ಡಿ.1ರಂದು ಜೋಡುಕರೆ ಬಯಲು ಕಂಬಳ, ಕಾನೂನಿನ ಚೌಕಟ್ಟಿನೊಳಗೆ ಸಂಘಟಿಸಲಾಗುವುದು: ಉಮಾನಾಥ ಕೋಟ್ಯಾನ್ – ಕಹಳೆ ನ್ಯೂಸ್
ಮೂಡುಬಿದಿರೆ : ಇಲ್ಲಿನ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ 16ನೇ ವರ್ಷದ ಹೊನಲು ಬೆಳಕಿನ ಜೋಡುಕರೆ ಬಯಲು ಕಂಬಳ ಡಿ.1ರಂದು ನಡೆಯಲಿದ್ದು, ಅಹಿಂಸತ್ಮಾಕವಾಗಿ ಕಾನೂನಿನ ಚೌಕಟ್ಟಿನ ಒಳಗೆ ನಿಗದಿತ ಕಾಲಮಿತಿಯೊಂದಿಗೆ ಸಂಘಟಿಸಲಾಗುವುದು ಎಂದು ಕಂಬಳ ಸಮಿತಿ ಅಧ್ಯಕ್ಷ ಶಾಸಕ ಉಮಾನಾಥ ಎ.ಕೋಟ್ಯಾನ್ ಅವರು ತಿಳಿಸಿದ್ದಾರೆ. ಅವರು ಗುರುವಾರ ಕಡಲಕಕೆರೆಯ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಶನಿವಾರದಂದು ಬೆಳಿಗ್ಗೆ...