Friday, September 20, 2024

archiveLandslide

ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಕುಪ್ಪೆಪದವಿನಲ್ಲಿ ರಸ್ತೆ ಬದಿಯಲ್ಲಿ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ – ಕಹಳೆ ನ್ಯೂಸ್

ಮಂಗಳೂರು: ರಸ್ತೆ ಬದಿಯಲ್ಲಿ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ವೇಳೆ ಗುಡ್ಡ ಕುಸಿದು ಮಣ್ಣಿನೊಳಗೆ ಸಿಲುಕಿದ ವ್ಯಕ್ತಿಯನ್ನು ಸ್ಥಳೀಯರು ಹರಸಾಹಸ ಪಟ್ಟು ರಕ್ಷಿಸಿದ ಘಟನೆ ಮಂಗಳೂರು ತಾಲೂಕಿನ ಕುಪ್ಪೆಪದವು ಬಳಿಯ ನೊನಾಲು ಎಂಬಲ್ಲಿ ನಡೆದಿದೆ. ಮಣ್ಣಿನಡಿ ಸಿಲುಕಿದ್ದ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನಿವಾಸಿ ರಾಜೇಶ್ ಪೂಜಾರಿ (28)ಯನ್ನು ರಕ್ಷಿಸಲಾಗಿದ್ದು, ಕುಪ್ಪೆಪದವಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನೊನಾಲು-ಕುಕ್ಕಟ್ಟೆ-ಗಂಜಿಮಠ ರಸ್ತೆಯಲ್ಲಿ ಗುಡ್ಡ ಕುಸಿಯದಂತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ರಾಜೇಶ್ ಮತ್ತು...
ಸುದ್ದಿ

ಮಹಾಮಳೆಗೆ ತತ್ತರಿಸಿರುವ ಮಡಿಕೇರಿಯಲ್ಲಿ ಸರಳ ದಸರಾ ಆಚರಣೆಗೆ ಸಾ ರಾ ಮಹೇಶ್ ಮನವಿ – ಕಹಳೆ ನ್ಯೂಸ್

ಮೈಸೂರು ದಸರಾಕ್ಕೆ ಯಾವ ರೀತಿಯ ಇತಿಹಾಸವಿದೆಯೋ ಅದೇ ರೀತಿ ಮಡಿಕೇರಿ ದಸರಾಗೂ ತನ್ನದೇ ಆದ ಇತಿಹಾಸವಿದೆ. ಜತೆಗೆ ಎಂತಹ ಸಂದರ್ಭದಲ್ಲಿಯೂ ಇಲ್ಲಿಯ ಆಚರಣೆ ನಿಂತಿಲ್ಲ. ಹೀಗಿರುವಾಗ ಈ ಬಾರಿ ಮಹಾಮಳೆ ಮತ್ತು ಭೂಕುಸಿತದಿಂದ ತತ್ತರಿಸಿರುವ ಮಡಿಕೇರಿಯಲ್ಲಿ ದಸರಾವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ನಡೆಸಲು ತೀರ್ಮಾನಿಸಲಾಗಿದೆ. ಮಡಿಕೇರಿ ದಸರಾ ಆಚರಣೆಗೆ 50 ಲಕ್ಷ ರೂ. ಮತ್ತು ಗೋಣಿಕೊಪ್ಪ ದಸರಾಗೆ 25 ಲಕ್ಷ ರೂ. ಅನುದಾನ ಬಿಡುಗಡೆ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ...