ಎಂಬಿಬಿಎಸ್ ವಿದ್ಯಾರ್ಥಿಗಳ ಹೆಚ್ಚುವರಿ ಶುಲ್ಕವನ್ನು ವಾಪಸ್ ನೀಡುವಂತೆ ಹೈಕೋರ್ಟ್ ಆದೇಶ – ಕಹಳೆ ನ್ಯೂಸ್
ಎಂಬಿಬಿಎಸ್ ವಿದ್ಯಾರ್ಥಿಗಳು ನೀಡಿರುವ ಹೆಚ್ಚುವರಿ ಶುಲ್ಕವನ್ನು ವಾಪಸ್ ನೀಡುವಂತೆ ಎರಡು ಕಾಲೇಜುಗಳಿಗೆ ಹೈಕೋರ್ಟ್ ಆದೇಶಿಸಿದೆ. ಎಂಬಿಬಿಎಸ್ ಕೋರ್ಸ್ನ ಪ್ರವೇಶ ಪ್ರಕ್ರಿಯೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಸಂಗ್ರಹಿಸಿದ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗ ಈಸ್ಟ್ ಪಾಯಿಂಟ್ ವೈದ್ಯಕೀಯ ಕಾಲೇಜುಗಳು ಶೇ.6 ರಷ್ಟು ಬಡ್ಡಿಯೊಂದಿಗೆ ಹೆಚ್ಚುವರಿ ಶುಲ್ಕ ಮರು ಪಾವತಿಸುವಂತೆ ಆದೇಶಿಸಲಾಗಿದೆ. ರಾಜ್ಯ ಸರ್ಕಾರದಿಂದ ನೇಮಕವಾಗಿರುವ ನ್ಯಾ. ಬಿ ಮನೋಹರ್ ನೇತೃತ್ವದ ಪ್ರವೇಶ ಮೇಲ್ವಿಚಾರಣಾ ಸಮಿತಿ...