಾಳೆ. ಈಕೆಯನ್ನು ಬಂಧಿಸಿ ಬುಧವಾರ ಸಂಜೆ ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈಕೆಯ...